Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಳೆ ರೋಗದಿಂದ ಅಡಿಕೆ ಮರಗಳ ರಕ್ಷಣಾ...

ಕೊಳೆ ರೋಗದಿಂದ ಅಡಿಕೆ ಮರಗಳ ರಕ್ಷಣಾ ವಿಧಾನ

ವಾರ್ತಾಭಾರತಿವಾರ್ತಾಭಾರತಿ17 Jun 2021 5:49 PM IST
share

ಉಡುಪಿ, ಜೂ.17: ಜಿಲ್ಲೆಯಲ್ಲಿ ಮಳೆಗಾಲ ಪ್ರಾರಂಭಗೊಂಡಿದ್ದು, ಅಧಿಕ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಅಡಿಕೆ ಬೆಳೆ ಮೇಲೆ ಪರಿಣಾಮ ಬೀರಲಿದೆ. ಮೋಡ ಕವಿದ ವಾತಾವರಣ, ತೋಟದಲ್ಲಿ ನೀರು ನಿಲ್ಲುವಿಕೆ, ಹೆಚ್ಚಾದ ಮಣ್ಣಿನ ತೇವಾಂಶ, ಪೋಷಕಾಂಶಗಳು ಕೊಚ್ಚಿ ಹೋಗುವುದು ಮತ್ತು ಸೂರ್ಯನ ಬೆಳಕಿನ ಕೊರತೆ ಮುಂತಾದ ಹಲವು ಕಾರಣಗಳಿಂದ ಅಡಿಕೆ ಬೆಳೆಯಲ್ಲಿ ಕೊಳೆರೋಗ ಉಲ್ಬಣಗೊಳ್ಳುವ ಸಾಧ್ಯತೆ ಇರುತ್ತದೆ.

ಹೀಗಾಗಿ ಕೊಳೆ ರೋಗದಿಂದ ಆಗಬಹುದಾದ ಹಾನಿಯ ಪ್ರಮಾಣ ಕಡಿಮೆ ಮಾಡಲು ಮತ್ತು ಸಂರಕ್ಷಣೆ ದೃಷ್ಟಿಯಿಂದ ಈ ಕೆಳಕಂಡ ಕೆಲವು ಅವಶ್ಯ ಕ್ರಮ ಗಳನ್ನು ಕೈಗೊಳ್ಳುವಂತೆ ಜಿಲ್ಲಾ ತೋಟಗಾರಿಕೆ ಇಲಾಖೆಯ ಪ್ರಕಟಣೆ ತಿಳಿಸಿದೆ.

ಕೆಳಗೆ ಬಿದ್ದಿರುವ ರೋಗಪೀಡಿತ ಕಾಯಿಗಳನ್ನು ಹಾಗೂ ಒಣಗಿದ ಹಿಂಗಾರ ಗಳನ್ನು ತೆಗೆದು ಸುಡಬೇಕು ಅಥವಾ ತೋಟದಿಂದ ಹೊರಗೆ ಗುಂಡಿಗಳಲ್ಲಿ ಹಾಕಿ ಮಣ್ಣಿನಿಂದ ಮುಚ್ಚಬೇಕು. ತೋಟಗಳಲ್ಲಿ ಆದಷ್ಟು ಸ್ವಚ್ಛತೆಯನ್ನು ಕಾಪಾಡಬೇಕು. ತೋಟಗಳಲ್ಲಿ ನೀರು ನಿಲ್ಲದಂತೆ ಬಸಿಲುಗಾಲುವೆಗಳನ್ನು ಮಾಡಿ ನೀರು ಹರಿದು ಹೋಗಲು ವ್ಯವಸ್ಥೆ ಮಾಡಬೇಕು.

ತೋಟದಲ್ಲಿ ಅಲ್ಲಲ್ಲಿ ಅಡಿಕೆ ಸಿಪ್ಪೆ, ಭತ್ತದ ಹೊಟ್ಟು ಹಾಗೂ ಇತರೆ ತ್ಯಾಜ್ಯ ವಸ್ತುಗಳನ್ನು ಬಳಸಿ ಹೊಗೆ ಹಾಕಬೇಕು.

ತೋಟದ ಸುತ್ತ ಇರುವ ಕಾಡುಮರಗಳ ಮತ್ತು ಅಂತರ ಬೆಳೆಗಳ ಹೆಚ್ಚುವರಿ ರೆಂಬೆ ಕೊಂಬೆಗಳನ್ನು ಕತ್ತರಿಸಿ ತೆಗೆದು ಗಾಳಿಯಾಡುವಂತೆ ಮಾಡಬೇಕು. ಕೊಳೆರೋಗ ನಿಯಂತ್ರಣಕ್ಕೆ ಈಗಾಗಲೇ ಔಷಧ ಸಿಂಪರಣೆ ಮಾಡಿ 30-40 ದಿನಗಳಾಗಿದ್ದಲ್ಲಿ ಮುಂಜಾಗ್ರತೆಯಾಗಿ ಮತ್ತೊಮ್ಮೆ ಶೇಕಡಾ 1ರ ಬೋರ್ಡೋ ದ್ರಾವಣವನ್ನು ಸಿಂಪಡಿಸಬೇಕು.

ಈಗಾಗಲೇ ಕೊಳೆರೋಗ ಬಂದಿರುವ ತೋಟಗಳಲ್ಲಿ ಕೊಳೆರೋಗ ಪೀಡಿತ ಅಡಿಕೆ ಮರಗಳು ಸುಳಿಕೊಳೆ/ಚಂಡೆ ಕೊಳೆ ರೋಗಕ್ಕೆ ತುತ್ತಾಗುವ ಸಾಧ್ಯತೆ ಗಳಿದ್ದು, ಇದನ್ನು ತಡೆಯಲು ಕೊಳೆರೋಗ ಪೀಡಿತ ಅಡಿಕೆ ಮರದ ಗೊನೆಗಳಿಗೆ ಮತ್ತು ಕೆಳಭಾಗದ ಮೂರ್ನಾಲ್ಕು ಹೆಡೆಗಳಿಗೆ ಮೆಟಲಾಕ್ಸಿಲ್ ಎಂ.ಝಡ್ 2 ಗ್ರಾಂ. ಅಥವಾ ಶೇ.1ರ ಬೋರ್ಡೋ ದ್ರಾವಣ ಅಥವಾ 3 ಗ್ರಾಂ. ತಾಮ್ರದ ಆಕ್ಸಿಕ್ಲೋರೈಡ್ ಅನ್ನು ಪ್ರತಿ ಲೀಟರ್ ನೀರಿಗೆ ಬೆರೆಸಿ ಅಡಿಕೆ ಗೊನೆಗಳು, ಎಲೆ ತೊಟ್ಟು ಮತ್ತು ಸುಳಿಭಾಗಗಳು ಚೆನ್ನಾಗಿ ನೆನೆಯುವಂತೆ ಮಳೆ ಬಿಡುವಿದ್ದಾಗ ಸಿಂಪಡಿಸಬೇಕು.

ಈ ಎಲ್ಲಾ ಕ್ರಮಗಳನ್ನು ಅನುಸರಿಸಿದ್ದಲ್ಲಿ ಅಡಿಕೆ ಮರಗಳು ಕೊಳೆರೋಗ/ಸುಳಿ ಕೊಳೆ ರೋಗದಿಂದ ಸಾಯುವುದನ್ನು ತಪ್ಪಿಸಬಹುದಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ತೋಟಗಾರಿಕೆ ಮಾಹಿತಿ ಮತ್ತು ಸಲಹಾ ಕೇಂದ್ರ, ದೂ.ಸಂಖ್ಯೆ:0820-2522837ನ್ನು ಸಂಪರ್ಕಿಸುವಂತೆ ತೋಟಗಾರಿಕಾ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X