Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೃಷಿ ವಿವಿಗಳಲ್ಲಿ ರೈತರ ಮಕ್ಕಳಿಗೆ...

ಕೃಷಿ ವಿವಿಗಳಲ್ಲಿ ರೈತರ ಮಕ್ಕಳಿಗೆ ಮೀಸಲಾತಿ ಶೇ.50ಕ್ಕೆ ಹೆಚ್ಚಳ: ಸಚಿವ ಬಿ.ಸಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ22 Jun 2021 3:19 PM IST
share
ಕೃಷಿ ವಿವಿಗಳಲ್ಲಿ ರೈತರ ಮಕ್ಕಳಿಗೆ ಮೀಸಲಾತಿ ಶೇ.50ಕ್ಕೆ ಹೆಚ್ಚಳ: ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು, ಜೂ.22: 2021-22ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದಂತೆ ಕೃಷಿ ವಿಶ್ವವಿದ್ಯಾನಿಲಯಗಳಲ್ಲಿ ರೈತರ ಮಕ್ಕಳಿಗೆ ನೀಡುತ್ತಿರುವ ಮೀಸಲಾತಿಯನ್ನು ಶೇ. 40 ರಿಂದ ಶೇ. 50ಕ್ಕೆ ಏರಿಸಿ ಸಂಪುಟ ಸಭೆ ಅಸ್ತು ಎಂದಿರುವುದಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಹರ್ಷ ವ್ಯಕ್ತಪಡಿಸಿದ್ದಾರೆ.

2014ರ ಜು.5ರಂದು ಬಿ.ಎಸ್ಸಿ(ಎಜಿ ) ಮತ್ತು ರೈತರು ಮತ್ತು ಕೃಷಿ ಕಾರ್ಮಿಕರ ಮಕ್ಕಳಿಗೆ ಸಮಾನ ಪದವಿಗಳಿಗೆ ಪ್ರವೇಶಕ್ಕಾಗಿ ಪ್ರಸ್ತುತ ಮೀಸಲಾತಿಯನ್ನು ಶೇ.40ಕ್ಕೆ ನಿಗಧಿಪಡಿಸಲಾಗಿತ್ತು. ರೈತಾಪಿ ಮಕ್ಕಳ ಅನುಕೂಲಕ್ಕಾಗಿ ಇನ್ನಷ್ಟು ಮೀಸಲಾತಿ ಹೆಚ್ಚಿಸಿದಲ್ಲಿ ಕೃಷಿ ಪದವೀಧರರು ಗ್ರಾಮೀಣ ಭಾಗದಲ್ಲಿ ಸ್ವಯಂ ಉದ್ಯಮದಾರರಾಗಿ ಕೃಷಿಯಲ್ಲಿ ಯಶಸ್ವಿ ಕೃಷಿ ತಾಂತ್ರಿಕತೆಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ಗ್ರಾಮೀಣ ಯುವಕರಿಗೆ ಉದ್ಯೋಗ ಅವಕಾಶಗಳನ್ನು ಒದಗಿಸುವ ಉದ್ದಿಮೆದಾರರಾಗುತ್ತಾರೆ ಎಂದು ಅವರು ಹೇಳಿದ್ದಾರೆ.

ಆದುದರಿಂದ, ಮೀಸಲಾತಿಯನ್ನು ಶೇ.10%ರಷ್ಟು ಹೆಚ್ಚಿಸುವ ಬಗ್ಗೆ ಚಿಂತನೆ ನಡೆಸಿ, ಈ ಸಂಬಂಧ ಕೃಷಿ ವಿಶ್ವವಿದ್ಯಾಲಯಗಳ ಜೊತೆಯೂ ಚರ್ಚಿಸಲಾಗಿತ್ತು. ಅದರ ಮುಂದುವರೆದ ಭಾಗವಾಗಿ ಕೆಲವು ದಿನಗಳ ಹಿಂದೆ ತಮ್ಮ ಅಧ್ಯಕ್ಷತೆಯಲ್ಲಿ ಕೃಷಿ ವಿಶ್ವವಿದ್ಯಾಲಯಗಳ ಸಮನ್ವಯ ಸಮಿತಿಯ ಸಭೆ ನಡೆದಿದ್ದು, ಸಭೆಯಲ್ಲಿ ಮೀಸಲಾತಿ ಹೆಚ್ಚಳ ಕುರಿತು ಸುದೀರ್ಘ ಹಾಗೂ ಸಮಗ್ರ ಚರ್ಚೆ ನಡೆಸಿ ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಮೀಸಲಿಟ್ಟಿರುವ ಸೀಟುಗಳ ಪ್ರಮಾಣವನ್ನು ಶೇ.40 ರಿಂದ 50 ರವರೆಗೆ ಹೆಚ್ಚಿಸಲು ನಿರ್ಧರಿಸಲಾಯಿತು ಎಂದು ಅವರು ಹೇಳಿದ್ದಾರೆ.

ರೈತರ ಅಭಿವೃದ್ಧಿಯ ಉದ್ದೇಶಿತ ಪ್ರಸ್ತಾವವನ್ನು ಸಚಿವ ಸಂಪುಟದ ಸಭೆಯು ಸೋಮವಾರ ಇದಕ್ಕೆ ಅಸ್ತು ಎಂದಿದೆ. ನಗರ ಮತ್ತು ಪಟ್ಟಣದ ಮಕ್ಕಳನ್ನು ಹೋಲಿಸಿದರೆ ರೈತರು ಮತ್ತು ಕೃಷಿ ಕಾರ್ಮಿಕರ ಮಕ್ಕಳ ಸಾಮಾಜಿಕ-ಆರ್ಥಿಕ ಸ್ಥಿತಿ ಮತ್ತು ಶೈಕ್ಷಣಿಕ ಸೌಲಭ್ಯಗಳ ಗುಣಮಟ್ಟವನ್ನು ಬಲವರ್ಧಿಸಲು ಅವಶ್ಯಕತೆಗಳನ್ನು ಕಲ್ಪಿಸಿದಂತಾಗುತ್ತದೆ ಎಂದು ಬಿ.ಸಿ.ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.

ರೈತರ ಅಭಿವೃದ್ಧಿಗೆ ಸಹಕರಿಸುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿರುವ ಬಿ.ಸಿ.ಪಾಟೀಲ್, ಕೃಷಿ ಪದವಿಯನ್ನು ವ್ಯಾಸಾಂಗ ಮಾಡಿದ ನಂತರ ರೈತರ ಮಕ್ಕಳು ಕೃಷಿ ವೈಜ್ಞಾನಿಕ ಪತಿ ಕೃಷಿ ಚಟುವಟಿಕೆಯನ್ನು ಮಾಡುವುದರ ಜೊತೆಗೆ ಹಲವು ವರ್ಗದ / ಕ್ಷೇತ್ರದ ವಿಷಯಗಳಾದ ಅಗ್ರಾನಮಿ , ಮಣ್ಣು ವಿಜ್ಞಾನ ಪಾಂಟ್ ಜೆನೆಟಿಕ್ಸ್ ಹಾಗೂ ಇತರೆ ವಿಷಯಗಳ ಜ್ಞಾನಹೊಂದಿರುವುದರಿಂದ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಜೊತೆಗೆ ಹಲವು ಕ್ಷೇತ್ರಗಳಲ್ಲಿಯೂ ಈ ವಿದ್ಯಾರ್ಥಿಗಳಿಗೆ ವೃತ್ತಿಯ ಅವಕಾಶ ಅವಕಾಶ ಹೆಚ್ಚಾಗಿರುತ್ತದೆ ಎಂದು ಪ್ರತಿಪಾದಿಸಿದ್ದಾರೆ.

ಕೃಷಿ ಪದವೀಧರರು ಗ್ರಾಮೀಣ ಭಾಗದಲ್ಲಿ ಸ್ವಯಂ ಉದ್ದಿಮೆದಾರರಾಗಿ ಕೃಷಿಯಲ್ಲಿ ಯಶಸ್ವಿ ಕೃಷಿ ತಾಂತ್ರಿಕತೆಗಳನ್ನು ಅಳವಡಿಸಿಕೊಳ್ಳುವುದರ ಮೂಲಕ, ಗ್ರಾಮೀಣ ಯುವಕರಿಗೆ ಉದ್ಯೋಗ ಅವಕಾಶಗಳನ್ನು ಒದಗಿಸುವ ಉದ್ದಿಮೆದಾರರಾಗಲು ಕಲ್ಪಿಸಿದಂತಾಗುತ್ತದೆ ಎಂದು ಬಿ.ಸಿ.ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X