Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಚಲನಚಿತ್ರ, ಕಿರುತೆರೆ ರಂಗದವರಿಗೆ ಆರ್ಥಿಕ...

ಚಲನಚಿತ್ರ, ಕಿರುತೆರೆ ರಂಗದವರಿಗೆ ಆರ್ಥಿಕ ನೆರವು: ಸೇವಾಸಿಂಧು ಪೋರ್ಟನಲ್ಲಿ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ22 Jun 2021 3:56 PM IST
share

ಬೆಂಗಳೂರು : ಕೋವಿಡ್ -19 ನ ಎರಡನೇ ಅಲೆ ಹಿನ್ನೆಲೆಯಲ್ಲಿ ಜಾರಿಯಾಗಿದ್ದ ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಚಲನಚಿತ್ರ ಮತ್ತು ಕಿರುತೆರೆ ಕಲಾವಿದರು ಮತ್ತು ತಂತ್ರಜ್ಞರು ಹಾಗೂ ಚಲನಚಿತ್ರ ಮಂದಿರದ ಕಾರ್ಮಿಕರಿಗೆ ಮುಖ್ಯಮಂತ್ರಿ ಯವರು ಘೋಷಿಸಿದ್ದ ಮೂರು ಸಾವಿರ ರೂ. ಮೊತ್ತದ ವಿಶೇಷ ಆರ್ಥಿಕ ಪ್ಯಾಕೇಜ್ನ ನೆರವಿಗಾಗಿ ಸೇವಾಸಿಂಧು ಪೋರ್ಟಲ್ ಮೂಲಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಆನ್ಲೈನ್ ಅರ್ಜಿ ಆಹ್ವಾನಿಸಿದೆ.

ರಾಜ್ಯದಲ್ಲಿ ಎರಡನೇ ಅಲೆಯ ವೇಳೆ ಸರ್ಕಾರ ವಿಧಿಸಿದ್ದ ನಿರ್ಬಂಧದಿಂದಾಗಿ ಬಾಧಿತರಾಗಿದ್ದ ಸಮಾಜ ವಿವಿಧ ವರ್ಗದವರಿಗೆ ಮುಖ್ಯಮಂತ್ರಿ ಯವರು 2021ರ ಜೂನ್ 3 ರಂದು ವಿಶೇಷ ಪರಿಹಾರದ ಎರಡನೇ ಪ್ಯಾಕೇಜ್ ಅನ್ನು ಘೋಷಣೆ ಮಾಡಿದ್ದರು. ಇದರಲ್ಲಿ ಚಲನಚಿತ್ರೋದ್ಯಮ ಹಾಗೂ ಕಿರುತೆರೆ ಮಾಧ್ಯೇಮದಲ್ಲಿ ತೊಡಗಿಕೊಂಡಿರುವ ನೋಂದಾಯಿತ ಅಸಂಘಟಿತ ಕಾರ್ಮಿಕರಿಗೆ ತಲಾ ಮೂರು ಸಾವಿರ ರೂ. ಪರಿಹಾರ ನೀಡಲು ಸರ್ಕಾರವು ನಿರ್ಧರಿಸಿತ್ತು. ಸರ್ಕಾರದ ಈ ನಿರ್ಧಾರದಿಂದಾಗಿ ಇಪ್ಪತ್ತೆರಡು (22) ಸಾವಿರ ನೋಂದಾಯಿತ ಕಾರ್ಮಿಕರಿಗೆ ಅನುಕೂಲವಾಗಲಿದೆ. ಇದಕ್ಕಾಗಿ ಅಂದಾಜು ಆರು ಕೋಟಿ ಅರವತ್ತು ಲಕ್ಷ ರೂ. ಮೀಸಲಿರಿಸಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ. ಪಿ.ಎಸ್. ಹರ್ಷ ಅವರು ತಿಳಿಸಿದ್ದಾರೆ.

ಚಲನಚಿತ್ರ ರಂಗದವರು ಮತ್ತು ಕಿರುತೆರೆ ರಂಗದವರಿಗೆ ಆರ್ಥಿಕ ನೆರವನ್ನು ಆಧಾರ್ ಕಾರ್ಡ್ ಸಂಖ್ಯೆಯನ್ನು ಆಧರಿಸಿ ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲು ಅನುವಾಗುವಂತೆ ಸೇವಾಸಿಂಧು ವೆಬ್ಪೋರ್ಟಲ್ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ನಮೂನೆ ಮತ್ತು ಇನ್ನಿತರ ಷರತ್ತುಗಳಿಗಾಗಿ www.sevasindhu.karnataka.gov.in ಗೆ ಭೇಟಿ ನೀಡಿ ಪಡೆದುಕೊಳ್ಳಬಹುದು.

ಒಬ್ಬರಿಗೆ ಒಂದು ಅರ್ಜಿಯನ್ನು ಮಾತ್ರ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಸುವವರು ಸಂಬಂಧಿತ ಸಂಘಗಳಲ್ಲಿ ಸದಸ್ಯತ್ವ ಹೊಂದಿರಬೇಕು ಮತ್ತು ಅಲ್ಲಿಂದ ಕಡ್ಡಾಯವಾಗಿ ಶಿಫಾರಸ್ಸು ಪತ್ರ ಪಡೆದು ಅದನ್ನು ಸೇವಾಸಿಂಧು ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಬೇಕಾಗಿದೆ. ಹಾಗೆಯೇ, ಚಲನಚಿತ್ರ ಮಂದಿರಗಳಲ್ಲಿ ಕೆಲಸ ಮಾಡುವವರು ಭವಿಷ್ಯ ನಿಧಿ (ಪ್ರಾವಿಡೆಂಟ್ ಫಂಡ್) ಸಂಖ್ಯೆಯೊಂದಿಗೆ ಚಲನಚಿತ್ರ ಮಂದಿರದ ಮಾಲೀಕರ ಪತ್ರದೊಂದಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು.

ಆನ್ಲೈನ್ ಅರ್ಜಿಯು 2021ರ ಜುಲೈ 9ರ ವರೆಗೆ ಸೇವಾಸಿಂಧು ಪೋರ್ಟಲ್ನಲ್ಲಿ ಲಭ್ಯವಿದೆ. ಆರ್ಥಿಕ ನೆರವಿನ ಅರ್ಜಿ ಇಲ್ಲವೇ ಶಿಫಾರಸ್ಸು ಪತ್ರಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಯಾವುದೇ ಕಚೇರಿಗಳಲ್ಲಿ ಸ್ವೀಕರಿಸಲಾಗುವುದಿಲ್ಲ.

ಆರ್ಥಿಕ ನೆರವಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಮತ್ತು ಆನ್ಲೈನ್ನಲ್ಲಿ ಅರ್ಜಿಯನ್ನು ಭರ್ತಿ ಮಾಡಲು, ತಾಂತ್ರಿಕ ಮಾರ್ಗದರ್ಶನದ ಅಗತ್ಯವಿದ್ದಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿಯಲ್ಲಿ ಸ್ಥಾಪಿಸಿರುವ ಸಹಾಯವಾಣಿಯ ಮೊಬೈಲ್ ಸಂಖ್ಯೆ 8904645529 ಅನ್ನು ಸಂಪರ್ಕಿಸಬಹುದು ಇಲ್ಲವೆ dpmfilm1@gmail.com ಗೆ ಇಮೇಲ್ ಮೂಲಕ ಪಡೆದುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X