Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆನ್‍ಲೈನ್ ಕ್ಲಾಸ್‍ನಿಂದ ಮಲೆನಾಡಿನ...

ಆನ್‍ಲೈನ್ ಕ್ಲಾಸ್‍ನಿಂದ ಮಲೆನಾಡಿನ ಮಕ್ಕಳಿಗೆ ಶಿಕ್ಷಣ ಸಿಗುತ್ತಿಲ್ಲ: ಬಿಜೆಪಿ ಶಾಸಕ ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ22 Jun 2021 10:57 PM IST
share
ಆನ್‍ಲೈನ್ ಕ್ಲಾಸ್‍ನಿಂದ ಮಲೆನಾಡಿನ ಮಕ್ಕಳಿಗೆ ಶಿಕ್ಷಣ ಸಿಗುತ್ತಿಲ್ಲ: ಬಿಜೆಪಿ ಶಾಸಕ ಕುಮಾರಸ್ವಾಮಿ

ಚಿಕ್ಕಮಗಳೂರು, ಜೂ.22: ಬಡವರು, ಕೂಲಿ ಕಾರ್ಮಿಕರ ಮಕ್ಕಳು ಮೊಬೈಲ್‍ನಿಂದಾಗಿ ಆಟ, ಪಾಠವಿಲ್ಲದೇ ಬೌದ್ಧಿಕವಾಗಿ ದಿವಾಳಿಯಾಗುತ್ತಿದ್ದಾರೆ. ಸರಕಾರ ಆನ್‍ಲೈನ್ ಪಾಠವನ್ನು ನಿಲ್ಲಿಸಬೇಕು. ಮಲೆನಾಡಿನಲ್ಲಿ ಕೊರೋನ ಸೋಂಕಿನ ಪ್ರಮಾಣ ಕಡಿಮೆಯಾಗಿದ್ದು, ಸರಕಾರ ಕೂಡಲೇ ಶಾಲೆಗಳನ್ನು ಆರಂಭಿಸಬೇಕು ಎಂದು ಮೂಡಿಗೆರೆ ವಿಧಾನಸಭೆ ಕ್ಷೇತ್ರದ ಶಾಸಕ ಎಂ.ಪಿ.ಕುಮಾರಸ್ವಾಮಿ ಹೇಳಿದ್ದಾರೆ.

ಮೂಡಿಗೆರೆ ಪಟ್ಟಣದ ಶಾಸಕರ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಳ್ಳವರು ತಮ್ಮ ಮಕ್ಕಳ ಶಿಕ್ಷಣಕ್ಕಾಗಿ ದುಬಾರಿ ಮೊಬೈಲ್‍ಗಳನ್ನು ಕೊಡಿಸುತ್ತಾರೆ. ತಮ್ಮ ಮಕ್ಕಳ ಶಿಕ್ಷಣಕ್ಕಾಗಿ ಎಲ್ಲ ವ್ಯವಸ್ಥೆಯನ್ನೂ ಮಾಡಿಕೊಳ್ಳುತ್ತಾರೆ. ಆದರೆ ಬಡವರು, ಕಾರ್ಮಿಕರ ಮಕ್ಕಳಿಗೆ ದುಬಾರಿ ಮೊಬೈಲ್ ಕೊಡಿಸಲು ಸಾಧ್ಯವಾಗುತ್ತಿಲ್ಲ. ಆನ್‍ಲೈನ್ ತರಗತಿಗಳಿಂದಾಗಿ ಮಕ್ಕಳು ಮೊಬೈಲ್‍ಗಳ ದಾಸರಾಗುತ್ತಿದ್ದಾರೆ. ಆಟ ಪಾಠವಿಲ್ಲದೇ ಮಕ್ಕಳು ಬೌದ್ಧಿಕವಾಗಿ ದಿವಾಳಿಯಾಗುತ್ತಿದ್ದಾರೆ ಎಂದರು.

ಗ್ರಾಮೀಣ ಭಾಗದಲ್ಲಿ ಬಡವರ್ಗದ ಜನರು ತಮ್ಮ ಮಕ್ಕಳ ಆನ್‍ಲೈನ್ ಪಾಠಕ್ಕೆ ಹರಸಾಹಸ ಪಡುತ್ತಿದ್ದಾರೆ. ನೆಟ್‍ವರ್ಕ್ ಸಿಗದೇ ಮರ ಹತ್ತಿ ಕೂರುವಂತಹ ಅವ್ಯವಸ್ಥೆ ನಿರ್ಮಾಣವಾಗಿದ್ದು, ಮಕ್ಕಳಿಗೆ ಸರಿಯಾಗಿ ಪಾಠ ಕೇಳಲೂ ಸಾಧ್ಯವಾಗುತ್ತಿಲ್ಲ. ಬಡವರ ಮಕ್ಕಳಿಗೆ ಆನ್‍ಲೈನ್ ಶಿಕ್ಷಣ ಮರಿಚೀಕೆಯಾಗಿದ್ದು, ಪೋಷಕರು ಮಕ್ಕಳ ಶಿಕ್ಷಣದ ಬಗ್ಗೆ ಆತಂಕದಲ್ಲಿದ್ದು, ನಮ್ಮ ಮಕ್ಕಳಿಗೆ ಶಿಕ್ಷಣ ಸಿಗಲ್ಲ ಎಂಬ ಮನೋಭಾವನೆಯಲ್ಲಿದ್ದಾರೆ. ಆದ್ದರಿಂದ ಆನ್‍ಲೈನ್ ಕ್ಲಾಸ್‍ಗಳನ್ನು ನಿಲ್ಲಿಸುವುದು ಸೂಕ್ತ ಎಂದು ಅವರು ಅಭಿಪ್ರಾಯಿಸಿದರು.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊರೋನ ಸೋಂಕಿನ ಪ್ರಮಾಣ ಕಡಿಮೆಯಾಗಿದೆ. ಗ್ರಾಮೀಣ ಭಾಗದಲ್ಲೂ ಸೋಂಕು ಇಳಿಮುಖವಾಗಿದೆ. ಆದ್ದರಿಂದ ರಾಜ್ಯ ಸರಕಾರ ಕೂಡಲೇ ಶಾಲೆಗಳ ಆರಂಭಕ್ಕೆ ಮುಂದಾಗಬೇಕು. ಮಕ್ಕಳ ಪೋಷಕರು ಮಾಧ್ಯಮಗಳಲ್ಲಿ ಬರುವ ಸುದ್ದಿಗಳಿಗೆ ಕಿವಿಗೊಡಬಾರದು. ಸರಕಾರ ಶಾಲೆಗಳನ್ನು ಆರಂಭಿಸಿದರೆ ಅಗತ್ಯ ಕ್ರಮಗಳನ್ನು ಕೈಗೊಳ್ಳತ್ತದೆ. ಮಕ್ಕಳ ಆರೋಗ್ಯದ ಬಗ್ಗೆ ಅನಗತ್ಯ ಭಯಪಡದೆ ಶಾಲೆಗೆ ಮಕ್ಕಳನ್ನು ಕಳುಹಿಸಲು ಹಿಂಜರಿಯಬಾರದು ಎಂದು ಶಾಸಕ ಕುಮಾರಸ್ವಾಮಿ ಹೇಳಿದರು.

ಮಲೆನಾಡಿನಲ್ಲಿ ಕೊರೋನದಿಂದ ಯಾವುದೇ ಆಪತ್ತು ಸಂಭವಿಸಿಲ್ಲ. ಮಲೆನಾಡಿನಲ್ಲಿ ಮಕ್ಕಳ ಆನ್‍ಲೈನ್ ಶಿಕ್ಷಣಕ್ಕೆ ನೆಟ್‍ವರ್ಕ್ ಸಮಸ್ಯೆ ಹೆಚ್ಚಾಗಿರುವುದರಿಂದ ಸಿಎಂ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್‍ ಕುಮಾರ್ ಮಲೆನಾಡಿನಲ್ಲಿ ಶಾಲೆಗಳನ್ನು ಆರಂಭಿಸಲು ಮುಂದಾಗಬೇಕು. ಈ ಸಂಬಂಧ ತಾನು ಸರಕಾರಕ್ಕೆ ಮನವಿ ಮಾಡುವುದಾಗಿ ಇದೇ ವೇಳೆ ಕುಮಾರಸ್ವಾಮಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X