ನಿವೃತ್ತ ವಲಯ ಅರಣ್ಯಾಧಿಕಾರಿ ಎಂ. ಇಸ್ಮಾಯೀಲ್ ನಿಧನ

ಮಂಗಳೂರು, ಜೂ.12: ಬಂಟ್ವಾಳ ತಾಲೂಕಿನ ಸಿದ್ಧಕಟ್ಟೆ ಸಂಗಬೆಟ್ಟು ಸಮೀಪದ ಎಲಿಯ ನಿವಾಸಿ, ನಿವೃತ್ತ ವಲಯ ಅರಣ್ಯಾಧಿಕಾರಿ ಎಂ. ಇಸ್ಮಾಯೀಲ್ (66) ಜೂ.3ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಎಂ. ಇಸ್ಮಾಯೀಲ್ ಅವರು ದ.ಕ., ಉಡುಪಿ, ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆ ವಲಯ ಅರಣ್ಯಾಧಿಕಾರಿಯಾಗಿ (ಆರ್‌ಎಫ್‌ಒ) ಕರ್ತವ್ಯ ನಿರ್ವಹಿಸಿದ್ದರು. ಅಲ್ಲದೆ ಎಲಿಯಾ ಜುಮಾ ಮಸೀದಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
Next Story





