Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ಲೂಟಿಕೋರರ ಆಡಳಿತ, ಜಿದ್ದಿಗೆ...

ರಾಜ್ಯದಲ್ಲಿ ಲೂಟಿಕೋರರ ಆಡಳಿತ, ಜಿದ್ದಿಗೆ ಬಿದ್ದವರಂತೆ ಪೈಪೋಟಿಯಿಂದ ಭ್ರಷ್ಟಾಚಾರ: ಸಿದ್ದರಾಮಯ್ಯ

ರಾಹುಲ್ ಗಾಂಧಿ ಜನ್ಮದಿನ ಪ್ರಯುಕ್ತ ರಕ್ಷಾ ರಾಮಯ್ಯ ನೇತೃತ್ವದಲ್ಲಿ ಪಡಿತರ ಕಿಟ್ ವಿತರಣೆ

ವಾರ್ತಾಭಾರತಿವಾರ್ತಾಭಾರತಿ19 Jun 2021 11:36 PM IST
share
ರಾಜ್ಯದಲ್ಲಿ ಲೂಟಿಕೋರರ ಆಡಳಿತ, ಜಿದ್ದಿಗೆ ಬಿದ್ದವರಂತೆ ಪೈಪೋಟಿಯಿಂದ ಭ್ರಷ್ಟಾಚಾರ: ಸಿದ್ದರಾಮಯ್ಯ

ಬೆಂಗಳೂರು, ಜೂ.19: ರಾಜ್ಯ ಬಿಜೆಪಿ ಲೂಟಿಕೋರರ ಸರಕಾರವಾಗಿದ್ದು, ಹಣ ದೋಚಲು ಆಡಳಿತ ಪಕ್ಷದವರ ನಡುವೆಯೇ ಕಿತ್ತಾಟ ನಡೆಯುತ್ತಿದೆ. ನಾನೆಷ್ಟು, ನೀನೆಷ್ಟು ಎಂದು ಜಿದ್ದಿಗೆ ಬಿದ್ದವರಂತೆ ಪೈಪೋಟಿಯಿಂದ ಭ್ರಷ್ಟಾಚಾರ ಮಾಡುತ್ತಿದ್ದಾರೆ. ಇಂತಹ ಭ್ರಷ್ಟ ಸರಕಾರವನ್ನು ಅಧಿಕಾರದಿಂದ ಕಿತ್ತು ಹಾಕಿದರೆ ಮಾತ್ರ ರಾಜ್ಯಕ್ಕೆ ಪರಿಹಾರ ದೊರೆಯಲಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಜನ್ಮದಿನದ ಹಿನ್ನೆಲೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ರಕ್ಷಾ ರಾಮಯ್ಯ ನೇತೃತ್ವದಲ್ಲಿ ನಗರದ ಮಲ್ಲೇಶ್ವರಂ 18 ಕ್ರಾಸ್ ನಲ್ಲಿರುವ ಆಟದ ಮೈದಾನದಲ್ಲಿ “ಕಾಂಗ್ರೆಸ್ ಸಹಾಯ ಹಸ್ತ” ಘೋಷಣೆಯಡಿ, ರಾಹುಲ್ ಕೇರ್ ಆಶ್ರಯದಲ್ಲಿ ಅರ್ಚಕರು, ಆಟೋ ಚಾಲಕರು, ಆಶಾ ಕಾರ್ಯಕರ್ತೆಯರು, ಗೃಹ ರಕ್ಷಕ ದಳ ಕಾರ್ಯಕರ್ತರಿಗೆ ಪಡಿತರ ಕಿಟ್ ವಿತರಿಸಿ ಅವರು ಮಾತನಾಡಿದರು.

ಬಿಜೆಪಿ ನಾಯಕರ ಮೇಲೆ, ಸರಕಾರದ ಮೇಲೆ ಪ್ರತಿಪಕ್ಷದವರಾಗಿ ನಾವು ಆರೋಪ ಮಾಡುತ್ತಿಲ್ಲ. ಆಡಳಿತ ಪಕ್ಷದವರೇ ಸ್ವತಃ ಭ್ರಷ್ಟಾಚಾರ ಕುರಿತು ಪರಸ್ಪರ ಆರೋಪ ಮಾಡಿಕೊಳ್ಳುತ್ತಿದ್ದಾರೆ. ಇಂತಹ ಬೇಜವಾಬ್ದಾರಿ ಸರಕಾರವನ್ನು ಹಿಂದೆಂದೂ ನೋಡಿಲ್ಲ. ಇದು ಜನ ವಿರೋಧಿ, ಜನದ್ರೋಹಿ ಸರಕಾರ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಸರಕಾರದ ಅವಧಿಯಲ್ಲಿ ಬಡವರಿಗೆ ಏಳು ಕೆ.ಜಿ. ಅಕ್ಕಿ ನೀಡಲಾಗುತ್ತಿತ್ತು, ಆದರೆ ಬಿಜೆಪಿಯವರು ಅಧಿಕಾರಕ್ಕೆ ಬಂದು ಎರಡು ಕೆ.ಜಿ.ಗೆ ಇಳಿಸಿದ್ದಾರೆ. ನಾವು ಅಧಿಕಾರದಲ್ಲಿದ್ದಿದ್ದರೆ ಏಳು ಕೆ.ಜಿ. ಅಲ್ಲ, ಹತ್ತು ಕೆ.ಜಿ. ನೀಡುತ್ತಿದ್ದೆವು. ಜನ ಸಂಕಷ್ಟದಲ್ಲಿರುವಾಗ ನೆರವಿಗೆ ಧಾವಿಸುವುದು ಸರಕಾರದ ಜವಾಬ್ದಾರಿಯಾಗಿದೆ. ಕೇರಳ 20 ಸಾವಿರಸ ಕೋಟಿ ರೂ.ಪರಿಹಾರ ಪ್ರಕಟಿಸಿದೆ. ತಮಿಳುನಾಡಿನಲ್ಲಿ ಸ್ಟಾಲಿನ್ ಮುಖ್ಯಮಂತ್ರಿಯಾದ ದಿನವೇ ಬಡವರಿಗೆ 4 ಸಾವಿರ ರೂ.ಪರಿಹಾರ ಘೋಷಣೆ ಮಾಡಿದ್ದಾರೆ. ಆದರೆ ನಮ್ಮಲ್ಲಿ ಸೂಕ್ತ ಪ್ರಮಾಣದಲ್ಲಿ ಪರಿಹಾರ ವಿತರಣೆಯಾಗುತ್ತಿಲ್ಲ ಎಂದು ಅವರು ದೂರಿದರು.

ಯುವ ಜನತೆ ಮೋದಿ ಮೋದಿ ಎನ್ನುತ್ತಿದ್ದರು. ಈಗ ಕೆಲಸ ಕೇಳಿದರೆ ಬೊಂಡ, ಪಕೋಡ ಮಾರಾಟ ಮಾಡಿ ಎನ್ನುತ್ತಿದ್ದಾರೆ. ಆದರೆ ಪಕೋಡ ಮಾರಲೂ ಸಾಧ್ಯವಿಲ್ಲದ ಪರಿಸ್ಥಿತಿ ಇದೆ. ಅಡುಗೆ ಎಣ್ಣೆ ಬೆಲೆ 200 ರೂ.ಆಗಿದೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಅಡುಗೆ ಅನಿಲ ಸಿಲಿಂಡರ್ ಬೆಲೆ 414 ರೂ ಇತ್ತು. ಈಗ 850 ರೂಪಾಯಿಗೆ ಏರಿದೆ ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 100.17 ರೂ.ಆಗಿದೆ. ಡೀಸೆಲ್ ದರ 93 ರೂಪಾಯಿಗೆ ಏರಿಕೆಯಾಗಿದೆ. ಲೀಟರ್ ಪೆಟ್ರೋಲ್ ಗೆ 37.98, ಡೀಸೆಲ್ ಮೇಲೆ 37 ರೂ, ತೆರಿಗೆ ವಿಧಿಸಿ ಹೊರೆ ಹೇರುತ್ತಿದೆ. ಇಂತಹ ಲಜ್ಜೆಗೆಟ್ಟ ಸರಕಾರಗಳನ್ನು ಹಿಂದೆಂದೂ ಕಂಡಿರಲಿಲ್ಲ. ಮೊದಲು ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರಕಾರವನ್ನು ಅಧಿಕಾರದಿಂದ ಕಿತ್ತು ಹಾಕಬೇಕು ಎಂದು ಸಿದ್ದರಾಮಯ್ಯ ಕರೆ ನೀಡಿದರು.

ಜನ ತೊಂದರೆಯಲ್ಲಿದ್ದಾಗ ಸರಕಾರಗಳು ನೆರವಿಗೆ ಬರಲಿಲ್ಲ. ಆದರೆ ಕಾಂಗ್ರೆಸ್ ಪಕ್ಷ ಬಡವರ ಪರವಾಗಿದೆ. ರಕ್ಷಾ ರಾಮಯ್ಯ, ಎಂ.ಆರ್.ಸೀತಾರಾಮ್ ಶಾಸಕರಲ್ಲ. ಡಿಸಿಎಂ ಅಶ್ವತ್ಥ ನಾರಾಯಣ ಇಲ್ಲಿನ ಶಾಸಕ. ಅವರು ಮಾಡಬೇಕಾದ ಕೆಲಸವನ್ನು ನಮ್ಮ ಪಕ್ಷದವರು ಮಾಡುತ್ತಿದ್ದಾರೆ. ಎಲ್ಲ 224 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಎಷ್ಟು ಸಾಧ್ಯವೋ ಅಷ್ಟು ನೆರವು ನೀಡುತ್ತಿದೆ. ಎರಡನೇ ಅಲೆ ಬರುತ್ತದೆ ಎಂದು ತಜ್ಞರು ಮೊದಲೇ ವರದಿ ನೀಡಿದ್ದಾರೆ. ಮೂರನೇ ಅಲೆ ಅಕ್ಟೋಬರ್ ನಲ್ಲಿ ಬರಲಿದೆ, ಈಗಲಾದರೂ ಸರಕಾರ ಎಚ್ಚೆತ್ತುಕೊಳ್ಳಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ಬಿಜೆಪಿಯವರು ಸರಕಾರದ ಪಡಿತರ ಕಿಟ್ ಗಳಿಗೆ ತಮ್ಮ ಭಾವಚಿತ್ರ ಹಾಕಿಕೊಂಡು ಹಂಚುತ್ತಿದ್ದಾರೆ. ಆದರೆ ನಮ್ಮ ಪಕ್ಷದ ನಾಯಕರು, ಕಾರ್ಯಕರ್ತರು ರಾಜ್ಯಕ್ಕೆ ಗೌರವ ತರುವ ಕೆಲಸ ಮಾಡುತ್ತಿದ್ದಾರೆ. ಯುವ ಕಾಂಗ್ರೆಸ್‍ನ ಅಧ್ಯಕ್ಷ ರಕ್ಷಾ ರಾಮಯ್ಯ ನೇತೃತ್ವದಲ್ಲಿ ಉತ್ತಮ ಕೆಲಸ ನಡೆಯುತ್ತಿದೆ. ರೈತರು, ವರ್ತಕರು ಮತ್ತಿತರ ಜನ ಸಮುದಾಯ ತೀವ್ರ ಸಂಕಷ್ಟದಲ್ಲಿದ್ದಾರೆ. ಇವರೆಲ್ಲರಿಗೂ ಪರಿಹಾರ ನೀಡಬೇಕೆಂದು ಕಾಂಗ್ರೆಸ್ ಒತ್ತಡ ಹೇರಿದ ಹಿನ್ನೆಲೆಯಲ್ಲಿ ಅಲ್ಪ ಸ್ವಲ್ಪ ಪರಿಹಾರ ಘೋಷಿಸಿದ್ದಾರೆ ಎಂದರು.

ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಮಾತನಾಡಿ, ರಾಜ್ಯದಲ್ಲಿ ಎರಡನೇ ಅಲೆ ಕಾಣಿಸಿಕೊಂಡ ನಂತರ ಎರಡು ತಿಂಗಳಿಂದ ಯುವ ಕಾಂಗ್ರೆಸ್ ಹಲವಾರು ರೀತಿಯಲ್ಲಿ ನೆರವು ನೀಡುತ್ತಾ ಬರುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯಸಭೆ ಸದಸ್ಯ ಜಿ.ಸಿ.ಚಂದ್ರಶೇಖರ್, ವಿಧಾನಪರಿಷತ್ ಸದಸ್ಯ ಎಂ.ಆರ್. ಸೀತಾರಾಮ್, ಕಾಂಗ್ರೆಸ್ ಮುಖಂಡರಾದ ಕೇಶವ್ ರಾಜಣ್ಣ, ಸತೀಶ್, ವಿಜಯ್ ಹುನಗುಂದ್, ಯುವ ಕಾಂಗ್ರೆಸ್ ನ ಉಪಾಧ್ಯಕ್ಷರಾದ ಭವ್ಯಾ, ಕೆಪಿವೈಸಿಸಿ ಮುಖಂಡರಾದ ಆರೀಫ್, ಸಿರಿಲ್, ಪ್ರದೀಪ್, ಅಖಿಲ್ ಅಹಮದ್, ಆನಂದ್, ಹನುಮಾನ್ ಕಿಶೋರ್, ಚೈತ್ರ, ದೀಪಿಕಾ ರೆಡ್ಡಿ, ಸುಮತಾ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X