ಅಂಬಲಪಾಡಿ: ಹಡಿಲು ಭೂಮಿ ಕೃಷಿ ನಾಟಿಗೆ ಸುನೀಲ್ ಕುಮಾರ್ ಚಾಲನೆ

ಉಡುಪಿ, ಜೂ.15: ಹಡಿಲು ಭೂಮಿ ಕೃಷಿ ಅಂದೋಲನದಡಿ ಕೇದಾ ರೋತ್ಥಾನ ಟ್ರಸ್ಟ್ ವತಿಯಿಂದ ಅಂಬಲಪಾಡಿ ಗ್ರಾಪಂ ವ್ಯಾಪ್ತಿಯ ಕಿದಿಯೂರು ಸಂಕೇಶ ವಿಠೋಬ ಭಜನಾ ಮಂಡಳಿಯ ಎದುರು ಇಂದು 5 ಎಕರೆ ಹಡಿಲು ಭೂಮಿ ಕೃಷಿಯ ನಾಟಿ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ಮತ್ಸ್ಯೋದ್ಯಮಿ ಹರಿಯಪ್ಪ ಕೋಟ್ಯಾನ್ ಅವರೊಂದಿಗೆ ಶಾಸಕ ಕೆ.ರಘುಪತಿ ಭಟ್ ಗದ್ದೆಗೆ ಹಾಲನ್ನು ಅರ್ಪಿಸುವ ಮೂಲಕ ಯಂತ್ರ ನಾಟಿಗೆ ಚಾಲನೆ ನೀಡಿದರು. ಕಾರ್ಕಳ ಶಾಸಕ ಹಾಗೂ ವಿಧಾನಸಭೆಯ ಮುಖ್ಯ ಸಚೇತಕ ವಿ.ಸುನೀಲ್ ಕುಮಾರ್ ನೇಜಿ ನೀಡುವ ಮೂಲಕ ಕೈ ನಾಟಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ಹರೀಶ್ ಶೆಟ್ಟಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಅಂಬಲಪಾಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ನೇಶನ್ ಫಸ್ಟ್ ಸಂಚಾಲಕ ಸೂರಜ್, ಅಂಬಲಪಾಡಿ ಗ್ರಾಪಂ ಮಾಜಿ ಉಪಾಧ್ಯಕ್ಷ ವೆಂಕಟರಮಣ ಕಿದಿಯೂರು, ಪ್ರಮುಖರಾದ ಹಿರಿಯಣ್ಣ ಕಿದಿಯೂರು, ವೇಣುಗೋಪಾಲ್, ಭಾಸ್ಕರ್ ಎ. ಕೋಟ್ಯಾನ್, ಅಂಬಲಪಾಡಿ ಗ್ರಾಪಂ ಸದಸ್ಯರಾದ ಉಷಾ ಶೆಟ್ಟಿ, ಸುಜಾತ ಸುಧಾಕರ್, ಅಂಬಲಪಾಡಿ ಗ್ರಾಮೋತ್ಥಾನ ಸಮಿತಿಯ ಪ್ರಧಾನ ಸಂಚಾಲಕ ಶಿವಕುಮಾರ್, ಕೇದಾರೋತ್ಥಾನ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ರಾಘವೇಂದ್ರ ಕಿಣಿ ಉಪಸ್ಥಿತರಿದ್ದರು







