Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯಪಾಲರು ಮಧ್ಯ ಪ್ರವೇಶಿಸಿ ನಿಷ್ಕ್ರಿಯ...

ರಾಜ್ಯಪಾಲರು ಮಧ್ಯ ಪ್ರವೇಶಿಸಿ ನಿಷ್ಕ್ರಿಯ ರಾಜ್ಯ ಸರಕಾರವನ್ನು ವಜಾಗೊಳಿಸಬೇಕು: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ17 Jun 2021 4:48 PM IST
share
ರಾಜ್ಯಪಾಲರು ಮಧ್ಯ ಪ್ರವೇಶಿಸಿ ನಿಷ್ಕ್ರಿಯ ರಾಜ್ಯ ಸರಕಾರವನ್ನು ವಜಾಗೊಳಿಸಬೇಕು: ಸಿದ್ದರಾಮಯ್ಯ

ಬೆಂಗಳೂರು, ಜೂ.17: ಭಾರತೀಯ ಜನತಾ ಪಕ್ಷದ ಒಳಜಗಳದಿಂದಾಗಿ ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದುಬಿದ್ದಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ತಕ್ಷಣ ಮಧ್ಯ ಪ್ರವೇಶಿಸಿ ರಾಜ್ಯದ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಕೋರೊನ ನಿಯಂತ್ರಣದ ಮೇಲುಸ್ತುವಾರಿ ನೋಡಿಕೊಳ್ಳಬೇಕಾಗಿರುವ ರಾಜ್ಯದ ಸಚಿವರು ತಮ್ಮ ಕಚೇರಿಗೆ ಹೋಗದೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಬೀಡುಬಿಟ್ಟಿದ್ದಾರೆ. ತಮ್ಮ ಸ್ವಂತ ಕ್ಷೇತ್ರದಲ್ಲಿ ಜನರ ನೋವು-ಕಷ್ಟಗಳಿಗೆ ಸ್ಪಂದಿಸಬೇಕಾಗಿರುವ ಬಿಜೆಪಿ ಶಾಸಕರು ಬೆಂಗಳೂರಿನ ಪಕ್ಷದ ಕಚೇರಿಗೆ ಸುತ್ತುಹಾಕುತ್ತಿದ್ದಾರೆ. ಒಟ್ಟಿನಲ್ಲಿ ರಾಜ್ಯದಲ್ಲಿ ಸರ್ಕಾರವೇ ಇಲ್ಲದ ಅರಾಜಕ ಪರಿಸ್ಥಿರತಿ ನೆಲೆಯಾಗಿದೆ ಎಂದು ಅವರು ಟೀಕಿಸಿದ್ದಾರೆ.

ರಾಜ್ಯದಲ್ಲಿ ಮತ್ತೆ ಕೋರೊನ ಸೋಂಕು ಮತ್ತು ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೋನ ಸೋಂಕಿನ ನಿಯಂತ್ರಣದ ಬಗ್ಗೆ ನಿಗಾವಹಿಸುವವರೇ ಇಲ್ಲವಾಗಿದೆ. ಕೊರೋನ ಮೂರನೇ ಅಲೆ ನಿರೀಕ್ಷೆಗಿಂತಲೂ ಬೇಗನೇ ಬಂದು ಅಪ್ಪಳಿಸುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸುತ್ತಲೇ ಇದ್ದಾರೆ. ವ್ಯಾಕ್ಸಿನ್ ಪೂರೈಕೆಯಲ್ಲಿನ ಕೊರತೆ, ಡೋಸ್ ಅವಧಿಯ ಬಗೆಗಿನ ಗೊಂದಲ ಮತ್ತು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳ ನಡುವಿನ ತಿಕ್ಕಾಟಗಳಿಂದಾಗಿ ವ್ಯಾಕ್ಸಿನ್ ನೀಡುವ ಕೆಲಸವೂ ಕುಂಟುತ್ತಾ ಸಾಗಿದೆ.

ಮಳೆಗಾಲವಾಗಿರುವ ಕಾರಣ ಶೀತ-ಜ್ವರದ ಕಾಯಿಲೆಯೂ ಸಾಮಾನ್ಯವಾಗಿರುವ ಕಾರಣ ಕೊರೋನ ಸೋಂಕನ್ನು ನಿಖರವಾಗಿ ಪತ್ತೆಹಚ್ಚುವುದು ಕೂಡಾ ಸಮಸ್ಯೆಯಾಗಲಿದೆ. ಇನ್ನೊಂದೆಡೆ ಶಾಲಾ ಪರೀಕ್ಷೆ ಮತ್ತು ಬೋದನಾ ಶುಲ್ಕದ ಗೊಂದಲ ಇನ್ನೂ ಬಗೆಹರಿದಿಲ್ಲ. ಈ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳು ಸಚಿವರೆಲ್ಲರನ್ನೂ ವಿಶ್ವಾಸಕ್ಕೆ ಪಡೆದು ಒಗ್ಗಟ್ಟಿನಿಂದ ಇಂದಿನ ಆರೋಗ್ಯ ಸಂಬಂಧಿ ತುರ್ತುಪರಿಸ್ಥಿತಿಯನ್ನು ಎದುರಿಸಿ ರಾಜ್ಯದ ಜನತೆಯ ಹಿತಕಾಪಾಡಲು ಮುಂದಾಗಬೇಕಾಗಿತ್ತು. ಆದರೆ ಮುಖ್ಯಮಂತ್ರಿಗಳು ಶಾಸಕರು-ಸಚಿವರು ಮತ್ತು ಪಕ್ಷದ ಹೈಕಮಾಂಡ್ ನಾಯಕರ ಕೈಕಾಲು ಹಿಡಿದು ತಮ್ಮ ಕುರ್ಚಿ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಪರಸ್ಪರ ಕಚ್ಚಾಟದಲ್ಲಿ ತೊಡಗಿರುವ ರಾಜ್ಯದ ಬಿಜೆಪಿ ನಾಯಕರಿಗೆ ಕಿವಿ ಹಿಂಡಿ ಬುದ್ದಿ ಹೇಳಬೇಕಾದ ಬಿಜೆಪಿಯ ಹೈಕಮಾಂಡ್ ತಾನೇ ರಾಜ್ಯದ ನಾಯಕರನ್ನು ಪರಸ್ಪರ ಎತ್ತಿಕಟ್ಟಿ ಕಳ್ಳಾಟ ಆಡುತ್ತಿದೆ. ರಾಜ್ಯದ ಹಿತಾಸಕ್ತಿಗೆ ಮಾರಕವಾಗಿರುವ ಈ ಭಿನ್ನಮತವನ್ನು ನಿಯಂತ್ರಿಸಲಿಕ್ಕಾಗದ ನರೇಂದ್ರ ಮೋದಿಯವರು ತಾವೊಬ್ಬ ದುರ್ಬಲ ನಾಯಕನೆಂದು ತಾವೇ ಸಾಬೀತುಪಡಿಸಿಕೊಳ್ಳುತ್ತಿದ್ದಾರೆ. 56 ಇಂಚಿನ ಎದೆಯವನು ಎಂದು ಕೊಚ್ಚಿಕೊಳ್ಳುತ್ತಿರುವ ನರೇಂದ್ರ ಮೋದಿಯವರು ತನ್ನ ಎದೆ ಸುತ್ತಳತೆ ಎಷ್ಟಿದೆ ಎನ್ನುವುದನ್ನಾದರೂ ಅವರು ಸ್ಪಷ್ಟಪಡಿಸಲಿ ಎಂದು ಸಿದ್ದರಾಮಯ್ಯ ಪ್ರಕಟನೆಯಲ್ಲಿ ಕುಟುಕಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X