ಚುನಾವಣೆ ಬಳಿಕ ಉತ್ತರ ಪ್ರದೇಶ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಪಕ್ಷ ನಿರ್ಧರಿಸುತ್ತದೆ:ಸಚಿವ ಪ್ರಸಾದ್ ಮೌರ್ಯ

ಲಕ್ನೊ: ಮುಂದಿನ ವರ್ಷದ ಆರಂಭದಲ್ಲಿ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯು ಪೂರ್ಣಗೊಂಡ ಬಳಿಕ ಬಿಜೆಪಿಯ ಕೇಂದ್ರ ನಾಯಕರು ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ನಿರ್ಧರಿಸುತ್ತಾರೆ ಎಂದು ರಾಜ್ಯದ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಹೇಳಿದ್ದಾರೆ.
ಅಸೆಂಬ್ಲಿ ಚುನಾವಣೆಯ ಬಳಿಕ ಕೇಂದ್ರ ನಾಯಕತ್ವವು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಅಂತಿಮಗೊಳಿಸಲಿದೆ ಎಂದು ರವಿವಾರ ಬಿಜೆಪಿ ಮುಖ್ಯ ಕಚೇರಿಯಲ್ಲಿ ಸುದ್ದಿಗಾರರಿಗೆ ಪ್ರಶ್ನೆಯೊಂದಕ್ಕೆ ಸಚಿವರು ಉತ್ತರಿಸಿದರು.
ಮುಂದಿನ ಚುನಾವಣೆಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಎದುರಿಸಲಾಗುವುದು ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಹೇಳಿಕೆ ನೀಡಿದ್ದರು. ಇದೀಗ ಸಚಿವ ಮೌರ್ಯ ಹೇಳಿಕೆಯು ಬಿಜೆಪಿಯಲ್ಲಿ ನಾಯಕತ್ವದ ವಿಚಾರದಲ್ಲಿ ಭಿನ್ನಾಭಿಪ್ರಾಯವಿರುವುದನ್ನು ಬಹಿರಂಗಪಡಿಸಿದೆ.
ಮುಂಬರುವ ಚುನಾವಣೆಯನ್ನುಯಾರ ನಾಯಕತ್ವದಲ್ಲಿ ಎದುರಿಸಬೇಕೆಂದು ಪಕ್ಷದ ರಾಷ್ಟ್ರೀಯ ನಾಯಕರು ನಿರ್ಧರಿಸಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಈ ಮೊದಲು ಹೇಳಿಕೆ ನೀಡಿದ್ದರು.