Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಿಎಸ್ಟಿ ದರ ಕಡಿತಕ್ಕೆ ಬಸವರಾಜ ಬೊಮ್ಮಾಯಿ...

ಜಿಎಸ್ಟಿ ದರ ಕಡಿತಕ್ಕೆ ಬಸವರಾಜ ಬೊಮ್ಮಾಯಿ ಮನವಿಗೆ ಕೇಂದ್ರ ಹಣಕಾಸು ಸಚಿವರ ಸಮ್ಮತಿ

44ನೆ ಜಿಎಸ್ಟಿ ಮಂಡಳಿ ಸಭೆ

ವಾರ್ತಾಭಾರತಿವಾರ್ತಾಭಾರತಿ12 Jun 2021 11:19 PM IST
share
ಜಿಎಸ್ಟಿ ದರ ಕಡಿತಕ್ಕೆ ಬಸವರಾಜ ಬೊಮ್ಮಾಯಿ ಮನವಿಗೆ ಕೇಂದ್ರ ಹಣಕಾಸು ಸಚಿವರ ಸಮ್ಮತಿ

ಬೆಂಗಳೂರು, ಜೂ. 12: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ 44ನೆ ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ)ಪರಿಷತ್ತಿನ ಮಹತ್ವದ ಸಭೆ ಶನಿವಾರ ಜರುಗಿತು. ಈ ಸಭೆಯಲ್ಲಿ ಗ್ರೂಪ್ ಆಫ್ ಮಿನಿಸ್ಟರ್ಸ್ ಸಲ್ಲಿಸಿದ ಕೋವಿಡ್ ಪರಿಹಾರ ಸಾಮಗ್ರಿಗಳ ಮೇಲಿನ ಜಿಎಸ್‍ಟಿ ದರಗಳಲ್ಲಿನ ರಿಯಾಯಿತಿ/ವಿನಾಯಿತಿ ಸಂಬಂಧಿಸಿದ ವರದಿಯ ಕುರಿತು ಚರ್ಚೆ ನಡೆಯಿತು. 

ಗ್ರೂಪ್ ಆಫ್ ಮಿನಿಸ್ಟರ್ಸ್ ಕೆಲವು ಔಷಧಗಳ ಮೇಲಿನ ಜಿಎಸ್‍ಟಿಯನ್ನು ಶೇ.5ರಿಂದ ಶೂನ್ಯಕ್ಕೆ, ರೆಮ್‍ಡಿಸಿವಿರ್ ಮೇಲಿನ ಜಿಎಸ್‍ಟಿಯನ್ನು ಶೇ.12ರಿಂದ ಶೇ.5ಕ್ಕೆ, ಆಮ್ಲಜನಕ ಉತ್ಪಾದನಾ ಉಪಕರಣ ಹಾಗೂ ಕೋವಿಡ್ ಪರೀಕ್ಷಾ ಕೀಟ್‍ಗಳ ಮೇಲಿನ ಶೇ.12ರ ಜಿಎಸ್‍ಟಿ ದರವನ್ನು ಶೇ.5ಕ್ಕೆ ಕಡಿಮೆ ಮಾಡುವುದಕ್ಕೆ ಶಿಫಾರಸ್ಸು ಮಾಡಿರುತ್ತದೆ. ತಾಪಮಾನ ಪರೀಕ್ಷಾ ಉಪಕರಣ ಹಾಗೂ ಶವಾಗಾರಗಳಿಗಾಗಿ ಬಳಕೆ ಆಗುವ ಗ್ಯಾಸ್, ಎಲೆಕ್ಟ್ರಿಕ್ ಫರ್ನೇಸ್‍ಗಳಿಗೆ ಸಂಬಂಧಿಸಿದಂತೆ ಜಿಎಸ್‍ಟಿಯನ್ನು ಶೇ.18ರಿಂದ 12ಕ್ಕೆ ಕಡಿತಗೊಳಿಸಲು ಶಿಫಾರಸು ಮಾಡಿದೆ. ಆ್ಯಂಬುಲೆನ್ಸ್ ಮೇಲೆ ಯಾವುದೇ ಕಡಿತವನ್ನು ಶಿಫಾರಸ್ಸು ಮಾಡಿರುವುದಿಲ್ಲ. 

ಜಿಎಸ್ಟಿ ಮಂಡಳಿ ಸಭೆಯಲ್ಲಿ ಬೆಂಗಳೂರಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ್ದ ರಾಜ್ಯದ ಜಿಎಸ್ಟಿ ಪ್ರತಿನಿಧಿ ಹಾಗೂ ಸಚಿವ ಬಸವರಾಜ್ ಬೊಮ್ಮಾಯಿ ಗ್ರೂಪ್ ಆಫ್ ಮಿನಿಸ್ಟರ್ಸ್ ಶಿಫಾರಸುಗಳನ್ನು ಸ್ವಾಗತಿಸಿದರು. ಅದರ ಜೊತೆಗೆ ಇನ್ನಷ್ಟು ತೆರಿಗೆ ಕಡಿತಕ್ಕಾಗಿ ಕೇಂದ್ರ ಹಣಕಾಸು ಸಚಿವರನ್ನು ಕೋರಿದರು. ತಾಪಮಾನ ಪರೀಕ್ಷಾ ಉಪಕರಣ, ಹಾಗೂ ಶವಾಗಾರಗಳಿಗಾಗಿ ಬಳಕೆಯಾಗುವ ಗ್ಯಾಸ್, ಎಲೆಕ್ಟ್ರಿಕ್ ಫರ್ನೆಸ್ ವಸ್ತುಗಳ ಮೇಲಿನ ತೆರಿಗೆಯನ್ನು ಶೇ.18ರಿಂದ ಶೇ.5ಕ್ಕೆ ಮತ್ತು ಆಂಬುಲೆನ್ಸ್ ವಾಹನಗಳ ಮೇಲಿನ ತೆರಿಗೆಯನ್ನು ಶೇ.28ರಿಂದ ಶೇ.12ಕ್ಕೆ ಇಳಿಸುವಂತೆ ಮನವಿ ಮಾಡಿದರು.  

ಬಸವರಾಜ ಬೊಮ್ಮಾಯಿ ಅವರ ಈ ಮನವಿಗಳಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಭೆಯಲ್ಲಿಯೇ ಅನುಮೋದನೆ ನೀಡಿದರು. ಈ ರಿಯಾಯಿತಿಗಳನ್ನು ಸೆಪ್ಟೆಂಬರ್ 30ರ ವರೆಗೆ ವಿಸ್ತರಿಸಲು ಮಾಡಿದ ಮನವಿಗೂ ಜಿಎಸ್ಟಿ ಮಂಡಳಿ ಒಪ್ಪಿಗೆ ನೀಡಿತು. ಇದಕ್ಕಾಗಿ ಸಚಿವ ಬಸವರಾಜ ಬೊಮ್ಮಾಯಿ, ಕೇಂದ್ರ ಹಣಕಾಸು ಸಚಿವರಿಗೆ ಧನ್ಯವಾದ ಅರ್ಪಿಸಿದರು. 

2022ರ ನಂತರದ ಜಿಎಸ್ಟಿ ಪರಿಹಾರಕ್ಕೆ ಸಂಬಂಧಿಸಿದ ವಿಷಯ ಕುರಿತು ಚರ್ಚಿಸಲು ಸಭೆ ಕರೆಯುವಂತೆ ಬೊಮ್ಮಾಯಿ ಕೋರಿದರು. ಇದಕ್ಕೆ ಸ್ಪಂದಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಶೀಘ್ರದಲ್ಲಿಯೇ ಸಭೆ ಕರೆಯಲು ಒಪ್ಪಿಕೊಂಡರು. ಸಭೆಯಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತ ಎಂ.ಎಸ್.ಶ್ರೀಕರ್ ಸಭೆಯಲ್ಲಿ ಉಪಸ್ಥಿತರಿದ್ದರು. 

`2021-22ನೆ ಸಾಲಿಗೆ 18,109 ಕೋಟಿ ರೂಪಾಯಿಗಳ ಜಿಎಸ್ಟಿ ಪರಿಹಾರ ಸಾಲಕ್ಕೆ ಅನುಮೋದನೆ ನೀಡಿದ್ದಕ್ಕಾಗಿ ಕೇಂದ್ರ ಸರಕಾರಕ್ಕೆ ಧನ್ಯವಾದ ಅರ್ಪಿಸುತ್ತೇನೆ. ಈ ಕ್ರಮ ಕೋವಿಡ್ ವಿರುದ್ಧದ ಸಮರಕ್ಕೆ ರಾಜ್ಯ ಸರಕಾರಕ್ಕೆ ಸಹಕಾರಿಯಾಗುತ್ತದೆ'
-ಬಸವರಾಜ ಬೊಮ್ಮಾಯಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X