Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿ ಶಾಸಕ ಬೆಲ್ಲದ್ ಪೋನ್ ಕದ್ದಾಲಿಕೆ:...

ಬಿಜೆಪಿ ಶಾಸಕ ಬೆಲ್ಲದ್ ಪೋನ್ ಕದ್ದಾಲಿಕೆ: ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆಗೆ ಸಿದ್ದರಾಮಯ್ಯ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ17 Jun 2021 7:02 PM IST
share
ಬಿಜೆಪಿ ಶಾಸಕ ಬೆಲ್ಲದ್ ಪೋನ್ ಕದ್ದಾಲಿಕೆ: ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆಗೆ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು, ಜೂ.17: ಬಿಜೆಪಿಯ ಭಿನ್ನಮತೀಯ ಶಾಸಕನ ಪೋನ್ ಕದ್ದಾಲಿಕೆ ಆರೋಪದ ಬಗ್ಗೆ ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ತನ್ನ ಪೋನ್ ಟ್ಯಾಪ್ ಆಗುತ್ತಿದೆ ಎಂದು ಬಿಜೆಪಿಯ ಭಿನ್ನಮತೀಯ ಶಾಸಕ ಅರವಿಂದ್ ಬೆಲ್ಲದ್ ಅವರು ಮಾಡಿರುವ ಆರೋಪ ಗಂಭೀರ ಸ್ವರೂಪದ್ದಾಗಿದೆ. ಈ ಆರೋಪವನ್ನು ತಿಪ್ಪೆ ಸಾರಿಸುವ ಸ್ಪಷ್ಟೀಕರಣದ ಮೂಲಕ ಮುಚ್ಚಿಹಾಕುವ ಪ್ರಯತ್ನ ಮಾಡದೆ ಈ ಬಗ್ಗೆ ಹೈಕೋರ್ಟ್ ನ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಿ ಸತ್ಯ ಸಂಗತಿಯನ್ನು ಬಯಲಿಗೆ ತರಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಪೋನ್ ಟ್ಯಾಪಿಂಗ್ ಆಗುತ್ತಿರುವುದನ್ನು ಬಹಿರಂಗಪಡಿಸುವ ಧೈರ್ಯ ತೋರಿದ ಶಾಸಕ ಅರವಿಂದ ಬೆಲ್ಲದ್ ಅವರನ್ನು ಅಭಿನಂದಿಸುತ್ತೇನೆ. ಇದು ಕೇವಲ ಬೆಲ್ಲದ ರೊಬ್ಬರ ಪೋನ್ ಗೆ ಸಂಬಂಧಿಸಿದ್ದಾಗಿರಲಿಕ್ಕಿಲ್ಲ, ರಾಜ್ಯ ಬಿಜೆಪಿಯಲ್ಲಿ ಭಿನ್ನಮತೀಯರೆಂದು ಗುರುತಿಸಿಕೊಂಡಿರುವ ಇತರ ಶಾಸಕರು ಮಾತ್ರವಲ್ಲ ವಿರೋಧ ಪಕ್ಷದ ನಾಯಕರ ಪೋನ್ ಗಳ ಕದ್ದಾಲಿಕೆಯೂ ನಡೆದಿರುವ ಎಲ್ಲ ಸಾಧ್ಯತೆಗಳೂ ಇವೆ ಎಂದು ತಿಳಿಸಿದ್ದಾರೆ.

ರಾಜ್ಯ ಬಿಜೆಪಿಯ ಭಿನ್ನಮತೀಯ ನಾಯಕರಿಂದ ಮುಖ್ಯಮಂತ್ರಿಗಳನ್ನು ಪದಚ್ಯುತಿಗೊಳಿಸುವ ಪ್ರಯತ್ನ ನಡೆಯುತ್ತಿರುವ ಸಂದರ್ಭದಲ್ಲಿಯೇ ಇಂತಹದ್ದೊಂದು ಆರೋಪ ವ್ಯಕ್ತವಾಗಿದೆ. ಅರವಿಂದ ಬೆಲ್ಲದ್ ಅವರು ಭಿನ್ನಮತೀಯರ ಜೊತೆ ಗುರುತಿಸಿಕೊಂಡಿರುವ ಪ್ರಮುಖ ಶಾಸಕರೂ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಆರೋಪದ ಗುರಿ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪನವರೇ ಆಗಿರುತ್ತಾರೆ. ಬೆಲ್ಲದ್ ಅವರ ಆರೋಪದ ತನಿಖೆಯನ್ನು ರಾಜ್ಯ ಸರ್ಕಾರದ ನಿಯಂತ್ರಣದಲ್ಲಿರುವ ಯಾವ ಸಂಸ್ಥೆ ನಡೆಸಿದರೂ ಅದರಿಂದ ಸತ್ಯ ಸಂಗತಿ ಖಂಡಿತ ಹೊರಬರಲಾರದು. ಆದ್ದರಿಂದ ಈ ತನಿಖೆಯನ್ನು ಹೈಕೋರ್ಟ್ ನ ಹಾಲಿ ನ್ಯಾಯಾಧೀಶರಿಂದಲೇ ನಡೆಸುವುದು ಸೂಕ್ತವಾಗಿದೆ. ಬೆಲ್ಲದ್ ಅವರು ತನ್ನ ಆರೋಪದಲ್ಲಿ ಈಗಾಗಲೇ ಜೈಲಲ್ಲಿರುವ ಬಿಜೆಪಿಯ ರಾಜ್ಯ ಮತ್ತು ಕೇಂದ್ರ ನಾಯಕರ ಒಡನಾಡಿಯಾಗಿದ್ದ ಯುವರಾಜ ಸ್ವಾಮಿ ಎಂಬ ವ್ಯಕ್ತಿಯ ಹೆಸರೂ ಪ್ರಸ್ತಾಪವಾಗಿದೆ. ಈ ಬಗ್ಗೆಯೂ ತನಿಖೆಯಾಗಬೇಕಾಗಿದೆ ಎಂದು ಒತ್ತಾಯಿಸಿದ್ದಾರೆ.

ಪೋನ್ ಗಳನ್ನು ಕದ್ದಾಲಿಸುವ ಹತಾಶ ಸ್ಥಿತಿಗೆ ಮುಖ್ಯಮಂತ್ರಿಗಳು ಇಳಿದಿರುವುದು ಪಕ್ಷದ ಶಾಸಕರ ವಿಶ್ವಾಸವನ್ನು ಅವರು ಕಳೆದುಕೊಂಡಿರುವುದಕ್ಕೆ ಸಾಕ್ಷಿಯಾಗಿದೆ. ಹಣದ ಆಮಿಷವೊಡ್ಡಿ ಅಡ್ಡ ಮಾರ್ಗದ ಮೂಲಕ ಮುಖ್ಯಮಂತ್ರಿಯಾಗುವ ತನ್ನ ಆಸೆ ತೀರಿಸಿಕೊಂಡ ಯಡಿಯೂರಪ್ಪನವರಿಗೆ ಮುಖ್ಯಮಂತ್ರಿಯಾದಾಗಲೂ ಶಾಸಕರ ಬೆಂಬಲ ಇರಲಿಲ್ಲ, ಈಗಲೂ ಇಲ್ಲ. ಇಡೀ ರಾಜ್ಯ ಕೊರೋನ ಸೋಂಕಿನಿಂದ ತತ್ತರಿಸಿ ಹೋಗಿರುವ ರಾಜ್ಯದ ಜನತೆ ನಿಧಾನವಾಗಿ ಚೇತರಿಸಿಕೊಳ್ಳುತ್ತಿರುವಾಗಲೇ ಆಡಳಿತಾರೂಢ ಬಿಜೆಪಿಯ ನಾಯಕರು ಬೀದಿಬೀದಿಗಳಲ್ಲಿ ಕಚ್ಚಾಟಕ್ಕೆ ಇಳಿದಿರುವುದು ನೋಡಿದರೆ ಇವರಿಗೆ ಅಧಿಕಾರದ ಲಾಲಸೆ ಮಾತ್ರ ಇದೆ ಹೊರತು ರಾಜ್ಯದ ಜನರ ಹಿತರಕ್ಷಣೆಯ ಕಾಳಜಿ ಕಿಂಚಿತ್ತೂ ಇಲ್ಲ ಎನ್ನುವುದು ಸಾಬೀತಾಗಿದೆ ಎಂದು ಟೀಕಿಸಿದ್ದಾರೆ.

ಭಿನ್ನಮತೀಯ ಚಟುವಟಿಕೆಗಳಿಂದಾಗಿ ರಾಜ್ಯದ ಆಡಳಿತ ಯಂತ್ರ ಸಂಪೂರ್ಣವಾಗಿ ಸ್ಥಬ್ಧವಾಗಿದೆ. ಈ ಪರಿಸ್ಥಿತಿಯನ್ನು ಘನತೆವೆತ್ತ ರಾಜ್ಯಪಾಲರು ಗಂಭೀರವಾಗಿ ಪರಿಗಣಿಸಿ ಈ ಜನದ್ರೋಹಿ ಸರ್ಕಾರವನ್ನು ವಜಾ ಮಾಡಬೇಕು ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X