Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ...

ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಎಲ್ಲದಕ್ಕೂ ಕ್ಯೂ: ಡಿ.ಕೆ.ಶಿವಕುಮಾರ್ ತರಾಟೆ

ವಾರ್ತಾಭಾರತಿವಾರ್ತಾಭಾರತಿ12 Jun 2021 10:17 PM IST
share
ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಎಲ್ಲದಕ್ಕೂ ಕ್ಯೂ: ಡಿ.ಕೆ.ಶಿವಕುಮಾರ್ ತರಾಟೆ

ಬೆಂಗಳೂರು, ಜೂ.12: ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಆಸ್ಪತೆಯಲ್ಲಿ ಹಾಸಿಗೆ, ಚಿಕಿತ್ಸೆ, ಆಕ್ಸಿಜನ್, ಔಷಧಿ, ಕೊನೆಗೆ ಶವ ಸಂಸ್ಕಾರ ಸೇರಿ ಎಲ್ಲದಕ್ಕೂ ಜನ ಕ್ಯೂ ನಿಲ್ಲುವಂತೆ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಶನಿವಾರ ನಗರದ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಬಡವರಿಗೆ ಆಹಾರ ಕಿಟ್ ಹಾಗೂ ಆರ್ಥಿಕ ನೆರವು ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಬಿಜೆಪಿ ಸರಕಾರ ಬಂದ ಮೇಲೆ ಪ್ರತಿಯೊಂದು ವಿಚಾರಕ್ಕೂ ನಿಮ್ಮನ್ನೆಲ್ಲ ಕ್ಯೂ ನಿಲ್ಲಿಸಿದರಲ್ಲಾ ಅಂತಾ ಸಂಕಟವಾಗುತ್ತಿದೆ. ನೋಟು ರದ್ದು ಮಾಡಿ, ನಿಮ್ಮ ದುಡ್ಡು ನೀವು ತೆಗೆದುಕೊಳ್ಳಲು ಕ್ಯೂ ನಿಲ್ಲಿಸಿ ಸಾಯಿಸಿದರು. ನಂತರ ಆಧಾರ್ ಜೋಡಣೆ ವಿಚಾರವಾಗಿ ಮತ್ತೆ ಬ್ಯಾಂಕ್ ಮುಂದೆ ಕ್ಯೂ ನಿಲ್ಲಿಸಿದರು ಎಂದರು.

ದೇಶಕ್ಕೆ ಮಹಾಮಾರಿ ಕರೆತಂದು, ಆಸ್ಪತ್ರೆ ಮುಂದೆ ಕ್ಯೂ, ಆಂಬ್ಯುಲೆನ್ಸ್ ಗೂ ಕ್ಯೂ, ಔಷಧಿಗೂ ಕ್ಯೂ, ಆಕ್ಸಿಜನ್ ಗೂ ಕ್ಯೂ, ಕೊನೆಗೆ ಶವ ಸಂಸ್ಕಾರಕ್ಕೂ ಕ್ಯೂ ನಿಲ್ಲಿಸಿದರು. ಈಗ ಆಹಾರ ಕಿಟ್ ಕೊಡಲು ನಾವು ನಿಮ್ಮನ್ನು ಕ್ಯೂ ನಿಲ್ಲಿಸಿದ್ದೇವೆ. ಇದು ಸರಕಾರದ ಆಹಾರ ಕಿಟ್ ಅಲ್ಲ, ಕಾಂಗ್ರೆಸ್ ನಾಯಕರು ತಮ್ಮ ಶ್ರಮದಿಂದ ಸಂಪಾದಿಸಿದ ಸ್ವಂತ ಹಣದಲ್ಲಿ ನೀಡುತ್ತಿರುವ ಕಿಟ್.  ಬೆಂಗಳೂರಿನಿಂದ ದಿಲ್ಲಿವರೆಗೆ ದೇಶದಲ್ಲಿ ನೀವು ಬದಲಾವಣೆ ತರಬೇಕು ಎಂದು ಶಿವಕುಮಾರ್ ಕರೆ ನೀಡಿದರು.

ಚುನಾವಣೆ ಕಾರಣಕ್ಕೆ ನಾವು ಇಲ್ಲಿಗೆ ಬಂದು ಈ ಕಾರ್ಯಕ್ರಮ ಮಾಡುತ್ತಿಲ್ಲ. ದೇಶದೆಲ್ಲೆಡೆ ಜನ ಸಂಕಟದಲ್ಲಿದ್ದು, ಅವರಿಗೆ ಸಹಾಯ ಮಾಡಲು ನಾವು ಈ ಇಲ್ಲಿಗೆ ಬಂದಿದ್ದೇವೆ. ನಾವು ಮಾಡುವ ಸಹಾಯದಿಂದ ನಿಮ್ಮ ಜೀವನ ಉದ್ದಾರವಾಗುತ್ತದೆ ಎಂದು ಹೇಳುತ್ತಿಲ್ಲ. ಆದರೆ ಕಷ್ಟದಲ್ಲಿರುವ ಜನರ ಭಾರವನ್ನು ಸ್ವಲ್ಪ ಮಟ್ಟಿಗಾದರೂ ಕಡಿಮೆ ಮಾಡಲು ಪ್ರಯತ್ನ ಮಾಡುತ್ತಿದ್ದೇವೆ ಎಂದು ಅವರು ತಿಳಿಸಿದರು.

ಬಡವರು, ಮಧ್ಯಮ ವರ್ಗದವರು ತಮ್ಮ ಬಳಿ ಇದ್ದ ಅಲ್ಪಸ್ವಲ್ಪ ಚಿನ್ನ ಅಡವಿಟ್ಟು ಜೀವನ ಮಾಡಲು ಮುಂದಾಗಿದ್ದಾರೆ. ಅನೇಕರು ಉದ್ಯೋಗ ಕಳೆದುಕೊಂಡರು. ಉದ್ಯೋಗ ಕೊಡುತ್ತೇವೆ ಎಂದವರು ವಿದ್ಯಾವಂತರಿಗೆ ಪಕೋಡಾ ಮಾರಲು ಹೇಳಿದರು. ಪಕೋಡಾ ಮಾಡುವ ಅಡುಗೆ ಎಣ್ಣೆ ಬೆಲೆಯನ್ನು 200 ರೂ.ಗಳಿಗೆ ಹೆಚ್ಚಿಸಿದ್ದಾರೆ. ಇಡೀ ದೇಶದ ಜನರನ್ನು ಬಡತನಕ್ಕೆ ನೂಕಿದ್ದಾರೆ ಎಂದು ಶಿವಕುಮಾರ್ ಕಿಡಿಗಾರಿದರು.

ದೇಶದಲ್ಲಿ ಪೆಟ್ರೋಲ್ ಮೂಲಬೆಲೆ 35 ರೂ., ಅದಕ್ಕೆ ತೆರಿಗೆ 65 ರೂ. ನೆರೆ ರಾಷ್ಟ್ರಗಳಲ್ಲಿ ಅರ್ಧದಷ್ಟಿದ್ದರೂ ನಮ್ಮಲ್ಲಿ ಮಾತ್ರ ಬೆಲೆ ಹೆಚ್ಚುತ್ತಲೇ ಇದೆ. ಈ ಸರಕಾರ ದಿನಾ ಜನರ ಜೇಬು ಪಿಕ್ ಪಾಕೆಟ್ ಮಾಡುತ್ತಿದೆ ಎಂದು ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಆರ್ಥಿಕ ನೆರವು: ನಮ್ಮ ನಾಯಕರು ತಮ್ಮ ಸ್ವಂತ ಹಣದಲ್ಲಿ ನಿಮಗೆ ಸಹಾಯ ಮಾಡಲು ಮುಂದಾಗಿದ್ದಾರೆ. ನಮ್ಮ ನಾಯಕರೆಲ್ಲರೂ ಹಣ ಸೇರಿಸಿ ಈ ಕ್ಷೇತ್ರದ ಬಡ ಕುಟುಂಬಗಳಿಗೆ ತಲಾ ಒಂದು ಸಾವಿರ ರೂ.ನೀಡುತ್ತಿದ್ದಾರೆ. ಅವರಿಗೆ ಶಕ್ತಿ ತುಂಬಲು ನಾನಿಲ್ಲಿಗೆ ಬಂದಿದ್ದೇನೆ. ಈ ಹಣ ನಿಮ್ಮ ಎಲ್ಲ ಸಮಸ್ಯೆ ಬಗೆಹರಿಸದೆ ಇರಬಹುದು. ಆದರೆ ಕಷ್ಟಕಾಲದಲ್ಲಿ ನಿಮ್ಮ ಜತೆ ನಿಲ್ಲಲು ನಮ್ಮ ನಾಯಕರು ಮುಂದೆ ಬಂದಿದ್ದಾರೆ. ಅನೇಕರಿಗೆ ಊಟಕ್ಕೆ, ಔಷಧಿಗೆ ಹಣವಿರುವುದಿಲ್ಲ. ಹೀಗಾಗಿ ನಿಮ್ಮ ಕಷ್ಟಕ್ಕೆ ಸ್ಪಂದಿಸಲು ಈ ಹೆಜ್ಜೆ ಇಟ್ಟಿದ್ದಾರೆ. ಆ ಮೂಲಕ ನಿಮ್ಮ ಋಣ ತೀರಿಸುವ ಸಣ್ಣ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

ಕಳೆದ ಬಾರಿ ಹಾಲು ಕೇಳಿದವರಿಗೆ ಐಪಿಸಿ ಸೆಕ್ಷನ್ 307 ರ ಅಡಿ ಪ್ರಕರಣ ದಾಖಲಿಸಿದ್ದಾರೆ. ಇಲ್ಲಿನ ಬಿಜೆಪಿ ನಾಯಕರು ಪೊಲೀಸರನ್ನು ಬಳಸಿಕೊಂಡು ಮೂರ್ನಾಲ್ಕು ಕೇಸ್ ಹಾಕಿಸಿದ್ದಾರೆ ಎಂದು ಒಬ್ಬರು ಹೆಣ್ಣು ಮಗಳು ಹೇಳುತ್ತಿದ್ದರು. ಆ ರೀತಿ ನಿಮಗೆ ಯಾರಾದರೂ ಯಾವುದೇ ತೊಂದರೆ ಕೊಟ್ಟರೆ ನಮ್ಮನ್ನು ಭೇಟಿ ಮಾಡಿ. ನಿಮ್ಮ ರಕ್ಷಣೆಗೆ ಕಾಂಗ್ರೆಸ್ ಸದಾ ನಿಲ್ಲಲಿದೆ. ಮುಂದಿನ ದಿನಗಳಲ್ಲಿ ಕಾರ್ಪೋರೇಷನ್ ಚುನಾವಣೆ ಬರುತ್ತಿದೆ, ವಿಧಾನಸಭೆ ಚುನಾವಣೆಯೂ ಬರಲಿದೆ. ನೀವು ಬಿಜೆಪಿಯವರಿಗೆ ಬುದ್ದಿ ಕಲಿಸಬೇಕು. ನಾವು ನಿಮ್ಮ ಜತೆ ಇರುತ್ತೇವೆ ಎಂದು ಶಿವಕುಮಾರ್ ತಿಳಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಮ್ ಅಹ್ಮದ್, ರಾಮಲಿಂಗಾ ರೆಡ್ಡಿ, ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್, ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಬೆಂಗಳೂರು ನಗರ ದಕ್ಷಿಣ ಜಿಲ್ಲೆ ಅಧ್ಯಕ್ಷ ಜಿ.ಕೃಷ್ಣಪ್ಪ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X