ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ
ಉಡುಪಿ, ಜೂ.12: ಕೃಷಿ ವಲಯದಲ್ಲಿ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಶಿಷ್ಟ ಮತ್ತು ಗಮನಾರ್ಹ ಸಾಧನೆ ಮೂಲಕ ರೈತ ಸಮುದಾಯದ ಶ್ರೇಯೋಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಪರಿಣಿತರಿಗೆ ಕೃಷಿ ಇಲಾಖೆ ವತಿಯಿಂದ ಕೃಷಿ ಪಂಡಿತ ಪ್ರಶಸ್ತಿ ನೀಡಿ ಗೌರವಿಸಲಾ ಗುತ್ತಿದೆ.
ಕೃಷಿ ಪಂಡಿತ ಪ್ರಶಸ್ತಿಗೆ ಭಾಗವಹಿಸಲು ಇಚ್ಚಿಸುವವರು ಉಡುಪಿ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ನೂತನ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವವರಾಗಿರಬೇಕು.
ಭಾಗವಹಿಸುವವರ ಸಂಶೋಧನೆ / ಸಾಧನೆಗಳು ಮೂಲ ಸ್ವರೂಪವಾಗಿದ್ದು, ಬೇರೆಯವರ ಸಾಧನೆಗಿಂತ ಭಿನ್ನವಾಗಿರಬೇಕು ಹಾಗೂ ವ್ಯಾಪಕವಾಗಿಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು. ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸ ಬಯಸುವ ರೈತರು, ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಿಂದ ನಿಗದಿತ ಅರ್ಜಿ ಪಡೆದುಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೂನ್ 20ರೊಳಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕಾಗಿದೆ.
ಕೃಷಿ ಪಂಡಿತ ಪ್ರಶಸ್ತಿಯು ಪ್ರಥಮ ಬಹುಮಾನ 1,25,000ರೂ., ದ್ವಿತೀಯ ಬಹುಮಾನ 1,00,000ರೂ., ತೃತೀಯ ಬಹುಮಾನ 75,000ರೂ. ಹಾಗೂ ಕೃಷಿ ಪಂಡಿತ ಉದಯೋನ್ಮುಖ ಪ್ರಶಸ್ತಿ 50,000 ರೂ.ನಗದು ಬಹುಮಾನ ವನ್ನು ಒಳಗೊಂಡಿರುತ್ತದೆ ಎಂದು ಕೃಷಿ ಇಲಾಖೆಯ ಪ್ರಕಟಣೆ ತಿಳಿಸಿದೆ.







