ಲಸಿಕೆ ತೆಗೆದುಕೊಳ್ಳದಿದ್ದರೆ, ವೇತನ ನೀಡುವುದಿಲ್ಲ:ಸರಕಾರಿ ನೌಕರರಿಗೆ ಉಜ್ಜೈನಿ ಜಿಲ್ಲಾಧಿಕಾರಿ ಎಚ್ಚರಿಕೆ

ಭೋಪಾಲ್: ಕೋವಿಡ್ -19 ವಿರುದ್ಧ ಶೇಕಡಾ 100 ರಷ್ಟು ವ್ಯಾಕ್ಸಿನೇಷನ್ ಗುರಿ ಸಾಧಿಸುವ ಪ್ರಯತ್ನದಲ್ಲಿರುವ ಮಧ್ಯಪ್ರದೇಶದ ಉಜ್ಜೈನಿ ಜಿಲ್ಲಾಡಳಿತವು ಸರಕಾರಿ ನೌಕರರು ಕೊರೋನ ವಿರುದ್ಧ ಚುಚ್ಚುಮದ್ದನ್ನು ತೆಗೆದುಕೊಳ್ಳದಿದ್ದರೆ ಮುಂದಿನ ತಿಂಗಳಿನಿಂದ ಅವರಿಗೆ ಸಂಬಳ ನೀಡುವುದಿಲ್ಲ ಎಂದು ಆದೇಶವೊಂದನ್ನು ಹೊರಡಿಸಿದೆ.
ಈ ಕುರಿತು ಜಿಲ್ಲಾಧಿಕಾರಿ ಆಶಿಶ್ ಸಿಂಗ್ ಮಂಗಳವಾರ ಆದೇಶ ಹೊರಡಿಸಿದ್ದಾರೆ.
ಜುಲೈ 31 ರವರೆಗೆ ಲಸಿಕೆ ಪಡೆಯಲು ವಿಫಲವಾದರೆ ಸರಕಾರಿ ನೌಕರರ ವೇತನವನ್ನು ವಿತರಿಸಲಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ನೀಡಿದ ನಂತರವೇ ನೌಕರರ ಜುಲೈ ವೇತನವನ್ನು ವಿತರಿಸಲಾಗುವುದು ಎಂದು ಜಿಲ್ಲೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Next Story





