Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಭಾರೀ ಮಳೆಗೆ ಬೈಂದೂರಿನ...

ಉಡುಪಿ: ಭಾರೀ ಮಳೆಗೆ ಬೈಂದೂರಿನ ಒತ್ತಿನೆಣೆಯಲ್ಲಿ ಗುಡ್ಡ ಕುಸಿತ

ಗುತ್ತಿಗೆದಾರರಿಂದ ಕಲ್ಲು-ಮಣ್ಣು ತೆರವು; ಸಂಚಾರ ಅಬಾಧಿತ

ವಾರ್ತಾಭಾರತಿವಾರ್ತಾಭಾರತಿ16 Jun 2021 7:15 PM IST
share
ಉಡುಪಿ: ಭಾರೀ ಮಳೆಗೆ ಬೈಂದೂರಿನ ಒತ್ತಿನೆಣೆಯಲ್ಲಿ ಗುಡ್ಡ ಕುಸಿತ

ಉಡುಪಿ, ಜೂ.16: ಕಳೆದೆರಡು ದಿನಗಳ ಸತತ ಮಳೆಯಿಂದ ಬೈಂದೂರು ತಾಲೂಕು ಪಡುವರಿ ಗ್ರಾಮದ ಒತ್ತಿನೆಣೆಯಲ್ಲಿ ಗುಡ್ಡದ ಒಂದು ಭಾಗ ಇಂದು ಮುಂಜಾನೆ ಕುಸಿದಿದ್ದು, ಆದರೆ ಇದರಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ವಾಹನ ಗಳ ಸಂಚಾರಕ್ಕೆ ಯಾವುದೇ ಅಡಚಣೆ ಉಂಟಾಗಲಿಲ್ಲ ಎಂದು ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮೀ ತಿಳಿಸಿದ್ದಾರೆ.

ಸುದ್ದಿ ತಿಳಿದು ತಕ್ಷಣ ಕಾರ್ಯಪ್ರವೃತ್ತರಾದ ಗುತ್ತಿಗೆದಾರರಾದ ಐಆರ್‌ಬಿ ಕಂಪೆನಿ, ಜೆಸಿಬಿ ಬಳಸಿ ಕಲ್ಲು-ಮಣ್ಣುಗಳನ್ನು ತೆರವುಗೊಳಿಸಿದೆ. ಈ ಸಂದರ್ಭ ದಲ್ಲಿ ಸುಮಾರು 20 ನಿಮಿಷಗಳ ಕಾಲ ಮಾತ್ರ ರಾ.ಹೆದ್ದಾರಿಯಲ್ಲಿ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು. ತಾನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಹೆದ್ದಾರಿಗೆ ಯಾವುದೇ ಅಪಾಯ ಉಂಟಾಗಿಲ್ಲ ಎಂದವರು ಹೇಳಿದರು.

ಈ ಹಿಂದೆ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ವೇಳೆ ಇಲ್ಲಿ ಗುಡ್ಡವನ್ನು ಕೊರೆದು ರಸ್ತೆ ನಿರ್ಮಿಸಲಾಗಿತ್ತು. ಕಳೆದೆರಡು ದಿನಗಳಿಂದ ಸುರಿದ ಸತತ ಮಳೆಯಿಂದಾಗಿ ತೇವಗೊಂಡ ಗುಡ್ಡದ ಕೆಲವು ಭಾಗ ಕುಸಿದಿದೆ. ಕಳೆದ ಬಾರಿ ಮಳೆಗಾಲದಲ್ಲೂ ಕೂಡ ಇದೇ ಭಾಗದಲ್ಲಿ ರಸ್ತೆ ಪಕ್ಕದ ಗುಡ್ಡ ಕುಸಿದಿತ್ತು. ಬಳಿಕ ಅಪಾಯಕಾರಿ ಸ್ಥಿತಿಯಲ್ಲಿದ್ದ ಗುಡ್ಡದ ಬುಗಳಿಗೆ ರಿವಿಟ್ಮೆಂಟ್ ನಿರ್ಮಿಸಲಾಗಿತ್ತು.

ಜೇಡಿಮಣ್ಣಿನ ಈ ಗುಡ್ಡದ ಕೆಲವು ಭಾಗ ಮಳೆಗಾಲದಲ್ಲಿ ಕುಸಿಯುತ್ತಾ ಇರುತ್ತದೆ. ನೀರು ಹರಿದು ಹೋಗಲು ಚರಂಡಿ ಹಾಗೂ ಕಾಂಕ್ರೀಟ್ ತಡೆಗೋಡೆ ಕಟ್ಟಿದರೂ ಗುಡ್ಡದ ಮಣ್ಣು ಕುಸಿಯುವುದು ಮುಂದುವರಿದಿದೆ.

ಮಳೆಯಿಂದ ಮನೆಗೆ ಹಾನಿ: ಸತತ ಗಾಳಿ-ಮಳೆಗೆ ಬೈಂದೂರು ತಾಲೂಕು ತಗ್ಗರ್ಸೆ ಗ್ರಾಮದ ನಾರಾಯಣ ಎಂಬವರ ವಾಸ್ತವ್ಯದ ಪಕ್ಕಾ ಮನೆಗೆ ಭಾರೀ ಹಾನಿಯಾಗಿದ್ದು, ಎರಡು ಲಕ್ಷ ರೂ.ಗಳಿಗೂ ಅಧಿಕ ನಷ್ಟ ಸಂಭವಿಸಿದೆ. ಅದೇ ರೀತಿ ಕಾಪು ತಾಲೂಕಿನ ಕಳತ್ತೂರು ಗ್ರಾಮದ ಅರುಣ ಶೇರಿಗಾರ್ತಿಯವರ ಮನೆ ಗಾಳಿ-ಮಳೆಯಿಂದ ಸಂಪೂರ್ಣ ಹಾನಿಗೊಂಡಿದ್ದು 1.5ಲಕ್ಷ ರೂ.ನಷ್ಟದ ಅಂದಾಜು ಮಾಡಲಾಗಿದೆ.

ಬೈಂದೂರು ತಾಲೂಕು ಕಂಬದಕೋಣೆಯ ಸಾಧು ಅವರ ಮನೆಗೆ 50,000, ಉಡುಪಿ ತಾಲೂಕು ಹೆರ್ಗಾದ ಮುಕುಂದ ನಾಯಕ್ ಮನೆಗೆ ಹಾಗೂ ಬ್ರಹ್ಮಾವರ ತಾಲೂಕು ಹಾರಾಡಿ ಗ್ರಾಮದ ಫಕೀರ್ ಸಾಹೇಬ್‌ರ ಮನೆಗಳಿಗೆ ತಲಾ 40,000ರೂ.ನಷ್ಟವಾಗಿದೆ.

ಕಾಪು ತಾಲೂಕು ಎಲ್ಲೂರು ಗ್ರಾಮದ ಸದಾಶಿವ ಶೆಟ್ಟಿ ಮನೆ ಹಾಗೂ ಕುತ್ಯಾರು ಗ್ರಾಮದ ಶ್ರೀಮತಿ ಆಚಾರ್ತಿ ಮನೆಗೆ ತಲಾ 25,000, ಮೂಡುಬೆಟ್ಟು ಗ್ರಾಮದ ಚಂದ್ರ ಪೂಜಾರಿ ಮನೆಗೆ 20,000ರೂ. ಕುತ್ಯಾರಿನ ನಾಗರತ್ನರ ಮನೆಗೆ 15,000ರೂ.ನಷ್ಟವಾಗಿದೆ.

ಉಳಿದಂತೆ ಕುತ್ಯಾರಿನ ಶಾಲಿನಿ, ಅಚ್ಚುತ ಆಚಾರ್ಯ, ಬ್ರಹ್ಮಾವರ ತಾಲೂಕು ಉಪ್ಪೂರು ಗ್ರಾಮದ ಹೆಲೆನಾ ಡೇಸಾ ಮನೆಗಳಿಗೂ ಗಾಳಿ-ಮಳೆಯಿಂದ ಹಾನಿಯಾದ ಬಗ್ಗೆ ವರದಿಗಳು ಬಂದಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X