ಮಂಗಳೂರು: ‘ಮೆಕ್ಯಾನಿಕ್ಸ್ ಸ್ಮಾರ್ಟ್ ಕಾರ್ಡ್’ ವಿತರಣೆ

ಮಂಗಳೂರು, ಜೂ.13: ದ.ಕ. ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ‘ಮೆಕ್ಯಾನಿಕ್ಸ್ ಸ್ಮಾರ್ಟ್ ಕಾರ್ಡ್’ ವಿತರಣೆ ಕಾರ್ಯಕ್ರಮವು ರವಿವಾರ ಸಂಘದ ಸಭಾಂಗಣದಲ್ಲಿ ನಡೆಯಿತು.
ಮೇಯರ್ ಪ್ರೇಮಾನಂದ ಶೆಟ್ಟಿ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಾರ್ಮಿಕ ಇಲಾಖೆಯ ಅಧಿಕಾರಿ ವಿಲ್ಮಾ ಎಲಿಜಬೆತ್ ತೌರೊ ಸ್ಮಾರ್ಟ್ ಕಾರ್ಡ್ ವಿತರಿಸಿ ಸರಕಾರದ ಸವಲತ್ತುಗಳನ್ನು ಕಾರ್ಮಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಸಂಘದ ಅಧ್ಯಕ್ಷ ದಿನೇಶ್ ಕುಮಾರ್, ಸುಧಾಕರ್ ರಾವ್, ರುಕ್ಮಯ್ಯ ಗೌಡ, ದಿವಾಕರ್, ಕೋಶಾಧಿಕಾರಿ ರಾಜಗೋಪಾಲ್, ಕಾರ್ಪೊರೇಟರ್ ಶೈಲೇಶ್ ಶೆಟ್ಟಿ ಉಪಸ್ಥಿತರಿದ್ದರು.
ಜನಾರ್ದನ್ ಎ. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪುಂಡಲೀಕ ಸುವರ್ಣ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕಮಿಲ ವಂದಿಸಿದರು. ರಾಮಚಂದ್ರ ಪಂಡಿತ್ ಕಾರ್ಯಕ್ರಮ ವನ್ನು ನಿರೂಪಿಸಿದರು.
Next Story





