ದ.ಕ. ಜಿಲ್ಲೆ: ಕೋವಿಡ್‌ಗೆ 4 ಬಲಿ; 618 ಮಂದಿಗೆ ಕೊರೋನ ಪಾಸಿಟಿವ್

ಮಂಗಳೂರು, ಜೂ.12: ದ.ಕ. ಜಿಲ್ಲೆಯಲ್ಲಿ ಶನಿವಾರ 4 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 976ಕ್ಕೇರಿದೆ. ಅಲ್ಲದೆ ಶನಿವಾರ ಜಿಲ್ಲೆಯಲ್ಲಿ 618 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ಪ್ರಮಾಣ ಶೇ.12.92 ಇದೆ. ಇದರೊಂದಿಗೆ ಈವರೆಗೆ ಜಿಲ್ಲೆಯಲ್ಲಿ ಕೊರೋನ ಸೋಂಕಿಗೊಳಗಾದವರ ಸಂಖ್ಯೆ 83,311ಕ್ಕೇರಿದೆ.
ಶನಿವಾರ 524 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಅದರಂತೆ ಈವರೆಗೆ ಗುಣಮುಖರಾದವರ ಸಂಖ್ಯೆ 75,273ಕ್ಕೇರಿದೆ. ಸದ್ಯ ಜಿಲ್ಲೆಯಲ್ಲಿ 7,062 ಸಕ್ರಿಯ ಪ್ರಕರಣವಿದೆ. ಜಿಲ್ಲೆಯಲ್ಲಿ ಈವರಗೆ 8,92,095 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 8,08,784 ಮಂದಿಯ ವರದಿ ನೆಗೆಟಿವ್ ಬಂದಿದೆ.
ದಂಡ ವಸೂಲಿ: ಮಾಸ್ಕ್ ನಿಯಮ ಉಲ್ಲಂಘಿಸಿದ 63,140 ಮಂದಿಯಿಂದ 74,09,617 ರೂ. ದಂಡ ವಸೂಲು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Next Story





