Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ 4 ವರ್ಷದ...

ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ 4 ವರ್ಷದ ಪದವಿ ಕೋರ್ಸು ಆರಂಭಿಸಲು ಕುಲಪತಿಗಳಿಗೆ ಡಿಸಿಎಂ ಸಲಹೆ

ಶೈಕ್ಷಣಿಕ ಕ್ಯಾಲೆಂಡರ್ ಬಗ್ಗೆ ಸಮಾಲೋಚನೆ

ವಾರ್ತಾಭಾರತಿವಾರ್ತಾಭಾರತಿ15 Jun 2021 8:55 PM IST
share
ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ 4 ವರ್ಷದ ಪದವಿ ಕೋರ್ಸು ಆರಂಭಿಸಲು ಕುಲಪತಿಗಳಿಗೆ ಡಿಸಿಎಂ ಸಲಹೆ

ಬೆಂಗಳೂರು, ಜೂ.15: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಶಿಫಾರಸಿನಂತೆ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಪದವಿ ಕೋರ್ಸುಗಳನ್ನು ಆರಂಭ ಮಾಡುವಂತೆ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಕುಲಪತಿಗಳಿಗೆ ಸಲಹೆ ಮಾಡಿದ್ದಾರೆ.

2021-22ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಎಲ್ಲ ಕುಲಪತಿಗಳ ಜತೆ ಬೆಂಗಳೂರಿನಲ್ಲಿ ಮಂಗಳವಾರ ವರ್ಚುಯಲ್ ಚರ್ಚೆ ನಡೆಸಿದ ನಂತರ ಉಪ ಮುಖ್ಯಮಂತ್ರಿ ಮಾಧ್ಯಮಗಳಿಗೆ ಈ ಮಾಹಿತಿ ನೀಡಿದರು.

ಕೋವಿಡ್ ಕಾರಣಕ್ಕೆ ಪ್ರಸಕ್ತ ವರ್ಷದಲ್ಲಿ ಪಿಯುಸಿ ವಿದ್ಯಾರ್ಥಿಗಳೆಲ್ಲರೂ ಪಾಸಾಗಿದ್ದಾರೆ. ವಿವಿಧ ಕೋರ್ಸುಗಳಿಗೆ ಬಹಳ ಬೇಡಿಕೆ ಬರುತ್ತಿದೆ. ವಿವಿಗಳಿಗೆ ಇದೊಂದು ಸುವರ್ಣಾವಕಾಶ. ನಾಲ್ಕು ವರ್ಷದ ಪದವಿ ತರಗತಿಗಳನ್ನು ಆರಂಭ ಮಾಡುವ ಮೂಲಕ ವಿವಿಗಳು ಪದವಿ ವ್ಯಾಸಂಗದ ಅಭಿಲಾಶೆಯುಳ್ಳ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಲು ಕುಲಪತಿಗಳಿಗೆ ಸೂಚಿಸಲಾಗಿದೆ ಎಂದರು.

ಎನ್‍ಇಪಿ ಜಾರಿಗೆ ವಿಷಯವಾರು ಸಮಿತಿ ರಚನೆ: ಈ ವರ್ಷದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಬರುತ್ತಿದೆ. ಅದಕ್ಕೆ ಸೂಕ್ತವಾದ ‘ಕಾರ್ಯ ಚೌಕಟ್ಟು’ ರೂಪಿಸಲು ವಿಷಯವಾರು ಸಮಿತಿ ರಚನೆ ಮಾಡುವಂತೆಯೂ ಕುಲಪತಿಗಳಿಗೆ ಸೂಚನೆ ನೀಡಲಾಗಿದ್ದು, ಜುಲೈ 15ರೊಳಗೆ ಈ ಸಮಿತಿಗಳು ವರದಿಗಳನ್ನು ಸಲ್ಲಿಸಬೇಕೆಂದು ತಿಳಿಸಲಾಗಿದೆ ಎಂದು ಅಶ್ವತ್ಥ ನಾರಾಯಣ ಹೇಳಿದರು.

ಇನ್ನು ಸದ್ಯಕ್ಕೆ ನಮ್ಮನ್ನು ಕಾಡುತ್ತಿರುವ ಈ ವೈರಸ್ ಎಷ್ಟು ಕಾಲ ಇರುತ್ತೋ ಇಲ್ಲವೋ ಗೊತ್ತಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಆನ್‍ಲೈನ್ ಮತ್ತು ಆಫ್‍ಲೈನ್‍ನಲ್ಲಿ ಕಲಿಯಲು ಅವಕಾಶ ಇರಲೇಬೇಕು. ಅದಕ್ಕೆ ಬೇಕಾದ ಎಲ್ಲ ತಾಂತ್ರಿಕ ಸೌಲಭ್ಯಗಳು ವಿದ್ಯಾಸಂಸ್ಥೆಗಳಲ್ಲಿ ಇರಬೇಕು. ಡಿಜಿಟಲ್‍ನಿಂದ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ವರ್ಚವಲ್ ಮೂಲಕ ಬೋಧನೆ ಮಾಡುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

ಅಕ್ಟೋಬರ್ ನಿಂದ ಹೊಸ ಶೈಕ್ಷಣಿಕ ವರ್ಷ: ಎಲ್ಲ ವಿವಿಗಳ 2021-22ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಅಕ್ಟೋಬರ್ ಮೊದಲ ವಾರದಲ್ಲಿ ಈ ವರ್ಷದ ಶೈಕ್ಷಣಿಕ ವರ್ಷದ ಚಟುವಟಿಕೆಗಳು ಆರಂಭವಾಗುತ್ತವೆ. ಮೊದಲ ವರ್ಷದ ಪದವಿಗೆ ಅಕ್ಟೋಬರ್ ಮೊದಲ ವಾರದಿಂದಲೇ ದಾಖಲಾತಿ ಆರಂಭ ಮಾಡುವಂತೆ ಕುಲಪತಿಗಳಿಗೆ ತಿಳಿಸಲಾಗಿದೆ ಎಂದು ಅವರು ಹೇಳಿದರು.

ಕೆಲ ಕಡೆ ಪರೀಕ್ಷೆಗಳು ನಡೆದಿವೆ, ಇನ್ನು ಕೆಲವೆಡೆ ಆಗಿಲ್ಲ. ಈ ಬಗ್ಗೆ ಕೂಡ ಚರ್ಚೆ ನಡೆಸಲಾಯಿತು. ಇನ್ನು ಈಗಾಗಲೇ ದೈನಂದಿನ ತರಗತಿಗಳು ಶುರುವಾಗಿದ್ದು, ಅವುಗಳನ್ನು ಶೈಕ್ಷಣಿಕ ವರ್ಷದ ಚಟುವಟಿಕೆಗಳ ಆಧಾರದಲ್ಲೇ ನಡೆಸಲಾಗುವುದು ಎಂದ ಅವರು, ಮುಂದಿನ ವರ್ಷದ ಪರೀಕ್ಷೆಗಳನ್ನು ಹೇಗೆ ನಡೆಸಬೇಕು ಹಾಗೂ ಗುಣಮಟ್ಟದ ಶಿಕ್ಷಣ ನೀಡಲು ಏನೆಲ್ಲ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ವಿವರವಾಗಿ ಚರ್ಚಿಸಲಾಯಿತು. ಜಾಗತಿಕ ಮಟ್ಟದಲ್ಲಿ ವಿದ್ಯಾರ್ಥಿಗಳು ಪೈಪೋಟಿ ನಡೆಸಬೇಕಾದರೆ ಕಲಿಕೆ ಮತ್ತು ಬೋಧನೆಯಲ್ಲಿ ಗುಣಮಟ್ಟ ಇರಬೇಕು ಎಂಬ ಬಗ್ಗೆ ವಿಸ್ತೃತವಾಗಿ ಸಮಾಲೋಚನೆ ನಡೆಸಲಾಯಿತು ಎಂದರು.

ವಿದ್ಯಾರ್ಥಿಗಳು ತಂತ್ರಜ್ಞಾನ ಬಳಸಿಕೊಂಡು ವಿದ್ಯಾಭ್ಯಾಸ ನಡೆಸುವ ನಿಟ್ಟಿನಲ್ಲಿ ಎಲ್ಲರಿಗೂ ಟ್ಯಾಬ್ ನೀಡಲಾಗುತ್ತಿದೆ. ಸ್ಮಾರ್ಟ್ ಕ್ಲಾಸ್‍ಗಳು ಶುರುವಾಗುತ್ತಿವೆ. ಈಗಾಗಲೇ ಸಮಗ್ರ ಕಲಿಕಾ ನಿರ್ವಹಣಾ ವ್ಯವಸ್ಥೆ ಜಾರಿಗೆ ಬಂದಿದೆ ಎಂದು ಅವರು ಹೇಳಿದರು.

ಏಕೀಕೃತ ವಿವಿ-ಕಾಲೇಜು ನಿರ್ವಹಣಾ ವ್ಯವಸ್ಥೆ: ಮುಂದಿನ ದಿನಗಳಲ್ಲಿ ವಿ.ವಿಗಳು ಹಾಗೂ ಕಾಲೇಜುಗಳನ್ನು ಅನುಸಂಧಾನಗೊಳಿಸಿ ‘ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ’ ಮೂಲಕ ಈ ವರ್ಷದಿಂದಲೇ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು. ಇದಕ್ಕಾಗಿ ಪ್ರತ್ಯೇಕ ಡಿಜಿಟಲ್ ಪೋರ್ಟಲ್ ಸಿದ್ಧವಾಗುತ್ತಿದ್ದು, ಅದನ್ನು ಇ-ಗವರ್ನೆನ್ಸ್ ಇಲಾಖೆ ಅಭಿವೃದ್ಧಿಪಡಿಸುತ್ತಿದೆ ಎಂದು ಅಶ್ವತ್ಥ ನಾರಾಯಣ ತಿಳಿಸಿದರು.

ಜೂನ್ 25ರಿಂದ ಪ್ರಾಯೋಗಿಕವಾಗಿ ಇದನ್ನು ಬಳಸಲು ಸರಕಾರ ಅನುಮತಿ ನೀಡಿದ್ದು, ಜುಲೈ 15ಕ್ಕೆ ಲೋಕಾರ್ಪಣೆ ಆಗಲಿದೆ. ದಾಖಲಾತಿಗೆ ನಿಗದಿ ಮಾಡಿರುವ ದಿನಾಂಕಕ್ಕೆ ಮುನ್ನವೇ ಎಲ್ಲ ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಈ ಪೋರ್ಟಲ್ ಬಳಕೆಗೆ ಸಿದ್ಧವಾಗಿರಬೇಕು ಎಂದು ಕುಲಪತಿಗಳಿಗೆ ಸೂಚಿಸಲಾಗಿದೆ ಎಂದು ಅಶ್ವತ್ಥನಾರಾಯಣ ಹೇಳಿದರು.

ಅಲ್ಲದೆ, ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ಎಲ್ಲ ಚಟುವಟಿಕೆಗಳು ಇನ್ನು ಮುಂದೆ ಇ-ಆಫೀಸ್ ಮೂಲಕವೇ ನಡೆಯುತ್ತವೆ. ಕಾಗದ ಪತ್ರಗಳಿಗೆ ಅವಕಾಶ ಇಲ್ಲ ಎಂದು ಇದೇ ವೇಳೆ ಅವರು ಸ್ಪಷ್ಟವಾಗಿ ತಿಳಿಸಿದರು.

ಪಿಯುಸಿ ಪಾಸಾದವರೆಲ್ಲ ಸಿಇಟಿ ಬರೆಯಬಹುದು: ಸಿಇಟಿ ಪರೀಕ್ಷೆ ಬಗ್ಗೆ ಹೈಕೋರ್ಟ್ ನೀಡಿರುವ ಸೂಚನೆ ಬಗ್ಗೆ ಇನ್ನೂ ಮಾಹಿತಿ ಇಲ್ಲ. ಪ್ರಸಕ್ತ ವರ್ಷ ಪಿಯುಸಿ ಪಾಸಾದವರೆಲ್ಲ ಸಿಇಟಿ ಬರೆಯಬಹುದು. ನ್ಯಾಯಾಲಯ ನೀಡಿರುವ ಆದೇಶದ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮತ್ತು ಸಚಿವರ ಜತೆ ಚರ್ಚೆ ನಡೆಸಲಾಗುವುದು ಎಂದು ಅಶ್ವತ್ಥ ನಾರಾಯಣ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬಿಎಸ್ಸಿಗೆ ಸಿಇಟಿ ಮೂಲಕ ಪ್ರವೇಶ ಇಲ್ಲ

ಬಿಎಸ್ಸಿಗೆ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಮೂಲಕ ಪ್ರವೇಶ ನೀಡುವ ಚಿಂತನೆಯನ್ನು ಸರಕಾರ ಕೈಬಿಟ್ಟಿದೆ. ವಿಜ್ಞಾನ ಬೋಧನೆ ಮತ್ತು ಕಲಿಕೆಯಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಪದವಿ ವಿಜ್ಞಾನ ಪ್ರವೇಶಕ್ಕೂ ಸಿಇಟಿ ತರುವ ಯೋಚನೆ ಇತ್ತು. ಆದರೆ, ಸದ್ಯಕ್ಕೆ ಕೈಬಿಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X