Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜೂ.21ರಂದು ಲಸಿಕೆ ಮೇಳಕ್ಕೆ ಚಾಲನೆ, ಒಂದೇ...

ಜೂ.21ರಂದು ಲಸಿಕೆ ಮೇಳಕ್ಕೆ ಚಾಲನೆ, ಒಂದೇ ದಿನ 7 ಲಕ್ಷ ಲಸಿಕೆ ನೀಡುವ ಗುರಿ: ಡಾ.ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ19 Jun 2021 10:48 PM IST
share
ಜೂ.21ರಂದು ಲಸಿಕೆ ಮೇಳಕ್ಕೆ ಚಾಲನೆ, ಒಂದೇ ದಿನ 7 ಲಕ್ಷ ಲಸಿಕೆ ನೀಡುವ ಗುರಿ: ಡಾ.ಸುಧಾಕರ್

ಬೆಂಗಳೂರು, ಜೂ.19: ಅಂತರ್‍ರಾಷ್ಟ್ರೀಯ ಯೋಗ ದಿನವಾದ ಜೂ.21ರಂದು ಕೋವಿಡ್ ಲಸಿಕೆ ಮೇಳಕ್ಕೆ ಚಾಲನೆ ದೊರೆಯಲಿದ್ದು, ಸೋಮವಾರ ಒಂದೇ ದಿನ 5 ರಿಂದ 7 ಲಕ್ಷ ಡೋಸ್ ನೀಡುವ ಗುರಿ ಇರಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೋವಿಡ್ ಲಸಿಕಾ ಮೇಳದಲ್ಲಿ 18ರಿಂದ 44 ವರ್ಷದವರಿಗೆ, 45 ವರ್ಷ ಮೇಲ್ಪಟ್ಟವರಿಗೆ, ಆರೋಗ್ಯ ಸಿಬ್ಬಂದಿಗೆ ಲಸಿಕೆ ನೀಡಲಾಗುವುದು.14 ಲಕ್ಷ ಕೋವಿಶೀಲ್ಡ್ ಡೋಸ್ ದಾಸ್ತಾನು ಇದ್ದು, ಸುಮಾರು ಏಳು ಲಕ್ಷ ಲಸಿಕೆ ನೀಡುವ ಗುರಿ ಹೊಂದಿದ್ದೇವೆ. ಇದಕ್ಕೆ ಜನರ ಸಹಕಾರ ಬೇಕಿದೆ. ಈವರೆಗೆ 1.80 ಕೋಟಿ ಲಸಿಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಅನ್ ಲಾಕ್ ಬಗ್ಗೆ ಪರಾಮರ್ಶಿಸಲು ಚರ್ಚಿಸಲಾಗಿದೆ. ಪಾಸಿಟಿವಿಟಿ ದರದ ಶೇಕಡಾವಾರು ಪ್ರಮಾಣದ ಆಧಾರದಲ್ಲಿ ಯಾವ ಜಿಲ್ಲೆಗಳಲ್ಲಿ ಯಾವ ಕ್ರಮ ವಹಿಸಬೇಕೆಂಬುದನ್ನು ಮುಖ್ಯಮಂತ್ರಿಗಳಿಗೆ ತಿಳಿಸಲಾಗುವುದು. ಪಾಸಿಟಿವಿಟಿ ದರ 16 ಜಿಲ್ಲೆಗಳಲ್ಲಿ ಶೇ.5ಗಿಂತ ಕಡಿಮೆ ಮತ್ತು 13 ಜಿಲ್ಲೆಗಳಲ್ಲಿ ಶೇ.5-10 ನಷ್ಟಿದೆ. ಮೈಸೂರಿನಲ್ಲಿ ಶೇ.10ಗಿಂತ ಹೆಚ್ಚಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕೋವಿಡ್ ಮೂರನೇ ಅಲೆಯ ಹೊಸ ವೈರಾಣು ಅಧ್ಯಯನಕ್ಕೆ ಜಿನೋಮಿಕ್ಸ್ ಸಮಿತಿ ರಚಿಸಲಾಗಿದೆ. ಪ್ರತಿ ಜಿಲ್ಲಾಮಟ್ಟದಲ್ಲಿ ತಜ್ಞರ ಸಮಿತಿ ರಚಿಸಲಾಗುವುದು. ಈ ಸಮಿತಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲಿದೆ. ಈ ಮೂಲಕ 3 ನೇ ಅಲೆ ನಿಯಂತ್ರಿಸಲಾಗುವುದೆಂದು ಅವರು ತಿಳಿಸಿದ್ದಾರೆ.

ಡಾ.ದೇವಿಪ್ರಸಾದ್ ಶೆಟ್ಟಿ ಸಮಿತಿ 3 ನೇ ಅಲೆ ಸಿದ್ಧತೆ ಕುರಿತು ಪ್ರಾಥಮಿಕ ವರದಿ ನೀಡಿದೆ. ಅದನ್ನು ಮುಖ್ಯಮಂತ್ರಿಗಳಿಗೆ ನೀಡಲಾಗುವುದು. ಅಂತಿಮ ವರದಿ ಬಂದ ಬಳಿಕ 45 ದಿನಗಳಲ್ಲಿ ಕಾರ್ಯರೂಪಕ್ಕೆ ತರಲಾಗುವುದು. ಡೆಲ್ಟಾ ವೈರಾಣು ವೇಗವಾಗಿ ಹರಡುತ್ತಿದೆ. ಇದಕ್ಕಾಗಿ ಡಿಸೆಂಬರ್ ವರೆಗೂ ನಿತ್ಯ ಒಂದೂವರೆ ಲಕ್ಷ ಪರೀಕ್ಷೆ ಮಾಡಲು ಸೂಚಿಸಲಾಗಿದೆ. ಕೋವಿಡ್ ಎರಡು ಡೋಸ್ ಲಸಿಕೆ ಪಡೆದ ಶೇ.99.9 ರಷ್ಟು ಸೋಂಕು ತಗುಲಿಲ್ಲ. ಸೋಂಕು ಬಂದರೂ ತೀವ್ರ ಸಮಸ್ಯೆಯಾಗಿಲ್ಲ.

ಜೂ.21(ಸೋಮವಾರ)ರಂದು ಜಗತ್ತಿನಾದ್ಯಂತ ಯೋಗ ದಿನ ಆಚರಿಸುತ್ತಿದ್ದು, ಈ ಬಾರಿ ಎಲ್ಲರೂ ಮನೆಯಲ್ಲೇ ಇದ್ದು ಆಚರಣೆ ಮಾಡಬೇಕು. ಯೋಗ ದಿನವನ್ನು ಆನ್‍ಲೈನ್‍ನಲ್ಲೇ ಆಚರಿಸಲಾಗುತ್ತಿದೆ. ಬಿ ವಿತ್ ಯೋಗ ಬಿ ಅಟ್ ಹೋಮ್ ಮತ್ತು ಯೋಗ ಫಾರ್ ವೆಲ್ ನೆಸ್ ಎಂಬ ಘೋಷವಾಕ್ಯದಡಿ ಯೋಗದಿನ ಆಚರಿಸಲಾಗುತ್ತಿದೆ. ಆದರೆ, ಈ ಬಾರಿ ಗುಂಪುಗೂಡಿ ಆಚರಿಸಬಾರದು. ಮುಖ್ಯಮಂತ್ರಿಗಳು ಅಧಿಕೃತ ನಿವಾಸದಲ್ಲೇ ಯೋಗ ಮಾಡಲಿದ್ದು, ನಾನು ಕೂಡ ಪಾಲ್ಗೊಳ್ಳುತ್ತೇನೆ. ಎಲ್ಲರೂ ಮುಂಜಾನೆ 6 ಗಂಟೆಗೆ ಮನೆಯಲ್ಲೇ ಯೋಗ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಿ.

-ಡಾ.ಸುಧಾಕರ್, ಆರೋಗ್ಯ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X