Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಸಾಂಕ್ರಾಮಿಕ ರೋಗಗಳು ಹರಡದಂತೆ...

​ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ವಹಿಸಿ: ಉಡುಪಿ ಜಿಲ್ಲಾಧಿಕಾರಿ

'ಜೂನ್ ತಿಂಗಳಲ್ಲಿ ಅಧಿಕ ಡೆಂಗಿ ಪ್ರಕರಣ ಪತ್ತೆ'

ವಾರ್ತಾಭಾರತಿವಾರ್ತಾಭಾರತಿ18 Jun 2021 9:13 PM IST
share
​ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ವಹಿಸಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ಜೂ.18: ಪ್ರಸಕ್ತ ಮಳೆಗಾಲದಲ್ಲಿ ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಎಲ್ಲಾ ಇಲಾಖೆಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.

ಶುಕ್ರವಾರ ಮಳೆಗಾಲದಲ್ಲಿ ಹರಡುವ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿ ಸುವ ಕುರಿತಂತೆ ವಿವಿಧ ಇಲಾಖೆಗಳು ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆಸಿದ ವೀಡಿಯೋ ಸಂವಾದ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಗಿ, ಚಿಕುನ್ ಗುನ್ಯಾ ರೋಗಗಳು ಹರಡದಂತೆ ಸಂಬಂದಪಟ್ಟ ಎಲ್ಲಾ ಇಲಾಖೆಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಪ್ರಸ್ತುತ 11 ಮಲೇರಿಯಾ ಪ್ರಕರಣಗಳು ವರದಿಯಾಗಿದ್ದು, 103 ಡೆಂಗಿ ಪ್ರಕರಣಗಳು ವರದಿಯಾಗಿವೆ. ಡೆಂಗಿ ಪ್ರಕರಣ ಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತಿದ್ದು, ಡೆಂಗಿ ಹೆಚ್ಚಿರುವ ಗ್ರಾಪಂ ವ್ಯಾಪ್ತಿ ಯಲ್ಲಿ ತುರ್ತು ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲೆಯ ನಗರ ಪ್ರದೇಶಗಳಲ್ಲಿ ಕಟ್ಟಡ ನಿರ್ಮಾಣ ಪ್ರದೇಶದಲ್ಲಿ ನೀರು ನಿಲ್ಲದಂತೆ ಹಾಗೂ ಸೊಳ್ಳೆ ನಿಯಂತ್ರಣ ಮತ್ತು ನಾಶ ಕುರಿತಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಚರಂಡಿಯಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತೆ ಕ್ರಮ ಕೈಗೊಳ್ಳಬೇಕು. ಅಗತ್ಯಬಿದ್ದಲ್ಲಿ ಲಾರ್ವಿಸೈಡ್ ಸಿಂಪರಣೆ ಮಾಡಬೇಕು. ಸಾರ್ವಜನಿಕರಿಗೆ ಕರಪತ್ರಗಳ ಮೂಲಕ ಜಾಗೃತಿ ಮೂಡಿಸಬೇಕು ಹಾಗೂ ರಸ್ತೆ ಬದಿಯಲ್ಲಿ ತೆರೆದ ವಾತಾವರಣದಲ್ಲಿ ಆಹಾರ ಪದಾರ್ಥಗಳ ವ್ಯಾಪಾರ ನಡೆಸದಂತೆ ಕ್ರಮ ಕೈಗೊಳ್ಳಬೇಕು ಎಂದು ಎಲ್ಲಾ ನಗರಸ್ಥಳಿಯ ಸಂಸ್ಥೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಆರೋಗ್ಯ ಇಲಾಖೆ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಮನೆ ಮನೆಗೆ ಭೇಟಿ ನೀಡಿ ಸಾಂಕ್ರಾಮಿಕ ರೋಗಗಳ ಕುರಿತು ಅರಿವು ಮೂಡಿಸಬೇಕು. ಗಣಿ ಇಲಾಖೆ ವತಿಯಿಂದ ಜಿಲ್ಲೆಯ ಗಣಿ ಪ್ರದೇಶದಲ್ಲಿ ನೀರು ನಿಲ್ಲದಂತೆ ಎಚ್ಚರವಹಿಸಬೇಕು. ಅನಾವಶ್ಯಕ ಕ್ವಾರಿಗಳನ್ನು ಮುಚ್ಚಬೇಕು ಹಾಗೂ ಕ್ವಾರಿಗಳಲ್ಲಿ ಲಾರ್ವಾಹಾರಿ ಮೀನುಗಳನ್ನು ಬಿಡಲು ಕ್ರಮಕೈಗೊಳ್ಳಬೇಕು ಎಂದರು.

ಕೈಗಾರಿಕಾ ಮತ್ತು ಕಾರ್ಮಿಕ ಇಲಾಖೆಗಳ ವತಿಯಿಂದ ಕಾರ್ಮಿಕರು ವಾಸ ಮಾಡುವ ಪ್ರದೇಶಗಳಲ್ಲಿ ಸ್ವಚ್ಚತೆ ಕಾಪಾಡುವ ಕುರಿತಂತೆ ಅರಿವು ಮೂಡಿಸಬೇಕು. ಸೂಕ್ತ ರೀತಿಯಲ್ಲಿ ತ್ಯಾಜ್ಯ ವಿಲೇವಾರಿ ಮಾಡುವ ಮೂಲಕ ಸೊಳ್ಳೆಗಳು ಉತ್ಪತ್ತಿಯಾಗಂತೆ ಎಚ್ಚರವಹಿಸಬೇಕು. ಬೇರೆ ರಾಜ್ಯದಿಂದ ಹೊಸದಾಗಿ ಕಾರ್ಮಿಕರು ಆಗಮಿಸಿದ್ದಲ್ಲಿ ಕೂಡಲೇ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ, ಅಂಗನವಾಡಿ ಕಾರ್ಯಕರ್ತರ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಬೇಕು. ಜಿಲ್ಲೆಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಹಾಸ್ಟೆಲ್‌ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ಸೊಳ್ಳೆ ಪರದೆಗಳನ್ನು ವಿತರಿಸಬೇಕು ಎಂದರು.

ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ವಲಸೆ ಕಾರ್ಮಿಕರು ಆಗಮಿಸುತ್ತಿದ್ದು, ಅವರು ಬೇರೆ ಕಡೆಯಿಂದ ಸಾಂಕ್ರಾಮಿಕ ರೋಗಪೀಡಿತರಾಗಿ ಬಂದು ಇಲ್ಲೂ ರೋಗ ಹರಡುವ ಸಾಧ್ಯತೆಗಳಿದ್ದು, ಅವರನ್ನು ಸೂಕ್ತ ರೀತಿಯಲ್ಲಿ ಆರೋಗ್ಯ ಪರೀಕ್ಷೆಗೆ ಒಳಪಡಿಸಬೇಕು. ಬಂದರು ಪ್ರದೇಶದಲ್ಲಿ ಬೋಟ್‌ಗಳಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗಲಿದ್ದು ಆ ಪ್ರದೇಶಗಳಲ್ಲಿ ಹೆಚ್ಚಿನ ಗಮನಹರಿಸಿ ಸೊಳ್ಳೆಗಳ ಉತ್ಪತ್ತಿ ಯನ್ನು ತಡೆಯಲು ಅಗತ್ಯ ಕ್ರಮ ಗಳನ್ನು ಕೈಗೊಳ್ಳುವಂತೆ ಜಿಲ್ಲಾದಿಕಾರಿ ಜಿ.ಜಗದೀಶ್ ಸೂಚಿಸಿದರು.

ಮೀನುಗಾರಿಕಾ ಇಲಾಖೆ ವತಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಲಾರ್ವಾಹಾರಿ ಮೀನುಗಳಾದ ಗಪ್ಪಿ ಮತ್ತು ಗ್ಯಾಂಬಷಿಯಾ ಮೀನುಗಳನ್ನು ಬೆಳೆಸಿ, ಜಿಲ್ಲೆಯಾದ್ಯಂತ ಲಭ್ಯವಾಗುವಂತೆ, ಆರೋಗ್ಯ ಇಲಾಖೆಗೆ ಒದಗಿಸುವಂತೆ ಹಾಗೂ ಸಾರ್ವಜನಿಕರಿಗೆ ಈ ಮೀನುಗಳು ದೊರೆಯುವ ಸ್ಥಳಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದರು.

ಗ್ರಾಮೀಣ ಪ್ರದೇಶದಲ್ಲಿ ಸಾಂಕ್ರಾಮಿಕ ರೋಗಗಳು ಕಂಡುಬಂದಲ್ಲಿ ತಕ್ಷಣ ಮಾಹಿತಿ ನೀಡುವಂತೆ ತಿಳಿಸಿದ ಜಿಪಂ ಸಿಇಓ ಡಾ. ನವೀನ್ ಭಟ್, ಸಂಬಂದ ಪಟ್ಟ ಗ್ರಾಪಂ ವ್ಯಾಪ್ತಿಯಲ್ಲಿ ಪಂಚಾಯತ್ ವತಿಯಿಂದ ಸೂಕ್ತ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಡಿಹೆಚ್‌ಓ ಡಾ. ನಾಗಭೂಷಣ ಉಡುಪ, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಜಿಲ್ಲಾ ರೋಗವಾಹಕ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಭಟ್, ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X