Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಗದ ರಹಿತ ವಿಧಾನ ಪರಿಷತ್ತಿಗೆ ಶೀಘ್ರ...

ಕಾಗದ ರಹಿತ ವಿಧಾನ ಪರಿಷತ್ತಿಗೆ ಶೀಘ್ರ ಕ್ರಮ: ಸಭಾಪತಿ ಬಸವರಾಜ ಹೊರಟ್ಟಿ

ವಾರ್ತಾಭಾರತಿವಾರ್ತಾಭಾರತಿ22 Jun 2021 11:31 PM IST
share
ಕಾಗದ ರಹಿತ ವಿಧಾನ ಪರಿಷತ್ತಿಗೆ ಶೀಘ್ರ ಕ್ರಮ: ಸಭಾಪತಿ ಬಸವರಾಜ ಹೊರಟ್ಟಿ

ಬೆಂಗಳೂರು, ಜೂ.22: ನೂರಾ ಹದಿನಾಲ್ಕು ವರ್ಷಗಳ ಇತಿಹಾಸ ಹೊಂದಿರುವ ವಿಧಾನ ಪರಿಷತ್‍ನಲ್ಲಿ ಆಮೂಲಾಗ್ರ ಬದಲಾವಣೆಗೆ ಒತ್ತು ನೀಡಿದ್ದು ಪರಿಷತ್ತಿನ ಕಾರ್ಯಚಟುವಟಿಕೆ ಹಾಗೂ ಸದನದ ಕಾರ್ಯಕಲಾಪಗಳನ್ನು ಕಾಗದ ರಹಿತವನ್ನಾಗಿ ಮಾಡುವ ಕುರಿತು ಶೀಘ್ರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಸಂಸದೀಯ ಕಾರ್ಯವಿಧಾನ ಕುರಿತು ಲೋಕಸಭಾಧ್ಯಕ್ಷ ಓಂ ಬಿರ್ಲಾರವರು ದೇಶದ ಎಲ್ಲ ರಾಜ್ಯಗಳ ವಿಧಾನ ಮಂಡಲಗಳ ಸಭಾಪತಿಗಳು ಹಾಗೂ ಸಭಾಧ್ಯಕ್ಷರೊಂದಿಗೆ ಮಂಗಳವಾರ ನಡೆಸಿದ ವರ್ಚುವಲ್ ಸಂವಾದದಲ್ಲಿ ಬಸವರಾಜ ಹೊರಟ್ಟಿ ಮಾತನಾಡಿದರು.

ರಾಜ್ಯ ವಿಧಾನ ಪರಷತ್ತನ್ನು ಮಾದರಿ ವಿಧಾನ ಪರಿಷತ್ತನ್ನಾಗಿ ಮಾಡುವ ಸಂಕಲ್ಪದೊಂದಿಗೆ ಹಲವು ವಿನೂತನ ಕ್ರಮ ಕೈಗೊಳ್ಳಲಾಗುತ್ತಿದೆ ‘ಇ-ವಿಧಾನ’ ಕಾರ್ಯಕ್ರಮದಡಿ ವಿಧಾನ ಪರಿಷತ್ತನ್ನು ಕಾಗದ ರಹಿತವನ್ನಾಗಿ ಮಾಡುವ ನಿಟ್ಟಿನಲ್ಲಿ ಈಗಾಗಲೇ ಕ್ರಮ ಜರುಗಿಸಲಾಗುತ್ತಿದೆ. ಸದನದ ಕಲಾಪ, ಪ್ರಶ್ನೋತ್ತರ ಕಾರ್ಯಚಟುವಟಿಕೆಗಳನ್ನು ಡಿಜಿಟಲೀಕರಣಗೊಳಿಸಲಾಗುತ್ತಿದೆ ಎಂದು ಅವರು ಹೇಳಿದರು.

ಕಳೆದ ವಿಧಾನ ಮಂಡಲದ ಬಜೆಟ್ ಅಧಿವೇಶನದಿಂದಲೇ ವಿಧಾನ ಪರಿಷತ್ತಿನ ಕಾರ್ಯಕಲಾಪಗಳನ್ನು ರಾಜ್ಯಸಭೆಯ ಮಾದರಿಯಲ್ಲಿ ಮಾಡಲಾಗುತ್ತಿದ್ದು ನಿಗದಿತ ವೇಳೆ ಹಾಗೂ ಅವಧಿಯಲ್ಲಿಯೆ ಪ್ರಶ್ನೋತ್ತರ, ಶೂನ್ಯ ವೇಳೆ ಸೇರಿದಂತೆ ವಿವಿಧ ಕಾರ್ಯಕಲಾಪಗಳನ್ನು ನಡೆಸುವ ಮೂಲಕ ದೇಶದಲ್ಲಿಯೆ ಮಾದರಿಯಾಗಿದೆ ಎಂದು ಅವರು ಹೇಳಿದರು.

ಕೋವಿಡ್ ಸಂದರ್ಭದಲ್ಲಿಯೂ ಸರಕಾರದ ಸೂಕ್ತ ನಿರ್ದೇಶನಗಳನ್ನು ಪಾಲಿಸಿ ಯಶಸ್ವಿಯಾಗಿ ಸದನದ ಕಲಾಪಗಳನ್ನು ನಡೆಸಲಾಗಿದೆ. ಕೋವಿಡ್ ಕುರಿತು ನಾಗರಿಕರಲ್ಲಿ ಜನಜಾಗೃತಿ ಹಾಗೂ ಮುಂಜಾಗ್ರತೆ ವಹಿಸುವಲ್ಲಿ ವಿಧಾನ ಪರಿಷತ್ ಸದಸ್ಯರ ಪಾತ್ರ ಅನುಕರಣೀಯವಾಗಿದೆ ಎಂದು ಇದೇ ಸಂದರ್ಭದಲ್ಲಿ ಬಸವರಾಜ ಹೊರಟ್ಟಿ ಸಭೆಗೆ ತಿಳಿಸಿದರು.

ಲೋಕಸಭಾಧ್ಯಕ್ಷ ಓಂ ಬಿರ್ಲಾ ಮಾತನಾಡಿ, ಕಳೆದ ಎರಡು ವರ್ಷಗಳ ಅವಧಿಯಲ್ಲಿ ಲೋಕ ಸಭಾಧ್ಯಕ್ಷರಾಗಿ ತಾವು ಸದನದ ಕಲಾಪ ನಡೆಸಿದ ರೀತಿ, ಹಾಗೂ ಅನುಭವಗಳನ್ನು ಹಂಚಿಕೊಂಡರು.

ಸಭೆಯಲ್ಲಿ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ದೇಶದ ಎಲ್ಲ ರಾಜ್ಯಗಳ ವಿಧಾನ ಸಭಾಧ್ಯಕ್ಷರು ಹಾಗೂ ವಿಧಾನ ಪರಿಷತ್ತಿನ ಸಭಾಪತಿಗಳು ಪಾಲ್ಗೊಂಡು ವಿಚಾರ ಮಂಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X