Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸ್ಪರ್ಧಾತ್ಮಕ ಪರೀಕ್ಷೆ ಕಾರಣಕ್ಕೆ...

ಸ್ಪರ್ಧಾತ್ಮಕ ಪರೀಕ್ಷೆ ಕಾರಣಕ್ಕೆ ಅತ್ಯಾಚಾರ ಆರೋಪಿಗೆ ಜಾಮೀನು ನೀಡಲಾಗದು: ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ17 Jun 2021 10:35 PM IST
share
ಸ್ಪರ್ಧಾತ್ಮಕ ಪರೀಕ್ಷೆ ಕಾರಣಕ್ಕೆ ಅತ್ಯಾಚಾರ ಆರೋಪಿಗೆ ಜಾಮೀನು ನೀಡಲಾಗದು: ಹೈಕೋರ್ಟ್

ಬೆಂಗಳೂರು, ಜೂ.17: ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಉದ್ದೇಶವಿದೆ ಹಾಗೂ ಕೊರೋನದಿಂದ ಪ್ರಕರಣದ ವಿಚಾರಣೆ ತಡವಾಗುತ್ತಿದೆ ಎಂಬುದು ಜಾಮೀನು ನೀಡಲು ಆಧಾರವಾಗದು ಎಂದು ಹೈಕೋರ್ಟ್ ಹೇಳಿದೆ. ಆ ಮೂಲಕ ಅತ್ಯಾಚಾರ ಆರೋಪಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಜಾಮೀನು ಕೋರಿ ಆರೋಪಿ ಹೊಲಿಯಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣವರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅಪರಾಧವು ಗಂಭೀರ ಸ್ವರೂಪದ್ದಾಗಿದ್ದು, ಅದಕ್ಕೆ ಜೀವಾವಧಿ ಶಿಕ್ಷೆ ವಿಧಿಸಬಹುದಾಗಿದೆ. ಹೀಗಾಗಿ, ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಆರೋಪಿಗೆ ಜಾಮೀನು ಮಂಜೂರು ಮಾಡಲಾಗದು ಎಂದು ತಿಳಿಸಿದೆ.

ಅರ್ಜಿದಾರರು ಬಿ.ಎ- ಬಿ.ಇಡಿ ಪದವೀಧರರಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವ ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ. ಪರೀಕ್ಷೆ ಶೀಘ್ರದಲ್ಲಿ ನಡೆಯಲಿದೆ ಎಂಬುದು ಜಾಮೀನು ಪಡೆಯಲು ಆಧಾರವಾಗದು. ಕೊರೋನ ಹಿನ್ನೆಲೆಯಲ್ಲಿ ವಿಚಾರಣೆ ವಿಳಂಬವಾಗುತ್ತಿದೆ ಎಂಬ ಮಾತ್ರಕ್ಕೆ ಜಾಮೀನು ಕೋರುವುದು ಸಕಾರಣವಲ್ಲ. ಆರೋಪಿಯು ಜಾಮೀನು ಪಡೆಯಲು ಸಮರ್ಥ ಆಧಾರಗಳನ್ನು ನೀಡಿಲ್ಲ ಎಂದು ನ್ಯಾಯಪೀಠವು ತಿಳಿಸಿದೆ.

ಇದೇ ವೇಳೆ ನ್ಯಾಯಾಲಯ ಜೈಲು ಅಧಿಕಾರಿಗಳ ಅನುಮತಿ ಪಡೆದು ಪರೀಕ್ಷೆ ಬರೆಯಲು ಆರೋಪಿ ಸ್ವತಂತ್ರರು ಎಂದು ನ್ಯಾಯಾಲಯ ತಿಳಿಸಿದೆ. ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿರುವ ಆರೋಪವನ್ನು ಅರ್ಜಿದಾರರು ಎದುರಿಸುತ್ತಿದ್ದಾರೆ. 2019ರಲ್ಲಿ ಸಂತ್ರಸ್ತೆಯು ವಿವಾಹವಾಗಿದ್ದು, ಪತಿಯೊಂದಿಗೆ ಜೀವಿಸುತ್ತಿದ್ದರು. ತಿಂಗಳ ಬಳಿಕ ಆರೋಪಿ ಹೊಲಿಯಪ್ಪ ಲೈಂಗಿಕ ಸಂಪರ್ಕ ಹೊಂದುವಂತೆ ಸಂತ್ರಸ್ತೆಗೆ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. 2019ರ ಮಾ.28ರಂದು ಸಂತ್ರಸ್ತೆಯು ಬಹಿರ್ದೆಸೆಗೆ ತೆರಳಿದ್ದಾಗ ಆಕೆಯನ್ನು ಹಿಂಬಾಲಿಸಿದ್ದ ಆರೋಪಿ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ.

ಇದರ ಆಧಾರದಲ್ಲಿ ಆರೋಪಿಯ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿತ್ತು. ಇದರ ಬೆನ್ನಿಗೇ ಆರೋಪಿಯು ಕಳೆದ ವರ್ಷದ ಹೈಕೋರ್ಟ್ ನಲ್ಲಿ ಜಾಮೀನು ಮನವಿ ಸಲ್ಲಿಸಿದ್ದು, ನ್ಯಾಯಾಲಯ ಅದನ್ನು ವಜಾ ಮಾಡಿತ್ತು. ಈಗ ಮತ್ತೆ ಆರೋಪಿ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಮೊದಲ ಜಾಮೀನು ಮನವಿಯಲ್ಲಿ ಸಂತ್ರಸ್ತೆಯ ಮೇಲೆ ಅತ್ಯಾಚಾರ ಎಸಗಿಲ್ಲ. ಅದು ಒಪ್ಪಿತ ಲೈಂಗಿಕ ಕ್ರಿಯೆಯಾಗಿತ್ತು ಎಂದು ಆರೋಪಿ ಹೇಳಿದ್ದರು. ಈಗ ತಾನು ಬಿ.ಎ- ಬಿ.ಇಡಿ ಪದವೀಧರನಾಗಿದ್ದು, ಶಿಕ್ಷಕ, ಪ್ರಥಮ ದರ್ಜೆ ಸಹಾಯಕ, ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವ ಉದ್ದೇಶ ಹೊಂದಿದ್ದೇನೆ. ತನ್ನನ್ನು ಜೈಲಿನಲ್ಲಿಟ್ಟರೆ ಸಿದ್ಧತೆ ಮಾಡಿಕೊಂಡು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವುದು ಕಷ್ಟವಾಗಲಿದೆ ಎಂದು ಅವರು ಹೇಳಿದ್ದರು. ಕೋವಿಡ್ ಮತ್ತು ಅದರ ಮಾರ್ಗಸೂಚಿಗಳು ಜಾರಿಯಲ್ಲಿರುವುದರಿಂದ ಪ್ರಕರಣದ ವಿಚಾರಣೆ ತಡವಾಗಬಹುದು ಎಂದು ವಾದಿಸಿದ್ದು, ಅದರ ಆಧಾರದಲ್ಲಿ ಜಾಮೀನು ಕೋರಿದ್ದಾರೆ.

ಇದಕ್ಕೆ ಸರಕಾರಿ ಪರ ವಕೀಲರು ವಿರೋಧಿಸಿದ್ದು, ಜಾಮೀನು ಮನವಿ ತಿರಸ್ಕರಿಸುವಂತೆ ಕೋರಿದರು. ವಕೀಲರ ವಾದ ಆಲಿಸಿದ ಪೀಠವು ಆರೋಪಿಸಲಾದ ಅಪರಾಧ ಹೇಯವಾಗಿರುವುದರಿಂದ ಜಾಮೀನು ಮಂಜೂರು ಮಾಡಲಾಗದು ಎಂದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X