Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋವಿಡ್‌ಗೆ ಬಲಿಯಾದ ರಾಜ್ಯದ 31...

ಕೋವಿಡ್‌ಗೆ ಬಲಿಯಾದ ರಾಜ್ಯದ 31 ಪತ್ರಕರ್ತರಿಗೆ ಸರಕಾರದಿಂದ ಪರಿಹಾರ: ಶಿವಾನಂದ ತಗಡೂರು

ವಾರ್ತಾಭಾರತಿವಾರ್ತಾಭಾರತಿ19 Jun 2021 8:07 PM IST
share
ಕೋವಿಡ್‌ಗೆ ಬಲಿಯಾದ ರಾಜ್ಯದ 31 ಪತ್ರಕರ್ತರಿಗೆ ಸರಕಾರದಿಂದ ಪರಿಹಾರ: ಶಿವಾನಂದ ತಗಡೂರು

ಉಡುಪಿ, ಜೂ.19: ರಾಜ್ಯದಲ್ಲಿ ಕೋವಿಡ್-19 ಸೋಂಕಿಗೆ ಸುಮಾರು 70 ಮಂದಿ ಮೃತಪಟ್ಟಿದ್ದು, ಇದರಲ್ಲಿ ಮೊದಲ ಅಲೆಯಲ್ಲಿ ಮೃತಪಟ್ಟ ಒಟ್ಟು 31 ಮಂದಿ ಪತ್ರಕರ್ತರ ಕುಟುಂಬಗಳಿಗೆ ಸರಕಾರದಿಂದ ತಲಾ 5ಲಕ್ಷ ರೂ. ಪರಿಹಾರ ಹಾಗೂ ಎರಡು ಕುಟುಂಬಗಳಿಗೆ ಮನೆ ಒದಗಿಸುವಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಶ್ರಮಿಸಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.

ಉಡುಪಿ ಜಿಲ್ಲೆಗೆ ಅಧಿಕೃತವಾಗಿ ಭೇಟಿ ನೀಡಿದ ಹಿನ್ನೆಲೆಯಲ್ಲಿ ಇಂದು ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಅವರು ಪತ್ರಕರ್ತರನ್ನುದ್ದೇಶಿಸಿ ಮಾತನಾಡುತಿದ್ದರು.

ರಾಜ್ಯದಲ್ಲಿ ಸುಮಾರು 8000 ಮಂದಿ ಸಂಘದ ಸದಸ್ಯತ್ವ ಪಡೆದುಕೊಂಡಿದ್ದಾರೆ. ಕೋವಿಡ್-19 ಸಂದಿಗ್ನ ಸ್ಥಿತಿಯಲ್ಲೂ ವೃತ್ತಿ ಬದ್ಧತೆಯಿಂದ ಕರ್ತವ್ಯ ನಿರ್ವಹಿಸಿದ ಪತ್ರಕರ್ತರು ಕೋವಿಡ್‌ಗೆ ಬಲಿಯಾಗಿದ್ದಾರೆ. ಮೊದಲ ಅಲೆಯಲ್ಲಿ ರಾಜ್ಯ 31 ಹಾಗೂ ಎರಡನೇ ಅಲೆಯಲ್ಲಿ 30ಕ್ಕೂ ಅಧಿಕ ಮಂದಿ ಪತ್ರಕರ್ತರು ಮೃತಪಟ್ಟಿದ್ದಾರೆ. ಅದೇ ರೀತಿ 30ಕ್ಕೂ ಅಧಿಕ ಮಂದಿ ಪತ್ರಿಕಾ ವಿತರಕರು ಕೂಡ ಕೋವಿಡ್‌ನಿಂದ ಮೃತಪಟ್ಟಿದ್ದಾರೆ ಎಂದರು.

ಕೋವಿಡ್-19 ಕಾರಣಕ್ಕೆ ಕಳೆದ ಒಂದೂವರೆ ವರ್ಷದಿಂದ ರಾಜ್ಯಮಟ್ಟದ ಪತ್ರಿಕೆ, ದೃಶ್ಯ ಮಾಧ್ಯಮ ಸೇರಿದಂತೆ ಸ್ಥಳೀಯ ಪತ್ರಿಕೆಗಳಿಗೆ ಬಾಕಿ ಇಟ್ಟಿರುವ 56 ಕೋಟಿ ರೂ. ಸರಕಾರಿ ಜಾಹೀರಾತು ಬಿಲ್‌ಯನ್ನು ಒಂದೇ ಕಂತಿನಲ್ಲಿ ಬಿಡುಗಡೆ ಮಾಡಲು ಸಾಧ್ಯವಾಗಿದೆ ಎಂದು ಹೇಳಿದರು.

ಏಷ್ಯನ್ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಮಾದನ್ ಗೌಡ ಮಾತನಾಡಿ, ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ರಾಜ್ಯ ಸರಕಾರ ನೀಡಿರುವ 2 ಕೋಟಿ ರೂ. ಮೌಲ್ಯದ ನಿವೇಶನದಲ್ಲಿ ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ಪತ್ರಕರ್ತರ ಭವನ ನಿರ್ಮಾಣ ಮಾಡಲು ಉದ್ದೇಶಿಸಲಾಗಿದ್ದು, ಇದರ ಶಂಕು ಸ್ಥಾಪನೆ ಶೀಘ್ರವೇ ನಡೆಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಸಂಘ ಹಾಗೂ ಪ್ರತಕರ್ತರ ಬೇಡಿಕೆಗಳ ಮನವಿಯನ್ನು ರಾಜ್ಯಾಧ್ಯಕ್ಷರಿಗೆ ಸಲ್ಲಿಸಲಾಯಿತು. 'ನಮ್ಮ ಕುಂದಾಪ್ರ ಕನ್ನಡ ಗಲ್ಫ್ ಬಳಗ' ವತಿಯಿಂದ ನೀಡಲಾದ ಫೇಸ್ ಶೀಲ್ಡ್‌ಗಳನ್ನು ಪತ್ರಕರ್ತರಿಗೆ ವಿತರಿಸ ಲಾಯಿತು. ಬಳಿಕ ರಾಜ್ಯಾಧ್ಯಕ್ಷರೊಂದಿಗೆ ಪತ್ರಕರ್ತರ ಸಮಸ್ಯೆ ಹಾಗೂ ಬೇಡಿಕೆ ಗಳ ಕುರಿತು ಚರ್ಚಿಸಲಾಯಿತು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅಲೆವೂರು ರಾಜೇಶ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ವಂದಿಸಿದರು. ಪತ್ರಕರ್ತರಾದ ರಾಕೇಶ್ ಕುಂಜೂರು ಹಾಗೂ ದೀಪಕ್ ಜೈನ್ ಕಾರ್ಯಕ್ರಮ ನಿರೂಪಿಸಿದರು.

ಮಲಬಾರ್ ಗೋಲ್ಡ್‌ನಿಂದ ಸನ್ಮಾನ: ಉಡುಪಿ ಜಿಲ್ಲೆಗೆ ಪ್ರಥಮ ಬಾರಿಗೆ ಆಗಮಿಸಿದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರನ್ನು ಉಡುಪಿಯ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ ವತಿಯಿಂದ ಇಂದು ಪ್ರೆಸ್‌ಕ್ಲಬ್‌ನಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಲಬಾರ್ ಗೋಲ್ಡ್‌ನ ಜಿಆರ್‌ಎಂ ರಾಘವೇಂದ್ರ ನಾಯಕ್, ಚಾರಿಟಿ ಉಸ್ತುವಾರಿ ತಂಝೀಮ್ ಶಿರ್ವ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X