ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿರಂತರ ಮಳೆ; ಜನಜೀವನ ಅಸ್ತವ್ಯಸ್ತ
ಕಾರುಗಳ ನಡುವೆ ಅಪಘಾತ

ಚಿಕ್ಕಮಗಳೂರು : ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ 3 ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.
ಭಾರಿ ಮಳೆಯಿಂದ ಹೇಮಾವತಿ ನದಿ ತುಂಬಿ ಹರಿಯುತ್ತಿದೆ. ಮೂಡಿಗೆರೆ ತಾಲೂಕಿನ ಮುಗ್ರಹಳ್ಳಿ ಸೇತುವೆ ಕುಸಿಯುವ ಹಂತ ತಲುಪಿದೆ ಎಂದು ಸ್ಥಳೀಯರು ತಿಳಿಸಿದ್ದು, ಆತಂಕ ವ್ಯಕ್ತಪಡಿಸಿದ್ದಾರೆ. ಸತತ ಮಳೆಯಿಂದ ಹೆಬ್ಬಾಳೆ ಸೇತುವೆ ಮುಳುಗುವ ಹಂತದಲ್ಲಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ನಿರಂತರ ಮಳೆಯಿಂದ 3 ದಿನಗಳಿಂದ ವಿದ್ಯುತ್ ಇಲ್ಲದೆ ಜನರು ಪರದಾಡುವಂತಾಗಿದೆ.
ಭಾರೀ ಮಳೆಗೆ ರಸ್ತೆ ಕಾಣದೆ ನಿಯಂತ್ರಣ ತಪ್ಪಿದ ಕಾರುಗಳ ನಡುವೆ ಬಿದರಹಳ್ಳಿ ಬಳಿ ಅಪಘಾತ ನಡೆದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
Next Story









