Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ದ.ಕ.ಜಿಲ್ಲೆಯಲ್ಲಿ ಲಾಕ್‌ಡೌನ್...

​ದ.ಕ.ಜಿಲ್ಲೆಯಲ್ಲಿ ಲಾಕ್‌ಡೌನ್ ತೆರವುಗೊಳಿಸಲು ಡಿವೈಎಫ್‌ಐ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ21 Jun 2021 11:36 PM IST
share

ಮಂಗಳೂರು, ಜೂ.21: ಕೊರೋನ ಪಾಸಿಟಿವಿಟಿ ದರ ಶೇ.5ಕ್ಕೆ ಇಳಿದಿರುವುದರಿಂದ ಬೆಂಗಳೂರು, ಉಡುಪಿ ಸಹಿತ ರಾಜ್ಯದ 22 ಜಿಲ್ಲೆಗಳಲ್ಲಿ ಮಾಡಿರುವಂತೆ ದ.ಕ.ಜಿಲ್ಲೆಯಲ್ಲಿಯೂ ಲಾಕ್‌ಡೌನ್ ತೆರವುಗೊಳಿಸಿ ಪೂರ್ಣಪ್ರಮಾಣದ ವಾಣಿಜ್ಯ ಚಟುವಟಿಕೆ, ದುಡಿಮೆಗೆ ಅವಕಾಶ ಮಾಡಿಕೊಡುವಂತೆ ಡಿವೈಎಫ್‌ಐ ದ.ಕ.ಜಿಲ್ಲಾ ಸಮಿತಿ ಆಗ್ರಹಿಸಿದೆ.

ಪಾಸಿಟಿವಿಟಿ ದರ ಶೇ.5ಕ್ಕೆ ಇಳಿದಿರುವ ಮಾನದಂಡದಲ್ಲಿ ಬೆಂಗಳೂರು ನಗರ ಸಹಿತ 16 ಜಿಲ್ಲೆಗಳಲ್ಲಿ ಲಾಕ್‌ಡೌನ್ ತೆರವುಗೊಳಿಸಲಾಗಿತ್ತು. ಅದಲ್ಲದೆ ಉಡುಪಿ, ಶಿವಮೊಗ್ಗ ಸಹಿತ ಮತ್ತೆ ಆರು ಜಿಲ್ಲೆಗಳ ಜನಪ್ರತಿನಿನಿಧಿಗಳ ಒತ್ತಾಯ, ಪಾಸಿಟಿವಿಟಿ ದರದ ಆಧಾರದಲ್ಲಿ ಲಾಕ್‌ಡೌನ್ ತೆರವುಗೊಳಿಸಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ. ದ.ಕ.ಜಿಲ್ಲೆಯಲ್ಲೂ ಪಾಸಿಟಿವಿಟಿ ದರ ಶೇ.5ಕ್ಕೆ ಇಳಿದಿದೆ. ಆದರೆ ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಖರೀದಿ ಹೊರತು ಪಡಿಸಿ ಉಳಿದ ವಾಣಿಜ್ಯ ವ್ಯವಹಾರ, ಸಾರ್ವಜನಿಕ ಸಾರಿಗೆಗೆ ನಿರ್ಬಂಧ ಮುಂದುವರಿಸಿರುವುದು, ಅಗತ್ಯ ವಸ್ತುಗಳ ಖರೀದಿ ಮಧ್ಯಾಹ್ನ ಒಂದು ಗಂಟೆಗೆ ಮಿತಿಗೊಳಿಸಿರುವುದು ತಾರತಮ್ಯವಾಗಿದೆ. ಅಲ್ಲದೆ ಜಿಲ್ಲೆಯ ಜನಪ್ರತಿನಿಧಿಗಳ ವೈಫಲ್ಯ ಹಾಗೂ ಜನರ ಬದುಕಿನ ಸಂಕಷ್ಟಗಳ ಕುರಿತಾದ ಸರಕಾರದ ಅನಾದಾರವನ್ನು ಎತ್ತಿ ತೋರಿಸುತ್ತದೆ. ರಾಜ್ಯದ ಉಳಿದ ಜಿಲ್ಲೆಗಳಿಗೆ ಅನ್ವಯಿಸಿರುವ ಮಾನದಂಡ ದ.ಕ. ಜಿಲ್ಲೆಯ ಮಟ್ಟಿಗೆ ಅನ್ವಯಗೊಳ್ಳದಿರುವುದು ದ.ಕ.ಜಿಲ್ಲಾಡಳಿತ, ಜನಪ್ರತಿನಿಧಿಗಳ ನಡವಳಿಕೆ ಪ್ರಶ್ನಾರ್ಹ.

ಲಾಕ್‌ಡೌನ್ ವಿನಾಯತಿಗಳು ನಿರ್ಮಾಣ ಕಾಮಗಾರಿ ಸಹಿತ ಎಲ್ಲಾ ವಲಯದ ಅಸಂಘಟಿತ ಕಾರ್ಮಿಕರ ದುಡಿಮೆಯ ಅವಕಾಶಗಳಿಗೆ ಯಾವ ರೀತಿಯಲ್ಲೂ ಅನುಕೂಲಕರವಾಗಿಲ್ಲ. ಜವಳಿ, ಚಪ್ಪಲಿ, ಗಾರ್ಮೆಂಟ್ಸ್, ಶೃಂಗಾರ, ಉಡುಗೊರೆ ಸಾಧನಗಳ ಸಹಿತ ಸಣ್ಣ ಪುಟ್ಟ ವ್ಯಾಪಾರಿ ಮಳಿಗೆ, ಅಂಗಡಿಗಳನ್ನು ನಡೆಸುವ ವ್ಯಾಪಾರಿಗಳು, ಅದರಲ್ಲಿನ ನೌಕರರು ಲಾಕ್‌ಡೌನ್ ಮುಂದುವರಿಕೆಯಿಂದ ದಿವಾಳಿ ಸ್ಥಿತಿಗೆ ತಲುಪಿದ್ದಾರೆ. ಖಾಸಗಿ ಬಸ್ ಸೇರಿದಂತೆ ಪ್ರಯಾಣ ಸಾರಿಗೆಯ ಮಾಲಕರು, ಕಾರ್ಮಿಕರು ಜಿಲ್ಲೆಯಲ್ಲಿ ಹತ್ತಾರು ಸಾವಿರ ಸಂಖ್ಯೆಯಲ್ಲಿದ್ದು, ಅವರ ಬದುಕು ಬೀದಿಗೆ ಬಂದಿದೆ.

ಪಾಸಿಟಿವಿಟಿ ದರ ಶೇ.5ಕ್ಕೆ ಇಳಿದಿದ್ದರೂ ಕೂಡ ಜಿಲ್ಲೆಯ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಸೋಮಾರಿತನ ಬಿಟ್ಟು ಜನರ ಸಂಕಷ್ಟಗಳ ಕುರಿತಾದ ನಿರ್ಲಕ್ಷ್ಯ ಧೋರಣೆಯನ್ನು ಬದಲಾಯಿಸಿ ರಾಜ್ಯ ಸರಕಾರಕ್ಕೆ ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟು ತಕ್ಷಣದಿಂದಲೇ ಜಿಲ್ಲೆಯ ಲಾಕ್‌ಡೌನ್ ತೆರವುಗೊಳಿಸಲು ಮುಂದಾಗಬೇಕು ಎಂದು ಡಿವೈಎಫ್‌ಐ ದ.ಕ. ಜಿಲ್ಲಾಧ್ಯಕ್ಷ ಬಿ.ಕೆ.ಇಮ್ತಿಯಾಝ್ ಮತ್ತು ಕಾರ್ಯದರ್ಶಿ ಸಂತೋಷ್ ಬಜಾಲ್ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X