Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನೂತನ ಶಿಕ್ಷಣ ನೀತಿ ಜಾರಿಗೆ ಕರ್ನಾಟಕದ...

ನೂತನ ಶಿಕ್ಷಣ ನೀತಿ ಜಾರಿಗೆ ಕರ್ನಾಟಕದ ವೇಗದ ಕ್ರಮ: ಡಾ.ಕಸ್ತೂರಿ ರಂಗನ್ ಶ್ಲಾಘನೆ

'ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕಲಿಕಾ ಪದ್ಧತಿ' ಕುರಿತ ಪ್ರಾದೇಶಿಕ ಸಂಶೋಧನಾ ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ18 Jun 2021 5:17 PM IST
share
ನೂತನ ಶಿಕ್ಷಣ ನೀತಿ ಜಾರಿಗೆ ಕರ್ನಾಟಕದ ವೇಗದ ಕ್ರಮ: ಡಾ.ಕಸ್ತೂರಿ ರಂಗನ್ ಶ್ಲಾಘನೆ

ಬೆಂಗಳೂರು, ಜೂ. 18: ಇಪ್ಪತ್ತೊಂದನೆ ಶತಮಾನದಲ್ಲಿ ಕರ್ನಾಟಕ ಸೇರಿ ಇಡೀ ಭಾರತದ ಶಿಕ್ಷಣ ವ್ಯವಸ್ಥೆಯಲ್ಲಿ ಬಹುದೊಡ್ಡ ಕ್ರಾಂತಿಕಾರಕ ಬದಲಾವಣೆಗಳಾಗುತ್ತವೆ. ಆ ನಿಟ್ಟಿನಲ್ಲಿ ಕರ್ನಾಟಕ ರಾಜ್ಯವು ಮುಂಚೂಣಿಯಲ್ಲಿದೆ ಎಂದು ರಾಷ್ಟ್ರೀಯ ಶಿಕ್ಷಣ ನೀತಿ ಕರಡು ಸಮಿತಿಯ ಅಧ್ಯಕ್ಷರೂ ಆಗಿರುವ ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ಮಾಜಿ ಅಧ್ಯಕ್ಷ ಡಾ.ಕಸ್ತೂರಿ ರಂಗನ್ ಹೇಳಿದ್ದಾರೆ.

ಶುಕ್ರವಾರ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಮತ್ತು ಡೆನ್ಮಾರ್ಕ್‍ನ ಅಲ್ಬೋರ್ಗ್ ವಿವಿಯ ಯುನೆಸ್ಕೊ `ಸೆಂಟರ್ ಫಾರ್ ಪ್ರಾಬ್ಲಮ್ ಬೇಸ್ಡ್ ಲರ್ನಿಂಗ್ ಇನ್ ಇಂಜಿನಿಯರಿಂಗ್ ಸೈನ್ಸ್ ಮತ್ತು ಸಸ್ಟೈನಬಿಲಿಟಿ' ಸಹಯೋಗದಲ್ಲಿ `ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕಲಿಕಾ ಪದ್ಧತಿ' ಬಗೆಗಿನ ಪ್ರಾದೇಶಿಕ ಸಂಶೋಧನಾ ವಿಚಾರ ಸಂಕಿರಣವನ್ನು ಉದ್ದೇಶಿಸಿ ಅವರು ಮಾತನಾಡಿದರು.

'ರಾಷ್ಟ್ರೀಯ ಶಿಕ್ಷಣ ನೀತಿ ಕರ್ನಾಟಕದಲ್ಲಿ ಅತ್ಯಂತ ವೇಗವಾಗಿ ಜಾರಿಗೆ ಬರುತ್ತಿದೆ. ನೂತನ ಶಿಕ್ಷಣ ನೀತಿಯ ಕರಡು ಲಭ್ಯವಾದ ಕೂಡಲೇ ಹಾಗೂ ಕೇಂದ್ರ ಸರಕಾರ ಈ ನೀತಿಯನ್ನು ಪ್ರಕಟಿಸಿದ ಮೊದಲ ದಿನದಿಂದಲೇ ಸರಕಾರ ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದನ್ನು ಕಂಡಿದ್ದೇನೆ. ಶಿಕ್ಷಣ ನೀತಿಯ ಬಗ್ಗೆ ರಾಜ್ಯ ಸರಕಾರಕ್ಕೆ ಇರುವ ಬದ್ಧತೆ, ದೂರದೃಷ್ಟಿ ಶ್ಲಾಘನೀಯ. ಡಾ.ಅಶ್ವತ್ಥನಾರಾಯಣ ಅವರು ಹೋಗುತ್ತಿರುವ ವೇಗ ನನಗೆ ಅಚ್ಚರಿ ಉಂಟು ಮಾಡಿದೆ' ಎಂದು ಕಸ್ತೂರಿ ರಂಗನ್ ಹೇಳಿದರು.

ಈ ವರ್ಷದಿಂದಲೇ ಜಾರಿಗೆ ಸಿದ್ಧತೆ: ಬಳಿಕ ಮಾತನಾಡಿದ ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ, `ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಈ ವರ್ಷದಿಂದಲೇ ಜಾರಿ ಮಾಡಲು ಸರಕಾರ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ರಾಜ್ಯವು ಉದ್ಯಮಶೀಲತೆ, ಆವಿಷ್ಕಾರ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ಇರುವುದರಿಂದ ಶಿಕ್ಷಣ ನೀತಿಯೂ ರಾಜ್ಯದ ಶೈಕ್ಷಣಿಕ ವ್ಯವಸ್ಥೆಗೆ ಹೊಸ ಹುರುಪು ನೀಡಲಿದೆ. ಸಮಸ್ಯೆಗೆ ಪರಿಹಾರ ಕಲ್ಪಿಸುವ ಶಿಕ್ಷಣ ನೀಡುವ ಮೂಲಕ ಸಮಾಜ ಎದುರಿಸುತ್ತಿರುವ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಶೀಘ್ರದಲ್ಲೇ ಸಾಕಾರವಾಗಲಿದೆ ಎಂದು ಹೇಳಿದರು.

ಶಿಕ್ಷಣ ನೀತಿ ಜಾರಿ ಮಾಡುವ ನಿಟ್ಟಿನಲ್ಲಿ ನನಗೆ ಅವಕಾಶ ಸಿಕ್ಕಿದ್ದು, ನನ್ನ ಜೀವಮಾನದಲ್ಲಿ ಸಿಕ್ಕಿದ ಸುವರ್ಣಾವಕಾಶ. ನಮ್ಮ ಜ್ಞಾನ ಸಂಪತ್ತು ಹೆಚ್ಚಿಸಿಕೊಳ್ಳಲು ನೀತಿಯೂ ಹೆಚ್ಚು ಪರಿಣಾಮಕಾರಿ. ಎಲ್ಲ ಸಮಸ್ಯೆಗಳಿಗೂ ಇದೊಂದೆ ಪರಿಹಾರ ಎಂದು ಡಾ.ಅಶ್ವತ್ಥ ನಾರಾಯಣ ಹೇಳಿದರು.

ಯುನೆಸ್ಕೋದ ಸಮಸ್ಯೆಗೆ ಪರಿಹಾರ ಕಲ್ಪಿಸುವ ಕಲಿಕಾ ಶಿಕ್ಷಣ ವಿಭಾಗದ ಮುಖ್ಯಸ್ಥೆ ಪ್ರೊ. ಅನೆಟ್ ಕೊಲ್ಮಾಸ್ ಮಾತನಾಡಿ, `ಯಾವುದೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ತಾಂತ್ರಿಕ ಮತ್ತು ಆವಿಷ್ಕಾರ ಶಿಕ್ಷಣಕ್ಕೆ ಯುನೆಸ್ಕೋ ಹೆಚ್ಚು ಒತ್ತು ನೀಡುತ್ತಿದೆ. ಆ ನಿಟ್ಟಿನಲ್ಲಿ ನಾವು ಎಲ್ಲ ದೇಶಗಳ ಜತೆ, ಮುಖ್ಯವಾಗಿ ಭಾರತದ ಜತೆ ನಿಕಟವಾಗಿ ಕೆಲಸ ಮಾಡಲು ಸಿದ್ಧರಿದ್ದೇವೆ' ಎಂದರು.

ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ.ತಿಮ್ಮೇಗೌಡ, ಕಾರ್ಯನಿರ್ವಾಹಕ ನಿರ್ದೇಶಕ ಗೋಪಾಲ ಜೋಷಿ ಸೇರಿದಂತೆ ದೇಶ-ವಿದೇಶಗಳ ತಜ್ಞರು ಈ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X