Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋವಿಡ್ ಮೂರನೇ ಅಲೆ ಎದುರಿಸಲು ಎಲ್ಲಾ...

ಕೋವಿಡ್ ಮೂರನೇ ಅಲೆ ಎದುರಿಸಲು ಎಲ್ಲಾ ಮುಂಜಾಗ್ರತಾ ಕ್ರಮ: ಮುಖ್ಯಮಂತ್ರಿ ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ12 Jun 2021 7:19 PM IST
share
ಕೋವಿಡ್ ಮೂರನೇ ಅಲೆ ಎದುರಿಸಲು ಎಲ್ಲಾ ಮುಂಜಾಗ್ರತಾ ಕ್ರಮ: ಮುಖ್ಯಮಂತ್ರಿ ಯಡಿಯೂರಪ್ಪ

ಶಿವಮೊಗ್ಗ: ಕೋವಿಡ್ ಮೂರನೇ ಅಲೆಯನ್ನು ಎದುರಿಸಲು ಸರ್ಕಾರ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಜನರು ಭೀತಿಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.

ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಕೋವಿಡ್ ನಿರ್ವಹಣೆ ಹಾಗೂ ವಿವಿಧ ಅಭಿವೃದ್ದಿ ಚಟುವಟಿಕೆಗಳ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಮೂರನೇ ಅಲೆ ಕುರಿತು ಅಧ್ಯಯನ ನಡೆಸಿ ವರದಿಯನ್ನು ಸಲ್ಲಿಸಲು ಸರ್ಕಾರ ಡಾ.ದೇವಿಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ ತಜ್ಞರ ಸಮಿತಿಯನ್ನು ಈಗಾಗಲೇ ರಚಿಸಿದೆ. ಈ ಸಮಿತಿ ಮೂರ್ನಾಲ್ಕು ದಿನಗಳಲ್ಲಿ ವರದಿಯನ್ನು ಸಲ್ಲಿಸಲಿದ್ದು, ಸಮಿತಿಯ ವರದಿಯ ಆಧಾರದಲ್ಲಿ ಸೂಕ್ತ  ಕ್ರಮಗಳನ್ನು ಕೈಗೊಳ್ಳಲಾಗುವುದು. ಮೂರನೇ ಅಲೆಯಿಂದ ಮಕ್ಕಳಿಗೆ ತೊಂದರೆಯಾಗಲಿದೆ ಎಂಬ ವರದಿಗಳಿದ್ದು, ಕೋವಿಡ್‍ನಿಂದ ಮಕ್ಕಳನ್ನು ರಕ್ಷಿಸಲು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಮಾಡಲಾಗುವುದು. ಪ್ರತಿ ಜಿಲ್ಲೆಯಲ್ಲಿ ಕನಿಷ್ಟ 75 ಮಕ್ಕಳ ಐಸಿಯು ಬೆಡ್ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ,.5ಕ್ಕಿಂತ ಕೆಳಗೆ ಇಳಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ. ವೈದ್ಯಕೀಯ ಸೇವೆ ಉತ್ತಮಪಡಿಸಲು ಸರ್ಕಾರ ಹಲವು ದಿಟ್ಟ ಹೆಜ್ಜೆ ಇರಿಸಿದೆ. ಇದೇ ಮೊದಲ ಬಾರಿಗೆ 1780 ವೈದ್ಯರನ್ನು ರಾಜ್ಯದಲ್ಲಿ ನೇರ ನೇಮಕಾತಿ ಮೂಲಕ ಪಡೆದುಕೊಳ್ಳಲಾಗಿದೆ. ಶಿವಮೊಗ್ಗ ಜಿಲ್ಲೆಗೆ 83 ವೈದ್ಯರ ನೇಮಕ ಮಾಡಲಾಗಿದ್ದು, ಇದರಲ್ಲಿ 29 ಮಂದಿ ತಜ್ಞ ವೈದ್ಯರಿದ್ದಾರೆ. ಜಿಲ್ಲೆಯ ವೈದ್ಯಕೀಯ ಕ್ಷೇತ್ರದ ಸುಧಾರಣೆ ಕುರಿತು ಪರಿಶೀಲನೆ ನಡೆಸಲು ಜಿಲ್ಲೆಗೆ ಮತ್ತೊಮ್ಮೆ ಭೇಟಿ ನೀಡಲು ಆರೋಗ್ಯ ಸಚಿವರಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ತಜ್ಞರ ಸಮಿತಿಯಿಂದ ಆಡಿಟ್: ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಸಾವುಗಳ ಕುರಿತು ಈಗಾಗಲೆ ಜಿಲ್ಲಾ ಮಟ್ಟದಲ್ಲಿ ಆಡಿಟ್ ನಡೆಸಿ ವರದಿಯನ್ನು ಸಲ್ಲಿಸಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಮರಣ ಪ್ರಮಾಣ ಹೆಚ್ಚಾಗಿರಲು ಕಾರಣವನ್ನು ಕಂಡುಕೊಳ್ಳಲು ಬೆಂಗಳೂರಿನಿಂದ ತಜ್ಞರ ಸಮಿತಿಯನ್ನು ಕಳುಹಿಸಲಾಗುವುದು. ಜಿಲ್ಲೆಯಲ್ಲಿ ಆಸ್ಪತ್ರೆಗೆ ದಾಖಲಾದ 72ಗಂಟೆಯೊಳಗೆ ಸಾವಿಗೀಡಾದವರ ಪ್ರಮಾಣ ಹೆಚ್ಚಾಗಿದ್ದು, ಈ ಕುರಿತು ಸಮಿತಿ ಪರಿಶೀಲನೆ ನಡೆಸಿ ವರದಿಯನ್ನು ನೀಡಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ಸಭೆಯಲ್ಲಿ ತಿಳಿಸಿದರು.

ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಪ್ರಾಥಮಿಕ ಸಂಪರ್ಕ ಹೊಂದಿರುವವರ ಕೋವಿಡ್ ಪರೀಕ್ಷೆ ಪ್ರಮಾಣವನ್ನು ಹೆಚ್ಚಿಸಬೇಕು. ಯಾವುದೇ ಕಾರಣಕ್ಕೂ ಹೋಂ ಐಸೋಲೇಷನ್‍ಗೆ ಅವಕಾಶ ನೀಡದರೆ ಕೋವಿಡ್ ಕೇರ್ ಸೆಂಟರ್‍ಗಳಲ್ಲಿಯೇ ಪೀಡಿತರಿಗೆ ಚಿಕಿತ್ಸೆ ಒದಗಿಸಬೇಕು. ಶಿವಮೊಗ್ಗ ವೈದ್ಯಕೀಯ ಕಾಲೇಜಿನಲ್ಲಿ ಬೆಡ್‍ಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದ್ದು, ಇದಕ್ಕೆ ಅನುಗುಣವಾಗಿ ವೈದ್ಯರು ಸೇರಿದಂತೆ ಮೂಲಸೌಲಭ್ಯಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮಾತನಾಡಿ, ಶಿವಮೊಗ್ಗ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯರು, ನರ್ಸ್‍ಗಳು ಹಾಗೂ ಡಿ ಗ್ರೂಪ್ ಸಿಬ್ಬಂದಿ ಸಂಖ್ಯೆಯನ್ನು ಹೆಚ್ಚಿಸುವ ಅನಿವಾರ್ಯತೆಯಿದ್ದು, ಈ ಕುರಿತು ಆದಷ್ಟು ಬೇಗನೇ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಜಿಲ್ಲೆಯ ಕೋವಿಡ್ ನಿರ್ವಹಣೆ ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳ ಪ್ರಗತಿ ಕುರಿತು ಮಾಹಿತಿಯನ್ನು ನೀಡಿದರು.

ನಗರಾಭಿವೃದ್ಧಿ ಸಚಿವ ಬಿ.ಬಸವರಾಜು, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X