ಜನರು ಬದಲಾವಣೆ ಬಯಸಿದ್ದಾರೆ,ಉತ್ತರಪ್ರದೇಶದಲ್ಲಿ ಬಿಜೆಪಿ ಸೋಲುತ್ತದೆ: ಅಖಿಲೇಶ್ ಯಾದವ್

ಹೊಸದಿಲ್ಲಿ: ಜನರು ಬದಲಾವಣೆ ಬಯಸುತ್ತಿರುವುದರಿಂದ ಮುಂದಿನ ವರ್ಷದ ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಸೋಲುತ್ತದೆ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಹೇಳಿದ್ದಾರೆ.
ಎನ್ ಡಿ ಟಿವಿಗೆ ನೀಡಿದ ವಿಶೇಷ ಸಂದರ್ಶನವೊಂದರಲ್ಲಿ ಮಾತನಾಡಿದ ಯಾದವ್, ತಮ್ಮ ಪಕ್ಷವು ಪ್ರಮುಖ ಪಕ್ಷಗಳ ಬದಲು ಸಮಾನ ಮನಸ್ಕ ಸಣ್ಣ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆಯಲ್ಲಿ ಸ್ಪರ್ಧಿಸುತ್ತದೆ ಎಂದು ಹೇಳಿದರು.
"ದೊಡ್ಡ ಪಕ್ಷಗಳೊಂದಿಗಿನ ನನ್ನ ಅನುಭವವು ಉತ್ತಮವಾಗಿಲ್ಲ. ನಾನು ಆ ಪಕ್ಷಗಳೊಂದಿಗೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ" ಎಂದು ಮಾಯಾವತಿಯ ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಹಾಗೂ ಕಾಂಗ್ರೆಸ್ ಪಕ್ಷದ ಹೆಸರೆತ್ತದೆ ಅಖಿಲೇಶ್ ಯಾದವ್ ಹೇಳಿದ್ದಾರೆ.
Next Story