ಬಿಜೆಪಿಯೊಂದಿಗೆ ಅಧಿಕಾರದಲ್ಲಿದ್ದಾಗ ಪಕ್ಷವನ್ನು ರಾಜಕೀಯವಾಗಿ ಮುಗಿಸಲು ಪ್ರಯತ್ನಿಸಲಾಗಿತ್ತು: ಸಂಜಯ್ ರಾವತ್

ಮುಂಬೈ: ಶಿವಸೇನೆ ಅನ್ನು ವಾಸ್ತವಿಕವಾಗಿ "ಗುಲಾಮರು" ಎಂದು ಪರಿಗಣಿಸಲಾಗಿದ್ದು, 2014 ರಿಂದ 2019 ರವರೆಗೆ ಮಹಾರಾಷ್ಟ್ರದಲ್ಲಿ ಬಿಜೆಪಿಯೊಂದಿಗೆ ಅಧಿಕಾರದಲ್ಲಿದ್ದಾಗ ಪಕ್ಷವನ್ನು ರಾಜಕೀಯವಾಗಿ ಮುಗಿಸಲು ಪ್ರಯತ್ನಿಸಲಾಯಿತು ಎಂದು ಶಿವಸೇನೆಯ ಸಂಸದ ಸಂಜಯ್ ರಾವತ್ ಆರೋಪಿಸಿದ್ದಾರೆ.
ಶನಿವಾರ ಉತ್ತರ ಮಹಾರಾಷ್ಟ್ರದ ಜಲ್ಗಾಂವ್‌ನಲ್ಲಿ ಶಿವಸೇನಾ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾವತ್, "ಶಿವಸೇನೆ ಹಿಂದಿನ ಸರಕಾರದಲ್ಲಿ ದ್ವಿತೀಯ ಸ್ಥಾನಮಾನವನ್ನು ಹೊಂದಿತ್ತು ಹಾಗೂ ಗುಲಾಮರಂತೆ ಪರಿಗಣಿಸಲ್ಪಟ್ಟಿತು. ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ನಮ್ಮ ಪಕ್ಷವನ್ನು ಮುಗಿಸಲು ಪ್ರಯತ್ನಿಸಲಾಯಿತು" ಎಂದರು.
ಮಹಾರಾಷ್ಟ್ರ ಮುಖ್ಯಮಂತ್ರಿ ಹಾಗೂ ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ದಿಲ್ಲಿಯಲ್ಲಿ ಪ್ರತ್ಯೇಕವಾಗಿ ಭೇಟಿಯಾಗಿ ರಾಜ್ಯದಲ್ಲಿ ರಾಜಕೀಯ ಊಹಾಪೋಹಗಳಿಗೆ ನಾಂದಿ ಹಾಡಿದ ಕೆಲ ದಿನಗಳ ನಂತರ ರಾವತ್ ಈ ಹೇಳಿಕೆ ನೀಡಿದ್ದಾರೆ.
Next Story