ಮಂಗಳೂರು: ಕಾರ್ಮಿಕರ ನಗದು, ಮೊಬೈಲ್ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಮಂಗಳೂರು, ಜೂ.22: ನಗರದ ಪಂಪ್‌ವೆಲ್ ಬಳಿ ಇರುವ ನಿರ್ಮಾಣ ಹಂತದ ಕಟ್ಟಡದಲ್ಲಿ ಮಲಗಿದ್ದ ಕಾರ್ಮಿಕರ ಹಣ, ಮೊಬೈಲ್ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಕದ್ರಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಬಂಧಿತರು ಓರ್ವ ಉಳ್ಳಾಲ ಮುಕ್ಕಚ್ಚೇರಿ ಹಾಗೂ ಇನ್ನೋರ್ವ ಮಂಜನಾಡಿಯವನೆಂದು ಗುರುತಿಸಲಾಗಿದೆ. ಮೂರನೇ ಆರೋಪಿ ತಲೆಮರೆಸಿಕೊಂಡಿದ್ದಾನೆ. ಹಣದ ಅವಶ್ಯಕತೆ ಇದೆ ಎಂದು ಆರೋಪಿಗಳು ಕಳ್ಳತನ ಮಾಡುತ್ತಿದ್ದರು. ರಾತ್ರಿ ವೇಳೆ ಇಂತಹ ದುಷ್ಕೃತ್ಯಗಳನ್ನು ನಡೆಸುತ್ತಿದ್ದರು. ಈ ರೀತಿಯ ತಂಡ ಕಾರ್ಯಾಚರಿಸುತ್ತಿದೆಯೇ ಎಂಬ ಬಗ್ಗೆ ತನಿಖೆ ನಡೆಸಬೇಕಾಗಿದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.
'ಅನುಮಾನಸ್ಪದವಾಗಿ ತಿರುಗಾಡುವರನ್ನು ಕಂಡರೆ ಮಾಹಿತಿ ನೀಡಿ'
ಮನೆ ಅಥವಾ ಪರಿಸರದಲ್ಲಿ ಅಪರಿಚಿತ ವ್ಯಕ್ತಿಗಳು ಅನುಮಾನಾಸ್ಪದವಾಗಿ ತಿರುಗಾಡುವುದು, ಸರ್ವೇ ನಡೆಸುವುದು ಕಂಡು ಬಂದರೆ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸ್ ಆಯುಕ್ತರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
Next Story





