ಅಖಿಲೇಶ್ ಯಾದವ್ ಅವರನ್ನು ಭೇಟಿಯಾದ ಬಿಎಸ್ಪಿಯ 9 ಶಾಸಕರು

ಹೊಸದಿಲ್ಲಿ: ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಒಂಬತ್ತು ಶಾಸಕರು ಮಂಗಳವಾರ ಬೆಳಿಗ್ಗೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಭೇಟಿಯಾದರು. ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ಚುನಾವಣೆಗೆ ಮುನ್ನ ರಾಜಕೀಯ ಸಮೀಕರಣಗಳ ಮೇಲೆ ಪ್ರಭಾವ ಬೀರುವಂತೆ ಮಾಡುವಲ್ಲಿ ಪ್ರತಿಸ್ಪರ್ಧಿ ಪಕ್ಷಕ್ಕೆ ಕಾಲಿಡಲಿದ್ದಾರೆ ಎಂದು ವರದಿಯಾಗಿದೆ. .
ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಇತ್ತೀಚೆಗೆ ಈ 9 ಶಾಸಕರನ್ನು ಪಕ್ಷದಿಂದ ಉಚ್ಚಾಟಿಸಿದ್ದರು.
2017 ರ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್ಪಿ 19 ಸ್ಥಾನಗಳನ್ನು ಗೆದ್ದಿತು ಹಾಗೂ ಉಪಚುನಾವಣೆಯಲ್ಲಿ ಒಂದು ಸ್ಥಾನವನ್ನು ಕಳೆದುಕೊಂಡಿತು. ಉತ್ತರ ಪ್ರದೇಶ ವಿಧಾನಸಭೆಯಲ್ಲಿ 18 ಶಾಸಕರನ್ನು ಹೊಂದಿತ್ತು. ಕಳೆದ ನಾಲ್ಕು ವರ್ಷಗಳಲ್ಲಿ ಮಾಯಾವತಿ 11 ಶಾಸಕರನ್ನು ಪಕ್ಷದಿಂದ ಹೊರಹಾಕಿದ್ದಾರೆ. ಇದೀಗ ವಿಧಾನಸಭೆಯಲ್ಲಿ ಬಿಎಸ್ಪಿ ಕೇವಲ ಏಳು ಶಾಸಕರನ್ನು ಹೊಂದಿದೆ.
ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಇಬ್ಬರು ಹಿರಿಯ ಶಾಸಕರನ್ನು ಅವರು ಇತ್ತೀಚೆಗೆ ವಜಾ ಮಾಡಿದ್ದಾರೆ.
ಕಳೆದ ವರ್ಷ ರಾಜ್ಯಸಭಾ ಚುನಾವಣೆಯ ಸಂದರ್ಭದಲ್ಲಿ ಏಳು ಮಂದಿ ಬಂಡಾಯ ಎದ್ದಿದ್ದರು. ಆಗ ಅವರನ್ನು ಪಕ್ಷದಿಂದ ಹೊರಹಾಕಲಾಯಿತು