ಮೂಡುಬೆಟ್ಟು: ಹಡಿಲು ಭೂಮಿ ಕೃಷಿ ನಾಟಿಗೆ ಸಚಿವ ಕೋಟ ಚಾಲನೆ

ಉಡುಪಿ, ಜೂ.13: ಕೇದಾರೋತ್ಥಾನ ಟ್ರಸ್ಟ್ ವತಿಯಿಂದ ಮೂಡಬೆಟ್ಟು ವಾರ್ಡಿನ ಸುಮಾರು 70 ಎಕರೆ ಹಡಿಲು ಭೂಮಿಯ ಕೃಷಿಯ ನಾಟಿ ಕಾರ್ಯಕ್ಕೆ ರವಿವಾರ ಮೂಡುಬೆಟ್ಟು ಬಾವಲಿ ಮನೆ ರಸ್ತೆಯ ಮಾಧವ ಆಚಾರ್ಯರ ಮನೆ ಬಳಿಯ 20 ಎಕರೆ ಹಡಿಲು ಭೂಮಿಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಚಾಲನೆ ನೀಡಿದರು.
ಮತ್ಸ್ಯೋದ್ಯಮಿ ಸಾಧು ಸಾಲ್ಯಾನ್ ಅವರೊಂದಿಗೆ ಶಾಸಕ ಕೆ.ರಘುಪತಿ ಭಟ್ ಗದ್ದೆಗೆ ಹಾಲನ್ನು ಅರ್ಪಿಸಿದರು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ಶ್ರೀಶ ಕೊಡವೂರು, ಜಿಪಂ ನಿಕಟಪೂರ್ವ ಅಧ್ಯಕ್ಷ ದಿನಕರ್ ಬಾಬು, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಮೋಹನ್ ಉಪಾಧ್ಯ, ಶಿರಡಿ ಸಾಯಿಬಾಬಾ ಮಂದಿರದ ಧರ್ಮದರ್ಶಿ ದಿವಾಕರ್ ಶೆಟ್ಟಿ, ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ರಾಘವೇಂದ್ರ ಕಿಣಿ, ಯುವಕ ಮಂಡಲದ ಅಧ್ಯಕ್ಷ ಜಗದೀಶ್ ಅಮೀನ್, ಗಣೇಶೋತ್ಸವ ಸಮಿತಿ ಅಧ್ಯಕ್ಷ ಚಂದ್ರಕಾಂತ್, ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಹಿರಿಯ ಕ್ಷೇತ್ರ ಅಧಿಕಾರಿ ಶಂಕರ್ ಉಪಸ್ಥಿತರಿದ್ದರು.
Next Story





