Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಮಾಹೆಯ ಗಾಂಧಿಯನ್ ಸೆಂಟರ್‌ನಿಂದ ಹೊಸ...

​ಮಾಹೆಯ ಗಾಂಧಿಯನ್ ಸೆಂಟರ್‌ನಿಂದ ಹೊಸ ಕೋರ್ಸ್

ವಾರ್ತಾಭಾರತಿವಾರ್ತಾಭಾರತಿ22 Jun 2021 11:20 PM IST
share

ಮಣಿಪಾಲ, ಜೂ.22: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್‌ನ (ಮಾಹೆ) ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆಟ್ಸರ್ ಆ್ಯಂಡ್ ಸೈನ್ಸಸ್ (ಜಿಸಿಪಿಎಎಸ್) ಹಲವು ಹೊಸ ವೈಶಿಷ್ಟ್ಯಗಳೊಂದಿಗೆ ಈ ಶೈಕ್ಷಣಿಕ ವರ್ಷದಿಂದ ‘ಬಿಎ ಇನ್ ಎಸ್ಥೆಟಿಕ್ಸ್ ಆಂಡ್ ಪೀಸ್ ಸ್ಟಡೀಸ್’ ಎಂಬ ಹೊಸ ಕೋರ್ಸ್‌ನ್ನು ಪ್ರಾರಂಭಿಸಿದೆ. ಈ ನೂತನ ಕಾರ್ಯಕ್ರಮವು ಆನರ್ಸ್ ಪದವಿಯ ಸಾಧ್ಯತೆಯೊಂದಿಗೆ ರಾಷ್ಟ್ರೀಯ ಶಿಕ್ಷಣ ನೀತಿ -2020ಗೆ ಅನುಗುಣವಾಗಿದೆ.

ಈಗ ಹೆಚ್ಚು ಚರ್ಚೆಗೊಳ್ಳುತ್ತಿರುವ ಅಂತರಶಿಸ್ತೀಯ ಶಿಕ್ಷಣದೊಂದಿಗೆ ‘ಬಿಎ ಇನ್ ಎಸ್ಥೆಟಿಕ್ಸ್ ಆಂಡ್ ಪೀಸ್ ಸ್ಟಡೀಸ್’ ತನ್ನ ವಿಶಾಲ ಚೌಕಟ್ಟಿನಲ್ಲಿ ಕಲೆ ಮತ್ತು ಸಮಾಜ ಶಾಸ್ತ್ರದ ಅಧ್ಯಯನವನ್ನು ಒಟ್ಟಿಗೆ ತರಲು ಉದ್ದೇಶಿಸಿದೆ. ಸಾಹಿತ್ಯ, ಕಲೆ ಮತ್ತು ಮಾಧ್ಯಮಗಳ ಕಲಿಕೆಯುಇಲ್ಲಿ ರಾಜಕೀಯ ಶಾಸ್ತ್ರ, ಅಂತಾರಾಷ್ಟ್ರೀಯ ಸಂಬಂಧಗಳು, ತತ್ವಶಾಸ್ತ್ರಗಳ ಅಧ್ಯಯನದ ಜೊತೆಗೆ ಸಾಧ್ಯವಾಗಲಿದೆ ಗಾಂಧಿಯನ್ ಸೆಂಟರ್ ಪ್ರಕಟಣೆಯಲ್ಲಿ ತಿಳಿಸಿದೆ.

ಸೃಜನಶೀಲ/ಕಲಾ ಸಾಮರ್ಥ್ಯ ಮತ್ತು ಬೌದ್ಧಿಕ ಕುಶಾಗ್ರಮತಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಅರ್ಥಪೂರ್ಣ ವೃತ್ತಿ ಸಾಧ್ಯತೆಗಳನ್ನು ಒದಗಿಸುವುದು ಇದರ ಉದ್ದೇಶ. ಪತ್ರಿಕೋದ್ಯೋಗ, ಮಾಧ್ಯಮ, ಸಂವಹನ, ಸಾಮಾಜಿಕ ವಲಯ, ಅಂತಾರಾಷ್ಟ್ರೀಯ ಸಂಸ್ಥೆಗಳು, ಸಂಶೋಧನೆ ಮತ್ತು ಪ್ರಕಾಶನ ಕ್ಷೇತ್ರಗಳಲ್ಲಿ ಕೆಲಸ ಮಾಡಲು ಸಾಧ್ಯವಾಗುವಂತೆ ವಿದ್ಯಾರ್ಥಿಗಳು ಕಲಾತ್ಮಕ, ಬೌದ್ಧಿಕ ಮತ್ತು ಸಂವಹನ ಸಾಮರ್ಥ್ಯಗಳನ್ನು ಬೆಳೆಯಿಸಿಕೊಳ್ಳುವಂತೆ ಪಠ್ಯಕ್ರಮವನ್ನು ಸಿದ್ಧ ಗೊಳಿಸಲಾಗುವುದು ಎಂದು ಜಿಸಿಪಿಎಎಸ್ ನಿರ್ದೇಶಕ ಪ್ರೊ.ವರದೇಶ್ ಹಿರೇಗಂಗೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿ.ಎ.(ಎಸ್ಥೆಟಿಕ್ಸ್ ಆಂಡ್ ಪೀಸ್ ಸ್ಟಡೀಸ್) ಕಾರ್ಯಕ್ರಮದಲ್ಲಿ ನಿರ್ಗಮನ ವರ್ಷಗಳ ಆಯ್ಕೆ ಇದ್ದು, ವಿದ್ಯಾರ್ಥಿಗಳು ಮೂರು ವರ್ಷಗಳ ಕಾಲ ಅಧ್ಯಯನ ಮಾಡಿ ಸಾಮಾನ್ಯ ಪದವಿ ಪಡೆಯುವ, ನಾಲ್ಕು ವರ್ಷಗಳ ಕಾಲ ಅಧ್ಯಯನ ಮಾಡಿ ಆನರ್ಸ್ ಪದವಿ ಪಡೆಯುವ, ಎರಡು ವರ್ಷಗಳ ಕಾಲ ಅಧ್ಯಯನ ಮಾಡಿ ಡಿಪ್ಲೊಮಾ, ಒಂದು ವರ್ಷ ಅಧ್ಯಯನ ಮಾಡಿ ಪ್ರಮಾಣ ಪತ್ರ ಪಡೆಯುವ ಅವಕಾಶಗಳಿವೆ. ಆನರ್ಸ್ ಪದವಿಯಲ್ಲಿ ಸಂಶೋಧನೆಯು ಅವಿಭಾಜ್ಯಅಂಗವಾಗಿರುವುದರಿಂದ ಇದು ವಿಭಿನ್ನ ಮತ್ತು ಜಾಗತಿಕ ಮಾನದಂಡ ಗಳಿಗೆ ಸಮನಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಈ ಪದವಿ ಮತ್ತು ಸ್ನಾತಕೋತ್ತರ ಕಾರ್ಯಕ್ರಮದ ವಿವರಗಳನ್ನು ಹಾಗೂ ಹೆಚ್ಚಿನ ಮಾಹಿತಿಗಳನ್ನು ಈ ಕೆಳಗಿನ ಲಿಂಕ್‌ನಿಂದ ಪಡೆಯಬಹುದು. - https://manipal.edu/gandhian-centre.html -ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X