Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 2023ರಲ್ಲಿ ನಾವು ಮತ್ತೆ ಅಧಿಕಾರಕ್ಕೆ...

2023ರಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ: ಮಾಜಿ ಸಿಎಂ ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ17 Jun 2021 11:58 PM IST
share
2023ರಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ: ಮಾಜಿ ಸಿಎಂ ಕುಮಾರಸ್ವಾಮಿ

ಮಂಡ್ಯ, ಜೂ.17: ರಾಜ್ಯದ ಸಂಪತ್ತನ್ನು ಲೂಟಿ ಮಾಡಿರುವ ರಾಜ್ಯ ಬಿಜೆಪಿ ಸರಕಾರ ಕೇಂದ್ರಕ್ಕೆ ಕೊಡಬೇಕಾಗಿರುವ ಕಪ್ಪ ತೆಗೆದುಕೊಂಡು ಹೋಗಲು ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಬಂದಿರೋದೆ ಹೊರತು ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮದ್ದೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಲಾಕ್ ಡೌನ್ ಹಿನ್ನೆಲೆಯಿಂದಾಗಿ ತಾಲೂಕಿನ ಕೊರೋನ ವಾರಿಯರ್ಸ್ ಮತ್ತು ಆರ್ಥಿಕವಾಗಿ ಹಿಂದುಳಿದ 7000 ಸಾವಿರ ಕುಟುಂಬಗಳಿಗೆ ಆಹಾರ ಪದಾರ್ಥಗಳ ವಿತರಣಾ ಕಾರ್ಯಕ್ರಮಕ್ಕೆ ನೀಡಿದ ನಂತರ ಮಾಧ್ಯಮಗಳ ಜತೆ ಮಾತನಾಡಿದರು.

ಹಿಂದೆ ರಾಜ ಮಹಾರಾಜರ ಕಾಲದಲ್ಲಿ ಸಣ್ಣ ಪುಟ್ಟ ಪಾಳೆಗಾರರ ಬಳಿ ವಸೂಲಿ ಮಾಡುತ್ತಿದ್ದಂತಹ ಕೆಲಸವನ್ನು ಈ ಉಸ್ತುವಾರಿಗಳು ಮಾಡುತ್ತಿದ್ದಾರೆ. ಇದು ನಮ್ಮ ನಾಡಿನ ಅತ್ಯಂತ ದೌರ್ಭಾಗ್ಯದ ಸಂಗತಿ. ಈ ಸಂಸ್ಕೃತಿ  ಹಿಂದಿನಿಂದಲೂ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷದಲ್ಲಿದೆ. ನಮ್ಮ ಜನ ಬುದ್ದಿವಂತರಾಗದೆ ಇದ್ದರೆ ನಿಮ್ಮ ಸಂಪತ್ತನ್ನು ರಾಷ್ಟ್ರೀಯ ಪಕ್ಷಗಳು ಲೂಟಿ ಮಾಡುತ್ತಲೆ ಇರುತ್ತವೆ ಎಂದು ಅವರು ಟೀಕಿಸಿದರು.

ಜೆಡಿಎಸ್ ಪಕ್ಷವನ್ನು ಅಷ್ಟು ಸುಲಭವಾಗಿ ನಾಡಿನಿಂದ ಮರೆ ಮಾಡುವುದಕ್ಕೆ ಆಗುವುದಿಲ್ಲ. 2023ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಅವರು ಹೇಳಿಕೊಂಡರು.

ಜೆಡಿಎಸ್ ಪಕ್ಷ ಹೋರಾಟ ಮಾಡುತ್ತಿರುವುದು ಅಧಿಕಾರಕೊಸ್ಕರ ಅಲ್ಲ, ನಿಮ್ಮ ಗೌರವಯುತ ಬದುಕಿಗಾಗಿ ಮತ್ತು ನಾಡಿನ ಸಮಸ್ಯೆ ಬಗೆಹರಿಸಲು ನಾವು ಪ್ರಾಮಾಣಿಕವಾಗಿ ಹೋರಾಡುತ್ತಿದ್ದೇವೆ ಎಂದು ಕುಮಾರಸ್ವಾಮಿ ಹೇಳಿದರು.

ಜೆಡಿಎಸ್ ಪಕ್ಷದಲ್ಲಿ​ ಕುಟುಂಬ ರಾಕ್ಷಸ ರಾಜಕಾರಣ ಇದೆ ಎಂದು ಜೆಡಿಎಸ್ ಮಾಜಿ ರಾಜ್ಯಾಧ್ಯಕ್ಷ ಎಚ್​.ವಿಶ್ವನಾಥ್​​ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ವಿಶ್ವನಾಥ್‌ಗೆ ಜೆಡಿಎಸ್‌ನಲ್ಲಿ ಕುಟುಂಬ ರಾಜಕೀಯ ಇದೆ ಎನ್ನೋದು ಗೊತ್ತಿರಲಿಲ್ವ. ನಮ್ಮ ಪಕ್ಷದ ಅಭ್ಯರ್ಥಿ ಆಗುವ ಮೊದಲು ಗೊತ್ತಿರಲಿಲ್ವ ಎಂದು ಪ್ರಶ್ನೆ ಮಾಡಿದರು.

ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ನಡೆದಿರುವ ಕಲಬೆರಕೆ ಹಗರಣವನ್ನು ಉನ್ನತ ತನಿಖೆಗೆ ಆದೇಶಿಸಬೇಕು. ಈ ಹಗರಣ ಸುಮಾರು ಹದಿನೈದು ವರ್ಷಗಳಿಂದ ನಿರಂತರ ನಡೆಯುತ್ತಿದೆ ಎಂಬ ಮಾಹಿತಿ ನನಗೆ ಸಿಕ್ಕಿದೆ. ನನ್ನ ಆಪ್ತ ಕಾರ್ಯದರ್ಶಿಯ ಮೇಲೆ ಕೆಲವರು ಆರೋಪ ಮಾಡ್ತಿದ್ದಾರೆ. ನನ್ನ ಆಪ್ತ ಕಾರ್ಯದರ್ಶಿ ಈ ಹಗರಣದಲ್ಲಿ ಭಾಗಿಯಾಗಿದ್ದಾನೆ ಎಂಬ ಮಾತುಗಳು ಸತ್ಯಕ್ಕೆ ದೂರವಾದದ್ದು. ನಮ್ಮ ಕುಟುಂಬ ಯಾವುದೇ ಕಾರಣಕ್ಕೂ ರೈತರ ರಕ್ತ ಹೀರಿ ಬದುಕು ನಡೆಸೋಲ್ಲ. ನಾವು ಮತ್ತು ನಮ್ಮ ಕುಟುಂಬ ಯಾವಾಗಲೂ ರೈತರ ಬೆನ್ನೆಲುಬಾಗಿ ನಿಂತಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದರು.

ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಕ್ಷೇತ್ರದ ಶಾಸಕ ಡಿ.ಸಿ ತಮ್ಮಣ್ಣ  ಮಾತನಾಡಿದರು.

ಶಾಸಕ ಎಂ.ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯರಾದ ಕೆ.ಟಿ.ಶ್ರೀಕಂಠೇಗೌಡ, ಅಪ್ಪಾಜಿಗೌಡ, ಮಾಜಿ ಶಾಸಕಿ ಕಲ್ಪನಾ ಸಿದ್ದರಾಜು, ಮನ್ ಮುಲ್ ಅಧ್ಯಕ್ಷ ರಾಮಚಂದ್ರು, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ಪುರಸಭಾ ಅಧ್ಯಕ್ಷ ಸುರೇಶ್ ಕುಮಾರ್ ಸೇರಿದಂತೆ ಹಲವು ಮುಖಂಡರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X