Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹೋಟೆಲ್ ಉದ್ಯಮ ನೆಲಕಚ್ಚದಂತೆ ಅಗತ್ಯ...

ಹೋಟೆಲ್ ಉದ್ಯಮ ನೆಲಕಚ್ಚದಂತೆ ಅಗತ್ಯ ನೆರವು ನೀಡಲು ಸಿದ್ದರಾಮಯ್ಯ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ23 Jun 2021 1:17 PM IST
share
ಹೋಟೆಲ್ ಉದ್ಯಮ ನೆಲಕಚ್ಚದಂತೆ ಅಗತ್ಯ ನೆರವು ನೀಡಲು ಸಿದ್ದರಾಮಯ್ಯ ಆಗ್ರಹ

ಬೆಂಗಳೂರು, ಜೂ.23: ಹೋಟೆಲ್-ರೆಸಾರ್ಟ್-ವಸತಿಗೃಹಗಳ ಕೊರೋನ ಕಾಲದ ವಿದ್ಯುತ್, ನೀರಿನ ಶುಲ್ಕವನ್ನು ಮನ್ನಾ ಮಾಡುವುದು ಸೇರಿದಂತೆ ಈ ಉದ್ಯಮ ನೆಲಕಚ್ಚದಂತೆ ಅಗತ್ಯ ನೆರವನ್ನು ನೀಡಬೇಕೆಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಸಂಬಂಧ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಿಗೆ ಬರೆದಿರುವ ಪತ್ರದ ಮುಖ್ಯಾಂಶಗಳು ಹೀಗಿದೆ:

ಕರ್ನಾಟಕ ಸರ್ಕಾರಕ್ಕೆ ಹೋಟೆಲ್ ಕಾರ್ಮಿಕರು, ದೀಪಾಲಂಕಾರದ ಕೆಲಸಗಾರರು, ಫೋಟೋಗ್ರಾಫರ್ ಗಳು ಸೇರಿ ಇನ್ನಿತರ ನಾನಾ ಜನ ಸಮುದಾಯಗಳು ಪಡುತ್ತಿರುವ ಕಷ್ಟ ಕಣ್ಣಿಗೆ ಬಿದ್ದಿಲ್ಲ. ಬೆಂಗಳೂರು ಸೇರಿ ರಾಜ್ಯದ ನಾನಾ ಭಾಗಗಳಲ್ಲಿ ಸಾವಿರಾರು ಹೋಟೆಲ್‍ಗಳು ಬಂದ್ ಆಗಿ ಮಾರಾಟಕ್ಕಿವೆ. ಹೋಟೆಲ್, ಕ್ಯಾಂಟೀನ್ ಕಟ್ಟಡಗಳ ಬಾಡಿಗೆ ಕಟ್ಟಲಾಗದೆ ಮಾಲಕರು  ಪರಿತಪಿಸುತ್ತಿದ್ದಾರೆ. ಬ್ಯಾಂಕ್ ಸಾಲದ ಬಡ್ಡಿ ಬೆಳೆಯುತ್ತಲೆ ಇರುವ ಕಾರಣ ಸಣ್ಣ ಮತ್ತು ಮಧ್ಯಮ ಹೋಟೆಲ್‍ಗಳ ಮಾಲಕರು ಮಾತ್ರವಲ್ಲ ದೊಡ್ಡ ಹೋಟೆಲ್‍ಗಳ ಮಾಲಕರೂ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೊಂದು ಕಡೆ ಹೋಟೆಲ್ ಕಾರ್ಮಿಕರು ಎರಡು ಹೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಇದೆ. ಬೆಂಗಳೂರು ನಗರ ಮತ್ತು ಅಕ್ಕ ಪಕ್ಕದ ನಾಲ್ಕೈದು ಜಿಲ್ಲೆಗಳಲ್ಲೇ 20 ಸಾವಿರಕ್ಕೂ ಅಧಿಕ ಮಂದಿ ಹೋಟೆಲ್ ಕಾರ್ಮಿಕರು ಕೆಲಸ ಕಳೆದುಕೊಂಡಿದ್ದಾರೆ. ಇವರ ಕುಟುಂಬ ನಿರ್ವಹಣೆ ಮಾಡಲಾಗದೆ ಸಂಕಷ್ಟದಲ್ಲಿದ್ದಾರೆ.

ಈ ಕಾರ್ಮಿಕರ ಮಕ್ಕಳು ಶಿಕ್ಷಣ ತೊರೆಯಬೇಕಾದ ಸ್ಥಿತಿ ಬಂದೊದಗಿದೆ. ಇಡಿ ಸೇವಾ ವಲಯವೆ ಸ್ಥಗಿತಗೊಂಡಿರುವುದರಿಂದ ಪ್ರವಾಸೋದ್ಯಮವನ್ನೆ ನೆಚ್ಚಿಕೊಂಡಿದ್ದ ವಸತಿ ಗೃಹಗಳ ಮಾಲಕರು ಮತ್ತು ಕೆಲಸಗಾರರೂ ದುಡಿಮೆ ಇಲ್ಲದೆ ಕಂಗಾಲಾಗಿದ್ದಾರೆ.

ಶುಭ ಕಾರ್ಯಗಳು ನಡೆಯದಿರುವುದರಿಂದ, ಧಾರ್ಮಿಕ ಕಾರ್ಯಗಳು, ಹಬ್ಬಗಳ ಆಚರಣೆಗೂ ಅವಕಾಶ ಇಲ್ಲವಾಗಿದ್ದರಿಂದ ಫೋಟೋಗ್ರಾಫರ್ ಗಳು,  ಡೆಕೊರೇಟರ್ ಗಳು, ದೀಪದ ಅಲಂಕಾರ ಮಾಡುವ ಕೆಲಸಗಾರರು ಸೇರಿ ಪ್ರತಿಯೊಂದೂ ದುಡಿಯುವ ವರ್ಗದ ಸಹಸ್ರ ಸಹಸ್ರ ಕುಟುಂಬಗಳು ಕಣ್ಣೀರಲ್ಲಿ ಕೈತೊಳೆಯುತ್ತಿವೆ. ಇವರೆಲ್ಲರ ಸಂಕಷ್ಟ ಮತ್ತು ನೋವುಗಳು ಸರ್ಕಾರಕ್ಕೆ ಕಾಣಬೇಕಿತ್ತು. ಸರ್ಕಾರ ಕುರುಡಾಗಿರುವುದರಿಂದ ಈ ಶ್ರಮಿಕ ವರ್ಗಗಳೆ ಸ್ವತಃ ಸರ್ಕಾರವನ್ನು ಇನ್ನಿಲ್ಲದಂತೆ ಒತ್ತಾಯಿಸುತ್ತಿದ್ದರೂ ಅವರಿಗೆ ಸೂಕ್ತವಾದ ನೆರವು ಸಿಕ್ಕಿಲ್ಲ.

ಕೊರೋನ ಮೊದಲ ಅಲೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರ ಘೋಷಿಸಿದ ಪ್ಯಾಕೇಜ್‍ನಲ್ಲಿ ಅರ್ಧದಷ್ಟು ಕೂಡ ತಲುಪಬೇಕಾದವರಿಗೆ ತಲುಪಲಿಲ್ಲ. ಕಾರ್ಮಿಕ ನಿಧಿ ಹೊರತುಪಡಿಸಿ ಕೇವಲ ರೂ.800-900 ಕೋಟಿಯಷ್ಟು ನೆಪ ಮಾತ್ರಕ್ಕೆ ಹಂಚಿಕೆಯಾಗಿದೆ. ಎರಡನೇ ಅಲೆ ಸಂದರ್ಭದಲ್ಲೂ ಸರ್ಕಾರ ಘೋಷಿಸಿರುವ 2 ಸಾವಿರ ಕೋಟಿ ರೂಗಳ   ಪ್ಯಾಕೇಜು ರಾಜ್ಯದ ಜನರಿಗೆ ಮಾಡಿರುವ ಅವಮಾನ ಎಂದು ಮತ್ತೊಮ್ಮೆ ಹೇಳಬೇಕಾಗಿದೆ. ಈ ರೂ.2 ಸಾವಿರ ಕೋಟಿಯಲ್ಲಿ ಕಟ್ಟಡ ಕಾರ್ಮಿಕರಿಗೆ ಘೋಷಿಸಿರುವ ಅವರದೆ ಹಣದ ಪ್ಯಾಕೇಜು ಬಿಟ್ಟರೆ ಉಳಿಯುವುದು ಕೇವಲ ರೂ.1500 ಕೋಟಿ ರೂಗಳು ಮಾತ್ರ.  ಅತಿ ಕಡಿಮೆ ಪ್ಯಾಕೇಜು ಘೋಷಿಸಿದ ರಾಜ್ಯಗಳ ಸಾಲಿನಲ್ಲಿ ಕರ್ನಾಟಕ ಮೊದಲಿಗೆ ನಿಂತಿದೆ ಎಂಬ ಆರೋಪದಿಂದ ಹೊರಬರಬೇಕಾದರೆ ರಾಜ್ಯ ಸರ್ಕಾರ ಈಗಲಾದರೂ ಉತ್ತಮ ಪ್ಯಾಕೇಜನ್ನು ಘೋಷಿಸಿ ಅಕ್ಕಪಕ್ಕದ ರಾಜ್ಯಗಳ ಮುಂದೆ ಮರ್ಯಾದೆ ಉಳಿಸಿಕೊಳ್ಳಬೇಕಿದೆ.

ಆದ್ದರಿಂದ ಎಲ್ಲ ಬಿಪಿಎಲ್ ಕುಟುಂಬಗಳಿಗೆ ತಲಾ 10,000 ರೂ.ಗಳನ್ನು ಘೋಷಿಸಬೇಕೆಂದು ಮತ್ತೊಮ್ಮೆ ಒತ್ತಾಯಿಸುತ್ತಿದ್ದೇನೆ. ಜೊತೆಗೆ ಈ ಕೆಳಕಂಡ ವಲಯಗಳ ಜನರೂ ಸಹ ಉಳಿದವರಂತೆ ತೀವ್ರ ಬಿಕ್ಕಟ್ಟಿನಲ್ಲಿದ್ದಾರೆ. ಆದ್ದರಿಂದ ಹೋಟೆಲ್, ವಸತಿ ಗೃಹ, ಫೋಟೋಗ್ರಾಫರ್ ಗಳು, ಅಲಂಕಾರಿಕ ವೃತ್ತಿಯಲ್ಲಿ ತೊಡಗಿರುವವರಿಗೆ ತಕ್ಷಣ ಸೂಕ್ತ ಪ್ಯಾಕೇಜ್ ಘೋಷಣೆ ಮಾಡಬೇಕು.

ಹೋಟೆಲ್, ಕ್ಯಾಂಟೀನ್ ಮಾಲಕರ ಬ್ಯಾಂಕ್ ಸಾಲ ವಸೂಲಾತಿಯನ್ನು ಮುಂದೂಡಬೇಕು. ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡಬೇಕು. ಜೊತೆಗೆ ಎಲ್ಲಾ ಉತ್ಪಾದಕ ಮತ್ತು ಸೇವಾ ವಲಯಗಳ ಜನರು ಮಾಡಿರುವ ಸಾಲದ ಮೇಲಿನ ಬಡ್ಡಿಯನ್ನೂ ಮನ್ನಾ ಮಾಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X