Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ...

ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ: ಡಿಸಿಎಂ ಅಶ್ವತ್ಥನಾರಾಯಣ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ17 Jun 2021 8:33 PM IST
share
ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ: ಡಿಸಿಎಂ ಅಶ್ವತ್ಥನಾರಾಯಣ ಸ್ಪಷ್ಟನೆ

ಬೆಂಗಳೂರು, ಜೂ.17: ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆಯನ್ನು ಮೊಟಕುಗೊಳಿಸುವ ಯಾವುದೇ ಚಿಂತನೆ ಅಥವಾ ಪ್ರಸ್ತಾವನೆ ಸರಕಾರದ ಮುಂದಿಲ್ಲ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.

ಗುರುವಾರ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸ್ಥಳೀಯ ಹಾಗೂ ಪ್ರಾದೇಶಿಕ ಭಾಷೆಗಳಿಗೆ ಹೆಚ್ಚು ಮನ್ನಣೆ ನೀಡಿ ಆ ಭಾಷೆಗಳಲ್ಲೆ ವೃತ್ತಿಪರ ಶಿಕ್ಷಣ ಸೇರಿ ಎಲ್ಲ ವಿಭಾಗದ ಉನ್ನತ ಶಿಕ್ಷಣವನ್ನು ಬೋಧಿಸಬೇಕು ಎಂಬುದು ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯ. ಈ ಅಂಶಕ್ಕೆ ಶಿಕ್ಷಣ ನೀತಿಯಲ್ಲಿ ಹೆಚ್ಚು ಒತ್ತು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ, ಪದವಿ ಶಿಕ್ಷಣ ಸಂರಚನೆ ಹೀಗಿರುತ್ತದೆ. ಮೂರು ವರ್ಷ ವ್ಯಾಸಂಗ ಮಾಡಿದರೆ ಪದವಿ ಮುಗಿಯುತ್ತದೆ. ನಾಲ್ಕು ವರ್ಷ ಓದಿದರೆ ಅದನ್ನು ಡಿಗ್ರಿ ಆನರ್ಸ್ ಎಂದು ಪರಿಗಣಿಸಲಾಗುತ್ತದೆ, ಮತ್ತು ಐದು ವರ್ಷ ವ್ಯಾಸಂಗ ಮಾಡಿದರೆ ಸ್ನಾತಕೋತ್ತರ ಪದವಿಯೇ ಪೂರ್ಣಗೊಳಿಸಿದಂತೆ ಆಗುತ್ತದೆ. ಇದು ಪೂರ್ವ ವ್ಯವಸ್ಥೆಯ ಸುಧಾರಣಾ ಕ್ರಮವಷ್ಟೇ ಎಂದು ಉಪ ಮುಖ್ಯಮಂತ್ರಿ ವಿವರಿಸಿದ್ದಾರೆ.

ಈ ವಿಷಯ ಇನ್ನು ಕರಡು ತಯಾರಿಕೆ ಹಂತದಲ್ಲಿದೆ. ಈಗಲೇ ಅದರ ಬಗ್ಗೆ ಆತಂಕಪಡುವ ಅಗತ್ಯ ಇಲ್ಲ. ಮುಖ್ಯವಾಗಿ ಪದವಿ ಶಿಕ್ಷಣದಲ್ಲಿ ಎರಡು ವರ್ಷ ಕನ್ನಡ ಬೋಧನೆ ಆಗುತ್ತಿರುವ ಹಾಲಿ ವ್ಯವಸ್ಥೆಯಲ್ಲಿ ಯಾವ ಬದಲಾವಣೆಯೂ ಇರುವುದಿಲ್ಲ. ಮಾತೃಭಾಷೆ ಕಲಿಕೆಯನ್ನು ಒಂದು ವರ್ಷಕ್ಕೆ ಸೀಮಿತಗೊಳಿಸುವ ಬಗ್ಗೆ ಸರಕಾರ ಚಿಂತನೆ ನಡೆಸಿಲ್ಲ ಎಂದು ಅಶ್ವತ್ಥನಾರಾಯಣ ಪುನುರುಚ್ಛರಿಸಿದ್ದಾರೆ.

ಶಿಕ್ಷಣದಲ್ಲಿ ಗುಣಮಟ್ಟ ಹಾಗೂ ಜಾಗತಿಕ ದೃಷ್ಟಿ ಇಟ್ಟುಕೊಂಡು ಅತ್ಯಂತ ಪುರಾತನ ಭಾಷೆಯಾದ ಕನ್ನಡದ ಭೋಧನೆ ಮತ್ತು ಕಲಿಕೆಯನ್ನು ಮತ್ತಷ್ಟು ವಿಸ್ತೃತಗೊಳಿಸುವ ಉದ್ದೇಶ ಸರಕಾರಕ್ಕೆ ಇದೆಯೇ ವಿನಾ, ಅದಕ್ಕೆ ಧಕ್ಕೆ ಉಂಟು ಮಾಡುವ ಯಾವುದೇ ಚಿಂತನೆ ಹೊಂದಿಲ್ಲ. ಈ ಬಗ್ಗೆ ಯಾವುದೇ ತಪ್ಪು ಅಭಿಪ್ರಾಯ ಉಂಟಾಗುವುದು ಬೇಡ ಎಂದು ಅವರು ಮನವಿ ಮಾಡಿದ್ದಾರೆ.

ಈ ವರ್ಷದಿಂದಲೇ ಶಿಕ್ಷಣ ನೀತಿ ಜಾರಿ ಆಗುತ್ತದೆ. ಅಂದರೆ, ಮೊದಲ ವರ್ಷವನ್ನು ಶೂನ್ಯವರ್ಷ ಎಂದು ಪರಿಗಣಿಸಲಾಗಿದೆ. ಆಡಳಿತಾತ್ಮಕ-ಕಾನೂನಾತ್ಮಕ ಸಿದ್ಧತೆಗಳನ್ನು ಪ್ರಸಕ್ತ ವರ್ಷದಲ್ಲಿ ಮಾಡಿಕೊಳ್ಳಲಾಗುತ್ತಿದೆ. ಹೀಗಾಗಿ ಅದರ ರೂಪುರೇಶೆಯಷ್ಟೇ ಸದ್ಯಕ್ಕೆ ಸಿದ್ಧವಾಗುತ್ತಿದೆ. ಕನ್ನಡ ಕಲಿಕೆಯನ್ನು ಮೊಟಕುಗೊಳಿಸಲಾಗುತ್ತದೆ ಎಂದು ಈಗಲೇ ಆತಂಕಪಡುವುದು ಬೇಡ. ಸೂಕ್ತ ಮಾಹಿತಿ ಪಡೆದುಕೊಂಡು ಗೊಂದಲ ಬಗೆಹರಿಸಿಕೊಳ್ಳಬಹುದು ಎಂದು ಅವರು ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X