Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಾಯಕತ್ವವೇ ಇಲ್ಲದ ಈ ಸರಕಾರ ಇದ್ದೇನು...

ನಾಯಕತ್ವವೇ ಇಲ್ಲದ ಈ ಸರಕಾರ ಇದ್ದೇನು ಉಪಯೋಗ, ವಿಸರ್ಜಿಸಿ ಮೊದಲು: ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ17 Jun 2021 5:21 PM IST
share
ನಾಯಕತ್ವವೇ ಇಲ್ಲದ ಈ ಸರಕಾರ ಇದ್ದೇನು ಉಪಯೋಗ, ವಿಸರ್ಜಿಸಿ ಮೊದಲು: ಕುಮಾರಸ್ವಾಮಿ

ಬೆಂಗಳೂರು, ಜೂ. 17: ಸರಕಾರದಲ್ಲಿ ನಾಯತ್ವ ಬಿಕ್ಕಟ್ಟು ಎದುರಾಗಿದೆಯಂತೆ, ನಾಯಕತ್ವ ಬದಲಿಸಲು ಸೂಕ್ತ ನಾಯಕನ ಹುಡುಕಾಟ ನಡೆದಿದೆಯಂತೆ, ಆದರೆ, ಯಾವ ನಾಯಕರೂ ಸಿಗುತ್ತಿಲ್ಲವಂತೆ, ಬಿಜೆಪಿಯಲ್ಲಿ ಮುಖ್ಯಮಂತ್ರಿ(ಸಿಎಂ) ಆಗಬಲ್ಲ ನಾಯಕನೇ ಇಲ್ಲವಂತೆ...' ಇವೆಲ್ಲವೂ ಬಿಜೆಪಿಯೊಳಗಿನ ಚರ್ಚೆಗಳ ಮಾಧ್ಯಮಗಳ ವರದಿ. ನಾಯಕತ್ವವೇ ಇಲ್ಲದ ಈ ಸರಕಾರ ಇದ್ದೇನು ಉಪಯೋಗ. ವಿಸರ್ಜಿಸಿ ಮೊದಲು' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಗುರುವಾರ ಸರಣಿ ಟ್ವೀಟ್ ಮಾಡಿರುವ ಅವರು, `ಕರ್ನಾಟಕದ ಸರಕಾರವನ್ನು ನಡೆಸುತ್ತಿರುವ ಬಿಜೆಪಿಗೆ ಸರಿಯಾಗಿ ಹೊಂದುವ ಬಸವಣ್ಣನವರ ವಚನವಿದು. `ಮನೆಯೊಳಗೆ ಮನೆಯೊಡೆಯನಿದ್ದಾನೊ ಇಲ್ಲವೊ, ಹೊಸ್ತಿಲಲ್ಲಿ ಹುಲ್ಲು ಹುಟ್ಟಿ, ಮನೆಯೊಳಗೆ ರಜ ತುಂಬಿ, ಮನೆಯೊಳಗೆ ಮನೆಯೊಡೆಯನಿದ್ದಾನೊ ಇಲ್ಲವೊ'..-ಕೂಡಲ ಸಂಗಮದೇವ. ಬಿಜೆಪಿಯಲ್ಲಿ ನಾಯಕತ್ವ ಇದೆಯೋ ಇಲ್ಲವೋ ಎಂಬುದರ ಬಗ್ಗೆ ಅನುಮಾನಗಳು ಮೂಡುತ್ತಿವೆ' ಎಂದು ಟೀಕಿಸಿದ್ದಾರೆ.

'ನಾವಿಕನಿಲ್ಲದ ನಾವೆ, ಯಜಮಾನನಿಲ್ಲದ ಮನೆ, ನಾಯಕನಿಲ್ಲದ ಸರಕಾರ ಇದು ಅಪಾಯಕಾರಿ. ಅದೂ ಕೋವಿಡ್ ಸಾಂಕ್ರಾಮಿಕ ಕಾಲದಲ್ಲಿ ಮತ್ತಷ್ಟು ಅಪಾಯಕಾರಿ. ಈಗಿನ ಸರಕಾರದ ನಾಯಕತ್ವ ಸರಿ ಇಲ್ಲ ಎಂದು ಬಿಜೆಪಿ ಶಾಸಕರೇ ಬಂಡೆದಿದ್ದಾರಂತೆ. ಇರುವವರನ್ನು ಬದಲಿಸಲು ನಾಯಕರು ಯಾರೂ ಇಲ್ಲವಂತೆ. ಹಾಗಾಗಿ ಈ ಸರಕಾರ ಜನರ ಪಾಲಿಗೆ ಅಪಾಯಕಾರಿಯಾಗಿದೆ ಎಂದರ್ಥ' ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

`ದೇಶದ ಅಭಿವೃದ್ಧಿಗಾಗಿ ಸಮರ್ಥ ನಾಯಕತ್ವ ಪ್ರತಿಪಾದಿಸುವ ಬಿಜೆಪಿ, ನಾಯಕತ್ವವೇ ಇಲ್ಲದ ಈ ಸರಕಾರವನ್ನು ಅದು ಹೇಗೆ ಸಹಿಸಿಕೊಂಡಿದೆ. ನಾಯಕತ್ವ ಸರಿ ಇಲ್ಲ ಎಂದು ಶಾಸಕರೇ ಹೇಳುತ್ತಿರುವಾಗ ನಾಯಕತ್ವ ಬದಲಿಸಲು ಏಕೆ ಇಷ್ಟು ತಿಣುಕಾಡುತ್ತಿದೆ. ಹಾಗೊಂದು ನಾಯಕತ್ವವೇ ಇಲ್ಲದ ಮೇಲೆ ಬಿಜೆಪಿ ಸರಕಾರ ವಿಸರ್ಜಿಸಿ, ಅಧಿಕಾರದಿಂದ ದೂರ ಉಳಿಯಬಾರದೇಕೆ?' ಎಂದು ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಹಿಂದೆ ರಾಜ್ಯದಲ್ಲಿ ಅಸ್ತಿತ್ವದಲ್ಲಿದ್ದ `ರಾಕ್ಷಸ ಸರಕಾರ'ವನ್ನು ಜನರ ಹಿತಕ್ಕಾಗಿ, ಅಭಿವೃದ್ಧಿಗಾಗಿ ಕೆಡವಿದ `ಸಮಾಜ ಸುಧಾರಕರು' ಇರುವ ಪಕ್ಷ ಬಿಜೆಪಿ. ಈಗ ನಾಯಕತ್ವವಿಲ್ಲದ 'ಅಪಾಯಕಾರಿ ಸರಕಾರ'ದ ಬಗ್ಗೆ ಆ ಸಮಾಜ ಸುಧಾರಕರು ಸುಮ್ಮನಿರುವುದಾದರೂ ಹೇಗೆ. ಈ ಸಮಾಜ ಸುಧಾರಕರ ದಿವ್ಯ ಮೌನ ನನಗೆ ಆಶ್ಚರ್ಯ ತರಿಸುತ್ತಿದೆ. ಆತಂಕ ಉಂಟು ಮಾಡಿದೆ' ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

`ಕೋವಿಡ್, ಲಾಕ್‍ಡೌನ್‍ಗಳಿಂದ ತತ್ತರಿಸಿರುವ ಕ್ಷೋಬೆಯ ಕಾಲವಿದು. ಆಳುವವರು ಅಂದುಕೊಂಡಷ್ಟು ನೆಮ್ಮದಿಯಿಂದ ಜನ ಬದುಕುತ್ತಿಲ್ಲ. ಅವರ ಬದುಕು ಕಷ್ಟದಲ್ಲಿದೆ. ಈ ಸಂದರ್ಭದಲ್ಲಿ ಆಡಳಿತಾರೂಢ ಬಿಜೆಪಿಯಲ್ಲಿ ನಡೆಯುತ್ತಿರುವ ಈ ಅಧಿಕಾರ ದಾಹದ ವರ್ತನೆ ಜನರನ್ನು ಗೇಲಿ ಮಾಡುತ್ತಿದೆ. ಇದರ ಕಿಂಚಿತ್ತು ಪಾಪಪ್ರಜ್ಞೆಯಾದರೂ ಬಿಜೆಪಿಗೆ ಇರಬೇಕಿತ್ತು' ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

`ಇನ್ನೊಂದೆಡೆ, ಬಿಜೆಪಿಯ ದುರಾಡಳಿತ ಕಂಡು ಜನರಿಗೆ ವೈರಾಗ್ಯ ಬಂದಿದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಅಭಿಪ್ರಾಯಪಟ್ಟಿದ್ದಾರೆ. ಈ ದುರಾಡಳಿತ ಬರಲು, ಆದುದರಿಂದ ಜನರಿಗೆ ವೈರಾಗ್ಯ ಮೂಡಲು ಕಾರಣರಾರು? ಇದೇ ಕಾಂಗ್ರೆಸ್ ಅಲ್ಲವೇ? ಮೈತ್ರಿಕೂಟದಲ್ಲಿದ್ದೂ ಮಿತ್ರ ಪಕ್ಷದ ಮೇಲಿನ ದ್ವೇಷ, ಅಸೂಯೆಯಿಂದ ಶಾಸಕರನ್ನು ಓಡಿಹೋಗುವಂತೆ ಮಾಡಿದ್ದರ ಫಲವಿದು' ಎಂದು ಪರೋಕ್ಷವಾಗಿ ಕಾಂಗ್ರೆಸ್ ಮುಖಂಡರ ವಿರುದ್ದ ಕಿಡಿಕಾರಿದ್ದಾರೆ.

ಬಿಜೆಪಿ ಆಡಳಿತದಿಂದ ಈಗ ಜನರಿಗೆ ವೈರಾಗ್ಯ ಬಂದಿದೆ. ಈ ವೈರಾಗ್ಯದ ಹಿಂದಿನ ಶಕ್ತಿಯಾಗಿರುವ ಕಾಂಗ್ರೆಸ್ ಈಗ ಆತ್ಮಾವಲೋಕನ ಮಾಡಿಕೊಳ್ಳಲಿದೆಯೇ? ತಾನು ಮಾಡಿದ ತಪ್ಪಿನಿಂದ ಉಂಟಾದ ಅನಾಹುತದ ಬಗ್ಗೆ ಕಾಂಗ್ರೆಸ್‍ಗೆ ಈಗ ಪಶ್ಚಾತ್ತಾಪ ಮೂಡಿದಂತಿದೆ. ಆದರೆ, ಈ ಅನಾಹುತ ಹೊಣೆಗಾರ ಕಾಂಗ್ರೆಸ್ ಎಂಬುದನ್ನು ಮಾತ್ರ ಅದರ ನಾಯಕರು ಎಂದಿಗೂ ಮರೆಯಬಾರದು'

-ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X