ಅರ್ಜುನ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಮಂಗಳೂರು, ಜೂ.18: ಕೇಂದ್ರ ಸರಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಮಂತ್ರಾಲಯದಿಂದ 2021ನೇ ಸಾಲಿಗೆ ಕ್ರೀಡೆಯಲ್ಲಿ ಅತ್ಯುನ್ನತ ಸಾಧನೆ ಮಾಡಿರುವ ಕ್ರೀಡಾಪಟುಗಳಿಂದ ಅರ್ಜುನ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ.
ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಜೂ.21ರಂದು ಸಂಜೆ 5 ಗಂಟೆಯೊಳಗೆ ಇ-ಮೇಲ್ ಮೂಲಕ (surendra.yadav@nic.in, girnish.kumar@nic.in) ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ, ದ.ಕ.ಜಿಲ್ಲೆ (ದೂ.ಸಂ-0824-2451264) ಅವರನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ
Next Story





