Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 16 ಜಿಲ್ಲೆಗಳಲ್ಲಿ ಕೋವಿಡ್ ಲಾಕ್‍ಡೌನ್...

16 ಜಿಲ್ಲೆಗಳಲ್ಲಿ ಕೋವಿಡ್ ಲಾಕ್‍ಡೌನ್ ಸಡಿಲಿಕೆ: 13 ಜಿಲ್ಲೆಗಳಲ್ಲಿ ಲಾಕ್‌ಡೌನ್ ನಿರ್ಬಂಧದಿಂದ ಕೆಲ ವಿನಾಯಿತಿ

ಮೈಸೂರು ಜಿಲ್ಲೆಯಲ್ಲಿ ಜುಲೈ 5ರವರೆಗೆ ಲಾಕ್‌ಡೌನ್ ಮುಂದುವರಿಕೆ

ವಾರ್ತಾಭಾರತಿವಾರ್ತಾಭಾರತಿ19 Jun 2021 7:24 PM IST
share
16 ಜಿಲ್ಲೆಗಳಲ್ಲಿ ಕೋವಿಡ್ ಲಾಕ್‍ಡೌನ್ ಸಡಿಲಿಕೆ: 13 ಜಿಲ್ಲೆಗಳಲ್ಲಿ ಲಾಕ್‌ಡೌನ್ ನಿರ್ಬಂಧದಿಂದ ಕೆಲ ವಿನಾಯಿತಿ

ಬೆಂಗಳೂರು, ಜೂ. 19: ಕೋವಿಡ್ ಸೋಂಕಿನ ಎರಡನೆ ಅಲೆ ತಡೆಗಟ್ಟಲು ಹೇರಿದ್ದ ಲಾಕ್‍ಡೌನ್ ಸಡಿಲಿಕೆಗೆ ತೀರ್ಮಾನಿಸಿರುವ ರಾಜ್ಯ ಸರಕಾರ, ಶೇ.5ಕ್ಕಿಂತ ಕಡಿಮೆ ಕೋವಿಡ್ ಪಾಸಿಟಿವಿಟಿ ದರ ಇರುವ 16 ಜಿಲ್ಲೆಗಳಲ್ಲಿ ಶೇ.50ರಷ್ಟು ಸಾರಿಗೆ ಸಹಿತ ಸಂಪೂರ್ಣ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಿದೆ. ಶೇ.5ರಿಂದ 10ರಷ್ಟು ಪಾಸಿಟಿವಿಟಿ ದರ ಇರುವ 13 ಜಿಲ್ಲೆಗಳಲ್ಲಿ ಲಾಕ್‍ಡೌನ್ ನಿರ್ಬಂಧದಿಂದ ಕೆಲ ವಿನಾಯಿತಿಗಳನ್ನು ನೀಡಿದ್ದರೆ, ಪಾಸಿಟಿವಿಸಿ ದರ ಶೇ.10ಕ್ಕಿಂತ ಹೆಚ್ಚಿರುವ ಮೈಸೂರು ಜಿಲ್ಲೆಯಲ್ಲಿ ಲಾಕ್‍ಡೌನ್ ಮುಂದುವರಿಸಲು ಸರಕಾರ ನಿರ್ಧರಿಸಿದೆ.

ಶನಿವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್‍ಗೆ ಸಂಬಂಧಿಸಿದ ಹಿರಿಯ ಸಚಿವರು ಹಾಗೂ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಪಾಸಿಟಿವಿಟಿ ದರದ ಆಧಾರದ ಮೇಲೆ ಕೋವಿಡ್ ಲಾಕ್‍ಡೌನ್ ನಿರ್ಬಂಧಗಳ ಸಡಿಲಿಕೆ ಮಾಡಲು ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಚಿವ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಈ ತೀರ್ಮಾನ ಮಾಡಲಾಗಿದೆ ಎಂದರು.

ಶೇ.5ಕ್ಕಿಂತ ಕಡಿಮೆ ಕೋವಿಡ್ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿಬಿಎಂಪಿ ಸೇರಿದಂತೆ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ ಜಿಲ್ಲೆಗಳಿಗೆ ಎಲ್ಲ ಅಂಗಡಿ- ಮುಂಗಟ್ಟುಗಳನ್ನು ಬೆಳಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ತೆರೆಯಲು ಅನುವು ಮಾಡಿಕೊಡಲಾಗುವುದು. ಹವಾನಿಯಂತ್ರಿತ (ಎಸಿ) ಚಾಲನೆಗೊಳಿಸದೆ ಹೋಟೆಲ್, ಕ್ಲಬ್, ರೆಸ್ಟೋರೆಂಟ್‍ಗಳಲ್ಲಿ(ಮದ್ಯಪಾನ ಹೊರತುಪಡಿಸಿ) ಕುಳಿತು ಊಟ ಸೇವಿಸಲು ಸಂಜೆ 5ಗಂಟೆಯ ವರೆಗೆ ಶೇ.50ರ ಆಸನ ಸಾಮರ್ಥ್ಯದೊಂದಿಗೆ ಅವಕಾಶ ಮಾಡಿಕೊಡಲಾಗುವುದು. 

ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ. ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ಸಾರಿಗೆ ಬಸ್ ಮತ್ತು ಮೆಟ್ರೋ ರೈಲು ಶೇ.50ರಷ್ಟು ಆಸನ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಣೆಗೆ ಅವಕಾಶ ನೀಡಿದೆ. ಹೊರಾಂಗಣ ಕ್ರೀಡೆಗಳಿಗೆ, ವೀಕ್ಷಕರಿಲ್ಲದೆ ಅನುಮತಿ ನೀಡಲಾಗಿದೆ. ಸರಕಾರಿ/ಖಾಸಗಿ ಕಚೇರಿಗಳಿಗೆ ಶೇ.50ರಷ್ಟು ಸಿಬ್ಬಂದಿ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ. ಲಾಡ್ಜ್ ಗಳಲ್ಲಿ ಮತ್ತು ರೆಸಾರ್ಟ್ ಗಳಲ್ಲಿ ಶೇ.50ರ ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ. ಜಿಮ್‍ಗಳಲ್ಲಿ ಶೇ.50ರಷ್ಟು ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೆ) ಅವಕಾಶ ನೀಡಲಾಗಿದೆ ಎಂದರು.

ಷರತ್ತಿನ ನಿರ್ಬಂಧ: ಶೇ.5 ಕ್ಕಿಂತ ಹೆಚ್ಚಿನ ಶೇ.10ರ ಪಾಸಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಿಗೆ ಜೂ.11ರ ಆದೇಶದಲ್ಲಿ ನೀಡಿರುವ ಸಡಿಲಿಕೆಗಳು ಮಾತ್ರ ಅನ್ವಯಿಸುತ್ತವೆ.

ಮೇಲ್ಕಂಡ 13 ಜಿಲ್ಲೆಗಳಲ್ಲಿ ಎಲ್ಲ ಕೈಗಾರಿಕೆಗಳಿಗೆ ಶೇ.50ರಷ್ಟು ಸಿಬ್ಬಂದಿಯೊಂದಿಗೆ ಉತ್ಪಾದನಾ ಚಟುವಟಿಕೆಗೆ ಅವಕಾಶ, ಹಾಲು, ತರಕಾರಿ, ಮಾಂಸ ಸಹಿತ ದಿನಸಿ ಖರೀದಿಗೆ ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಅವಕಾಶ, ಬೀದಿ ಬದಿ ವ್ಯಾಪಾರಿಗಳು ಬೆಳಗ್ಗೆ 6ರಿಂದ 2ಗಂಟೆ ವರೆಗೆ ವಹಿವಾಟು ನಡೆಸಲು ಅನುವು ಮಾಡಿಕೊಡಲಾಗಿದೆ. ಹೊಟೇಲ್ ಮತ್ತು ಮದ್ಯದಂಗಡಿಗಳು ಬೆಳಗ್ಗೆ 6ರಿಂದ ಮಧ್ಯಾಹ್ನ 2ಗಂಟೆ ವರೆಗೆ ಪಾರ್ಸಲ್ ತೆಗೆದುಕೊಂಡು ಹೋಗಲು ಮಾತ್ರವೇ ಅವಕಾಶ ನೀಡಲಾಗಿದೆ.

ದಿನದ 24ಗಂಟೆ ಹೋಮ್ ಡೆಲವರಿ ವ್ಯವಸ್ಥೆ ಇರಲಿದ್ದು, ಉದ್ಯಾನವನಗಳು ಬೆಳಗ್ಗೆ 5ರಿಂದ 10ಗಂಟೆಯ ವರೆಗೆ ವಾಯುವಿಹಾರಕ್ಕೆ ಅವಕಾಶ ನೀಡಲಾಗಿದೆ. ಟ್ಯಾಕ್ಸಿ ಮತ್ತು ಆಟೋರಿಕ್ಷಾಗಳಲ್ಲಿ ಇಬ್ಬರು ಪ್ರಯಾಣಿಕರೊಂದಿಗೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಪ್ರತಿನಿತ್ಯ ಸಂಜೆ 7ರಿಂದ ಬೆಳಗ್ಗೆ 5ಗಂಟೆಯ ವರೆಗೆ ನೈಟ್‍ ಕರ್ಫ್ಯೂ ಮತ್ತು ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 5ಗಂಟೆಯ ವರೆಗೆ ವಾರಂತ್ಯದ ಕರ್ಫ್ಯೂ ಇರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮೈಸೂರಿನಲ್ಲಿ ಲಾಕ್‍ಡೌನ್ ಮುಂದುವರಿಕೆ: ಶೇ.10ಕ್ಕಿಂತ ಹೆಚ್ಚಿನ ಕೋವಿಡ್ ಸೋಂಕಿನ ಪಾಜಿಟಿವಿಟಿ ದರ ಇರುವ ಮೈಸೂರು ಜಿಲ್ಲೆಯಲ್ಲಿ ಕೋವಿಡ್ ಲಾಕ್‍ಡೌನ್ ಯಥಾಸ್ಥಿತಿ ನಿಬರ್ಂಧ ಮುಂದುವರಿಯಲಿದ್ದು, ಅಗತ್ಯ ಸೇವೆಗಳನ್ನು ಹೊರತುಪಡಿಸಿ ಇತರೆ ಎಲ್ಲ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಹಾಲು, ಹಣ್ಣು, ತರಕಾರಿ, ದಿನಸಿ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6ರಿಂದ 10 ಗಂಟೆಯ ವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.

ನೈಟ್, ವಾರಂತ್ಯದ ಕರ್ಫ್ಯೂ: ಪ್ರತಿದಿನ ನೈಟ್ ಕರ್ಫ್ಯೂ ರಾತ್ರಿ 7 ಗಂಟೆಯಿಂದ ಬೆಳಗ್ಗೆ 5 ಗಂಟೆಯ ವರೆಗೆ ಜಾರಿಯಲ್ಲಿ ಇರುತ್ತದೆ. ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯ ವರೆಗೆ ಜಾರಿಯಲ್ಲಿರುತ್ತದೆ. ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ಸಾರಿಗೆ ಬಸ್ ಸಂಚಾರವು ಶೇ.50ರಷ್ಟು ಪ್ರಯಾಣಿಕರಿಗೆ ಮಿತಿಗೊಳಿಸಿ ಸಂಚಾರಕ್ಕೆ ಅನುಮತಿ ನೀಡಲಾಗಿದೆ ಎಂದು ಯಡಿಯೂರಪ್ಪ ಹೇಳಿದರು.

ನಿರ್ಬಂಧ: ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಈಜುಕೊಳಗಳು, ಸಭೆ, ಸಮಾರಂಭ ಹಾಗೂ ರಾಜಕೀಯ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಲಾಗಿದೆ. ದೇವಸ್ಥಾನ, ಮಸೀದಿ ಸೇರಿದಂತೆ ಪೂಜಾಸ್ಥಳಗಳು, ಶಿಕ್ಷಣ ಸಂಸ್ಥೆಗಳು, ಸಿನಿಮಾ ಮಂದಿರ, ಶಾಪಿಂಗ್ ಮಾಲ್‍ಗಳು, ಹವಾನಿಯಂತ್ರಿತ ಶಾಪಿಂಗ್ ಕಾಂಪ್ಲೆಕ್ಸ್‍ಗಳು ಹಾಗೂ ಪಬ್‍ಗಳ ಚಟುವಟಿಕೆಗೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.

ಮೈಮರೆಯುವಂತಿಲ್ಲ: ರಾಜ್ಯದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ. ಆದರೆ, ಸೋಂಕು ಇನ್ನೂ ಸಂಪೂರ್ಣ ಹೋಗಿಲ್ಲ. ಸಾಮಾನ್ಯ ಜನರು ಸಂಕಷ್ಟಕ್ಕೆ ಸಿಲುಕಿರುವ ಕಾರಣ ಕೋವಿಡ್ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ. ಹೀಗಾಗಿ ಸಾರ್ವಜನಿಕರಿಗೆ ಮೈಮರೆಯುವಂತಿಲ್ಲ. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಳ್ಳುವ ಮೂಲಕ ಸೋಂಕು ತಡೆಗಟ್ಟಲು ಸರಕಾರದ ಮಾರ್ಗಸೂಚಿ ಪಾಲಿಸುವ ಮೂಲಕ ಸರಕಾರದೊಂದಿಗೆ ಸಹಕಾರ ನೀಡಬೇಕು ಎಂದು ಯಡಿಯೂರಪ್ಪ ಮನವಿ ಮಾಡಿದರು. ಜೂ.21ರಿಂದ ಜುಲೈ 5ರ ವರೆಗೆ ಮೇಲ್ಕಂಡ ಲಾಕ್‍ಡೌನ್ ವಿನಾಯಿತಿ ಹಾಗೂ ನಿರ್ಬಂಧ ಮುಂದುವರಿಯಲಿದೆ ಎಂದರು.

ಜೂ.21ಕ್ಕೆ ಲಸಿಕಾ ಮೇಳ: ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಅಪೇಕ್ಷೆಯಂತೆ ಕೋವಿಡ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಸೋಮವಾರ (ಜೂ.21)ದಿಂದ ಕೋವಿಡ್ ಲಸಿಕಾ ಮೇಳ ಆರಂಭಿಸಲಾಗುತ್ತಿದೆ. ಒಟ್ಟಾರೆ 7ಲಕ್ಷ ಮಂದಿಗೆ ಕೋವಿಡ್ ಲಸಿಕೆ ನೀಡುವ ಉದ್ದೇಶ ಹೊಂದಲಾಗಿದೆ. ಹೀಗಾಗಿ 18ರಿಂದ 45 ವರ್ಷದೊಳಗಿನವರು ತಪ್ಪದೆ ಕೋವಿಡ್ ಲಸಿಕೆ ಪಡೆದುಕೊಳ್ಳಬೇಕು'

-ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X