Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ...

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಕ್ಷೀಣಿಸಿದರೂ ನಿಲ್ಲದ ಅವಾಂತರ: ಅಲ್ಲಲ್ಲಿ ಮನೆ, ಭೂ ಕುಸಿತ

ವಾರ್ತಾಭಾರತಿವಾರ್ತಾಭಾರತಿ18 Jun 2021 11:50 PM IST
share
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಕ್ಷೀಣಿಸಿದರೂ ನಿಲ್ಲದ ಅವಾಂತರ: ಅಲ್ಲಲ್ಲಿ ಮನೆ, ಭೂ ಕುಸಿತ

ಚಿಕ್ಕಮಗಳೂರು, ಜೂ.18: ಕಾಫಿನಾಡಿನಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದ್ದರೂ ಮಳೆ ಗಾಳಿಯಿಂದ ಉಂಟಾಗಿರುವ ಅನಾಹುತಗಳು ಮುಂದುವರಿದಿವೆ. ಜಿಲ್ಲೆಯ ಮಲೆನಾಡು ಭಾಗದ ಅಲ್ಲಲ್ಲಿ ಮಳೆ, ಗಾಳಿಗೆ ಮನೆ ಕುಸಿತ, ಭೂ ಕುಸಿತದಂತಹ ಘಟನೆಗಳು ಶುಕ್ರವಾರವೂ ಮುಂದುವರಿದಿವೆ.

ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದೊಂದು ವಾರದಿಂದ ಧಾರಾಕಾರವಾಗಿ ಸುರಿಯುತ್ತಿದ್ದ ಮಳೆ ಶುಕ್ರವಾರ ಮುಂಜಾನೆಯಿಂದ ಮಧ್ಯಾಹ್ನದವರೆಗೆ ಧಾರಾಕಾರವಾಗಿ ಸುರಿದಿದೆ. ಆದರೆ ಮಧ್ಯಾಹ್ನದ ವೇಳೆಗೆ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿತ್ತು. ಮಳೆ ಕಡಿಮೆಯಾದರೂ ಮಲೆನಾಡಿನ ಅಲ್ಲಲ್ಲಿ ಭೂ ಕುಸಿತ, ಮನೆ ಕುಸಿತದಂತಹ ಅವಘಡಗಳು ಮುಂದುವರಿದಿದ್ದು, ಕಳಸ ಪಟ್ಟಣ ಸಮೀಪದ ಇಡಕಣಿ ಗ್ರಾಮ ಪಂಚಾಯತ್‍ಗೆ ಸೇರಿರುವ ಹೆಮ್ಮಕ್ಕಿ ಗ್ರಾಮದಲ್ಲಿ ದಲಿತ ಸಮುದಾಯದ ಮಹಿಳೆಯೊಬ್ಬರ ಮನೆ ಶುಕ್ರವಾರ ಬೆಳಗ್ಗೆ ಸುರಿದ ಧಾರಾಕಾರ ಮಳೆಗೆ ಕುಸಿದು ಬಿದ್ದಿದೆ.

ಮನೆಯಲ್ಲಿದ್ದ ವಸ್ತುಗಳು ಮಣ್ಣಿನಡಿಗೆ ಸಿಲುಕಿಕೊಂಡಿದ್ದು, ಮಕ್ಕಳು ಸೇರಿದಂತೆ ಮನೆಮಂದಿ ಟಾರ್ಪಲ್‍ನಿಂದ ನಿರ್ಮಿಸಲಾದ ಗುಡಿಸಲಿನಲ್ಲಿ ಸದ್ಯ ವಾಸಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಗುರುವಾರ ರಾತ್ರಿ ಸುರಿದ ಮಳೆಗೆ ಕುದುರೆಮುಖ ಸಮೀಪದ ನೆಲ್ಲಿಬೀಡು ಗ್ರಾಮದಲ್ಲಿ ಬಸ್ ನಿಲ್ದಾಣವೊಂದು ಕುಸಿದು ಬಿದ್ದಿದೆ. ಬಸ್‍ ನಿಲ್ದಾಣದಲ್ಲಿದ್ದ ಅಂಚೆಕಚೇರಿ, ಕಟಿಂಗ್ ಶಾಪ್ ಜಖಂಗೊಂಡಿದೆ.

ಕಳೆದ ಎರಡು ವರ್ಷಗಳ ಹಿಂದೆ ಉಂಟಾದ ಅತಿವೃಷ್ಟಿ ಸಂದರ್ಭದಲ್ಲಿ ಕಳಸ ಸಮೀಪದ ಬಿಳಗೋಡು ಎಂಬಲ್ಲಿ ಧರೆ ಕುಸಿದು ಕುದುರೆಮುಖ ಸಂಪರ್ಕ ರಸ್ತೆಗೆ ಜಾರಿತ್ತು. ಕಳೆದ ಕೆಲ ತಿಂಗಳ ಹಿಂದೆಯಷ್ಟೆ ಅಲ್ಲಿಗೆ ತಡೆಗೋಡೆಯನ್ನು ಕಟ್ಟಲಾಗಿತ್ತು. ಆದರೆ ಇದೇ ಸ್ಥಳದಲ್ಲಿ ಮತ್ತೆ ಧರೆ ಕುಸಿದಿದ್ದು, ಧರೆ ಪಕ್ಕದಲ್ಲಿದ್ದ ತೋಟವೊಂದರ ಅಡಿಕೆ ಮರಗಳು ಮಣ್ಣು ಪಾಲಾಗಿವೆ. ಕಳಸ-ಕುದುರೆಮುಖ ರಸ್ತೆಗೆ ಮಣ್ಣು ಬಿದ್ದು ವಾಹನಗಳ ಸಂಚಾರಕ್ಕೆ ಅಡಚಣೆಯಾಗಿದೆ.

ಹೊರನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುತ್ತಿನ ಬಿಳಲು ಪ್ರೇಮಾ ಎಂಬವರ ಮನೆಯ ಹಿಂಬದಿಯ ಗುಡ್ಡ ಜರಿದು ಬಿದ್ದು ಮನೆಗೆ ಹಾನಿಯಾಗಿದೆ. ಹೊರನಾಡು-ಮೆಣಸಿನಹಾಡ್ಯ ರಸ್ತೆಯುದ್ದಕ್ಕೂ ಅಲ್ಲಲ್ಲಿ ರಸ್ತೆ ಬದಿಗಳಲ್ಲಿ ಗುಡ್ಡಗಳು ಕುಸಿಯುತ್ತಿವೆ. ಹೊರನಾಡು ಬಲಿಗೆ ಸಂಪರ್ಕ ರಸ್ತೆಯಲ್ಲಿ ಎರಡೂ ಬದಿಗಳಲ್ಲಿ ರಸ್ತೆಯ ಅಂಚುಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿವೆ. ಕಳಸ ತಾಲೂಕಿನಲ್ಲಿ ಹರಿಯುವ ಭದ್ರಾನದಿ, ಸೋಮಾವತಿ ನದಿಗಳು ಮೈದುಂಬಿ ಹರಿಯುತ್ತಿದ್ದು, ಶುಕ್ರವಾರ ಮಳೆಯ ಪ್ರಮಾಣ ಕಡಿಮೆ ಆಗಿರುವ ಪರಿಣಾಮ ಭದ್ರಾ ನದಿಯಲ್ಲಿ ನೀರಿನ ಮಟ್ಟ ಕೊಂಚ ತಗ್ಗಿದೆ. ಮಳೆ ಇಳಿಕೆಯಾಗಿರುವ ಪರಿಣಾಮ ಕಳಸ-ಹೊರನಾಡು ಸಂಪರ್ಕದ ಹೆಬ್ಬಾಳೆ ಸೇತುವೆ ಮಳುಗಡೆಯಾಗುವ ಭೀತಿ ತಪ್ಪಿದೆಯಾದರೂ ಸೇತುವೆ ಮಣ್ಣಿನ ರಾಶಿ ಸಂಗ್ರಹವಾಗಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.

ಇನ್ನು ಮೂಡಿಗೆರೆ ತಾಲೂಕಿನ ಮುತ್ತಿಗೆಪುರದಲ್ಲಿ ಸುಬ್ಬಯ್ಯ ಎಂಬವರ ಮನೆಯ ಗೋಡೆ ಶುಕ್ರವಾರ ಬೆಳಗ್ಗೆ ಕುಸಿದಿದ್ದರೆ, ಕೊಟ್ಟಿಗೆಹಾರದ ರಾಮನಗರ ನಿವಾಸಿ ರತ್ನಮ್ಮ ಎಂಬವರ ಮನೆ ಭಾರೀ ಗಾಳಿಗೆ ಹಾರಿ ಹೋಗಿದ್ದು, ಹೆಸ್ಗಲ್ ಗ್ರಾಮದಲ್ಲಿ ಮನೆಯೊಂದರ ಗೋಡೆ ಕುಸಿದಿರುವ ಬಗ್ಗೆ ವರದಿಯಾಗಿದೆ. 

ಶೃಂಗೇರಿ ತಾಲೂಕಿನಲ್ಲಿ ನೆಮ್ಮಾರ್ ಗ್ರಾಮದ ಕಾರೇಬೈಲ್ ಗ್ರಾಮದಲ್ಲಿ ಧರೆ ಕುಸಿದು ಚಂದ್ರಶೇಖರ್ ಭಟ್ ಎಂಬವರ ಮನೆಗೆ ಹಾನಿಯಾಗಿದ್ದರೆ, ನೀಲಂದೂರಿನಲ್ಲಿ ಪ್ರದೀಪ್ ಎಂಬವರ ಮನೆ ಹಾಗೂ ಛಾವಣಿಗೆ ಹಾನಿಯಾಗಿದೆ. ಉಳಿದಂತೆ ಮಲೆನಾಡು ಭಾಗದಲ್ಲಿರುವ ಗುಡ್ಡೆತೋಟ, ಕಿಗ್ಗಾ, ಬೇಗಾರು, ಅಬ್ಬಿಕಲ್ಲು, ಅತ್ತಿಕುಡಿಗೆ, ಜಯಪುರ, ಬಸರೀಕಟ್ಟೆ ಮತ್ತಿತರ ಗ್ರಾಮಗಳಲ್ಲಿ ರಸ್ತೆ ಮೇಲೆ ಮರಗಳು, ವಿದ್ಯುತ್ ಕಂಬಗಳು ಉರುಳಿಬಿದ್ದಿದ್ದು, ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ಮಲೆನಾಡು ಭಾಗದಲ್ಲಿ ಶುಕ್ರವಾರ ಮಧ್ಯಾಹ್ನದ ಬಳಿಕ ಮಳೆ ಇಳಿಕೆಯಾಗಿರುವುದರಿಂದ ತುಂಗಾ, ಭದ್ರಾ, ಹೇಮಾವತಿ ನದಿಗಳಲ್ಲಿ ನೀರಿನ ಹರಿವಿನಲ್ಲಿ ಕೊಂಚ ಇಳಿಕೆಯಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X