Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೌರಕಾರ್ಮಿಕರ ವಿರುದ್ಧ ಉಡುಪಿ...

ಪೌರಕಾರ್ಮಿಕರ ವಿರುದ್ಧ ಉಡುಪಿ ನಗರಸಭೆಯಿಂದ ಆರೋಪ : ಕೆಲಸ ನಿರ್ವಹಿಸದ ಬಗ್ಗೆ ದೂರು

ಸಾಮಾನ್ಯ ಸಭೆಯಲ್ಲಿ ಕ್ರಮಕ್ಕೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ23 Jun 2021 5:52 PM IST
share
ಪೌರಕಾರ್ಮಿಕರ ವಿರುದ್ಧ ಉಡುಪಿ ನಗರಸಭೆಯಿಂದ ಆರೋಪ : ಕೆಲಸ ನಿರ್ವಹಿಸದ ಬಗ್ಗೆ ದೂರು

ಉಡುಪಿ, ಜೂ.23: ನಗರದ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಪೌರಕಾರ್ಮಿಕರ ವಿರುದ್ಧ ಇಂದು ನಡೆದ ಉಡುಪಿ ನಗರಸಭೆ ಸಾಮಾನ್ಯ ಸಭೆಯಲ್ಲಿ ಶಾಸಕರು ಸೇರಿದಂತೆ ಸರ್ವ ಸದಸ್ಯರಿಂದ ಆರೋಪಗಳ ಸುರಿ ಮಳೆಯೇ ಕೇಳಿಬಂತು.

ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪೌರಕಾರ್ಮಿಕರ ಉಪಹಾರದ ಕುರಿತ ಚರ್ಚೆ ವೇಳೆ ವಿಷಯ ಪ್ರಸ್ತಾಪಿಸಿದ ಸದಸ್ಯ ಕೃಷ್ಣರಾವ್ ಕೊಡಂಚ, ನಗರ ವ್ಯಾಪ್ತಿಯಲ್ಲಿನ ಪೌರ ಕಾರ್ಮಿಕರು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಊಟ ತಿಂಡಿಗೆ ತೆರಳಿದವರು ಕಾಲಹರಣ ಮಾಡಿ ವಿಳಂಬವಾಗಿ ಕೆಲಸ ಮಾಡುತ್ತಿದ್ದಾರೆ. ಕೆಲಸದ ಅವಧಿ ಯಲ್ಲಿ ಇವರ ಮೊಬೈಲ್ ಬಳಕೆಗೆ ಕಡಿವಾಣ ಹಾಕಿ, ಅವುಗಳನ್ನು ತೆಗೆದು ಇರಿಸಿಕೊಳ್ಳಬೇಕು ಎಂದು ತಿಳಿಸಿದರು.

182 ಮಂದಿ ಪೌರಕಾರ್ಮಿಕರ ಪೈಕಿ ದಿನಕ್ಕೆ 20-25 ಮಂದಿ ರಜೆ ಹಾಕು ತ್ತಿದ್ದು, ಇದರಿಂದ ಕೆಲಸ ಕಾರ್ಯಗಳು ವಿಳಂಬ ಆಗುತ್ತಿದೆ. ಯಾವುದೇ ಮಾಹಿತಿ ನೀಡದೆ ರಜೆ ಹಾಕುವ ಪೌರಕಾರ್ಮಿಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಸದಸ್ಯರು ದೂರಿದರು. ಆಡಳಿತ ಪಕ್ಷದ ಸದಸ್ಯರ ಆರೋಪಗಳಿಗೆ ವಿರೋಧ ಪಕ್ಷದ ಸದಸ್ಯರುಗಳು ಹಾಗೂ ಶಾಸಕ ಕೆ.ರಘುಪತಿ ಭಟ್ ಕೂಡ ಧ್ವನಿಗೂಡಿಸಿದರು.

ಧೀರ್ಘಕಾಲ ರಜೆ ಹಾಕಿದ ಪೌರಕಾರ್ಮಿಕರಿಗೆ ನೋಟೀಸ್ ಜಾರಿ ಮಾಡ ಲಾಗುವುದು ಎಂದು ಆರೋಗ್ಯ ನಿರೀಕ್ಷಕ ಕರುಣಾಕರ್ ಸಭೆಗೆ ತಿಳಿಸಿದರು. ಪೌರಕಾರ್ಮಿಕರ ಹೆಸರಿನಲ್ಲಿ ನೇಮಕ ಆಗಿರುವವರ ಪೈಕಿ ಕೆಲವರು ನಗರಸಭೆ ಕಚೇರಿ ಒಳಗೆ ಕೆಲಸ ನಿರ್ವಹಿಸುತ್ತಿದ್ದಾರೆ. ಹೊರಗಡೆ ಕೆಲಸ ಮಾಡಬೇಕಾದ ಪೌರಕಾರ್ಮಿಕರಿಗೆ ಕಚೇರಿ ಒಳಗೆ ಏನು ಕೆಲಸ ಎಂದು ಸದಸ್ಯರು ಪ್ರಶ್ನಿಸಿದರು. ಸದ್ಯ ಆರು ಮಂದಿ ಪೌರಕಾರ್ಮಿಕರು ಮಾತ್ರ ಕಚೇರಿಯಲ್ಲಿ ಕೆಲಸ ನಿರ್ವ ಹಿಸುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಉಪಹಾರ ಮೊತ್ತ ಏರಿಕೆ

ನಗರಸಭೆಯಲ್ಲಿ ಖಾಯಂ ಮತ್ತು ನೇರ ಪಾವತಿ ಯಡಿ 182 ಮಂದಿ ಪೌರಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದು, ಇವರಿಗೆ ದಿನಕ್ಕೆ 20 ರೂ. ಮೊತ್ತದ ಬೆಳಗಿನ ಉಪಹಾರವನ್ನು ಒದಗಿಸಲಾಗುತ್ತಿದೆ. ಇದರ ಟೆಂಡರ್ ಮುಂದುವರೆಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು.

ಪೌರಕಾರ್ಮಿಕರಿಗೆ ಈಗ ನೀಡುವ ಉಪಹಾರದ ಮೊತ್ತ ಏನು ಸಾಲದು. ಆದುದರಿಂದ ಅದನ್ನು 40ರೂ.ಗೆ ಹೆಚ್ಚಿಸಬೇಕೆಂದು ಸದಸ್ಯರು ಒತ್ತಾಯಿಸಿದರು. ಸರಕಾರದ ಒಪ್ಪಿಗೆ ಇಲ್ಲದೆ ಈ ಬಗ್ಗೆ ನಿರ್ಣಯ ಮಾಡಲು ಆಗುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿದರು. ಆ ಹಿನ್ನೆಲೆಯಲ್ಲಿ ಶಾಸಕರ ಸೂಚನೆಯಂತೆ ಸಭೆಯಲ್ಲಿ ನಿರ್ಣಯ ಮಾಡಿ, ರಾಜ್ಯ ಸರಕಾರಕ್ಕೆ ಪ್ರಾಸ್ತಾವ ಕಳುಹಿಸುವ ಬಗ್ಗೆ ತೀರ್ಮಾನಿಸಲಾಯಿತು.

ಮರಗಳ ತೆರವಿಗೆ ಆಗ್ರಹ

ಪದೇ ಪದೇ ವಿದ್ಯುತ್ ವ್ಯತ್ಯಯಕ್ಕೆ ಕಾರಣವಾಗುತ್ತಿರುವ ಅಪಾಯಕಾರಿ ಮರ ಗಳನ್ನು ತೆರವುಗೊಳಿಸುವಂತೆ ಸಭೆಯಲ್ಲಿ ಸರ್ವ ಸದಸ್ಯರು ಮೆಸ್ಕಾಂ ಅಧಿಕಾರಿ ಗಳನ್ನು ಒತ್ತಾಯಿಸಿದರು.

ಮಳೆಗಾಲದಲ್ಲಿ ದಾರಿದೀಪದ ಸಮಸ್ಯೆ, ಮರಗಳ ಕೊಂಬೆ ತೆರವು, ಅಪಾಯ ಕಾರಿ ಮರಗಳ ತೆರವು ಸೇರಿದಂತೆ ಮೆಸ್ಕಾಂಗೆ ಸಂಬಂಧಿಸಿದ ಹಲವು ಪ್ರಶ್ನೆಗಳನ್ನು ಸದಸ್ಯರು ಸಭೆಯಲ್ಲಿ ಕೇಳಿದರು. ತಂತಿಗಳಿಗೆ ಅಡ್ಡವಾಗಿರುವ ಮರಗಳ ಕೊಂಬೆ ಗಳನ್ನು ತೆರವುಗೊಳಿಸಿದ ಬಳಿಕ ಮೆಸ್ಕಾಂನವರು ಅಲ್ಲೇ ಬಿಟ್ಟು ಹೋಗುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಲಾಯಿತು.

ಇದಕ್ಕೆ ಉತ್ತರಿಸಿದ ಮೆಸ್ಕಾಂ ಅಧಿಕಾರಿಗಳು, ತೆರವುಗೊಳಿಸಿದ ಕೊಂಬೆಗಳನ್ನು ಸಾಗಾಟ ಮಾಡಲು ನಮ್ಮಲ್ಲಿ ಯಾವುದೇ ವ್ಯವಸ್ಥೆ ಇಲ್ಲ. ಅದೇ ರೀತಿ ಸಿಬ್ಬಂದಿ ಗಳ ಕೊರತೆ ಕೂಡ ನಮಗೆ ದೊಡ್ಡ ಸಮಸ್ಯೆಯಾಗಿದೆ. ಈ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದರು.

ಮರಗಳ ರೆಂಬೆಕೊಂಬೆಗಳನ್ನು ಕಡಿಯಲು ಯಾವುದೇ ಅನುಮತಿ ಬೇಕಾಗಿಲ್ಲ. ಆದರೆ ಮರ ಕಡಿಯಲು ಡಿಎಫ್‌ಓ ಅವರ ಅನುಮತಿ ಅಗತ್ಯವಾಗಿ ಬೇಕು ಎಂದು ವಲಯ ಅರಣ್ಯಾಧಿಕಾರಿ ತಿಳಿಸಿದರು.

ಸದಸ್ಯನಿಂದ ಪರಿಸರ ಪಾಠ

ನಗರದಲ್ಲಿ ಬೀದಿನಾಯಿಗಳ ಸಂಖ್ಯೆ ಹೆಚ್ಚಳವಾಗಿದ್ದು, ಇದರ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಸದಸ್ಯರು ಒತ್ತಾಯಿಸಿದರು. ಲಾಕ್‌ಡೌನ್ ಸಂದರ್ಭ ದಲ್ಲಿ ಕೆಲವರು ನಾಯಿಗಳಿಗೆ ಆಹಾರ ನೀಡಿ ಬೆಳೆಸುತ್ತಿರುವ ಬಗ್ಗೆಯೂ ಆಕ್ಷೇಪ ಗಳು ಕೇಳಿಬಂತು.

ಸಭೆಯಲ್ಲಿ ಮರಗಳ ತೆರವು ಹಾಗೂ ಬೀದಿನಾಯಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸುತ್ತಿದ್ದ ಸದಸ್ಯರುಗಳಿಗೆ ನಗರಸಭಾ ಸದಸ್ಯ ಯೋಗೀಶ್ ಸಾಲ್ಯಾನ್ ಪರಿಸರ ಪಾಠ ಮಾಡಿದರು. ಮರಗಳು, ನಾಯಿಗಳಿಗೆ ಮತದಾನ ಮಾಡುವ ಹಕ್ಕು ಇಲ್ಲ ಎಂಬ ಕಾರಣಕ್ಕೆ ನಾವೆಲ್ಲ ಅವುಗಳ ವಿರುದ್ಧ ಮಾತನಾಡುತಿದ್ದೇವೆ. ವಿದೇಶಗಳಲ್ಲಿ ಮರಗಳನ್ನು ಉಳಿಸಿಯೇ ರಸ್ತೆಗಳನ್ನು ಮಾಡುತ್ತಿದ್ದಾರೆ. ಆದರೆ ನಾವು ಮರಗಳ ತೆರವಿಗೆ ಒತ್ತಾಯಿಸುತ್ತಿದ್ದೇವೆ. ನಾವು ನಾಯಿಗಳ ಬಗ್ಗೆ ಪ್ರೀತಿ ಹಾಗೂ ಮರಗಳನ್ನು ಉಳಿಸುವ ಕಾರ್ಯ ಮಾಡಬೇಕು ಎಂದರು.

ಈ ಹಿಂದೆ ಸಾಕಷ್ಟು ವಿವಾದಕ್ಕೆ ಒಳಗಾಗಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆರೋಗ್ಯ ವಿಮೆ ಬಗ್ಗೆ ವಿಷಯ ಪ್ರಸ್ತಾಪಿಸಿದ ಅಧ್ಯಕ್ಷರು, ಕಳೆದ ಬಾರಿ ಸತ್ತವರ ಹೆಸರಿನಲ್ಲೂ ಆರೋಗ್ಯ ವಿಮೆ ಮಾಡಿರುವ ಆರೋಪದ ಹಿನ್ನೆಲೆ ಯಲ್ಲಿ ಈ ಬಾರಿ ಹೊಸದಾಗಿ ಪಟ್ಟಿ ತಯಾರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ನಗರಸಭೆ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್, ಪೌರಾಯುಕ್ತ ಡಾ. ಉದಯ ಕುಮಾರ್ ಉಪಸ್ಥಿತರಿದ್ದರು.

ಕೊರೋನಾ ಮಧ್ಯೆ ತರಾತುರಿ ಸಭೆ!

ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇಲ್ಲದಿದ್ದರೂ ಸರಕಾರ ಉಡುಪಿ ಜಿಲ್ಲೆ ಯಲ್ಲಿ ಜೂ.22ರಿಂದ ಅನ್‌ಲಾಕ್ ಘೋಷಣೆ ಮಾಡಿದೆ. ಈ ಮಧ್ಯೆ ಮರು ದಿನವೇ(ಇಂದು) ನಗರಸಭೆಯವರು ತರಾತುರಿಯಲ್ಲಿ ಸಾಮಾನ್ಯ ಸಭೆಯನ್ನು ಆಯೋಜಿಸುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ.

ಹವಾನಿಯಂತ್ರಿತ ಹಾಲ್‌ನಲ್ಲಿ ಸರಿಯಾಗಿ ಮಾಸ್ಕ್ ಧರಿಸದೆ ಸುರಕ್ಷಿತ ಅಂತರ ಕಾಪಾಡದೆ ಸುಮಾರು 80-90 ಮಂದಿ ಸಭೆಯಲ್ಲಿ ಪಾಲ್ಗೊಂಡಿದ್ದರು. ಅನ್ ಲಾಕ್ ಘೋಷಣೆಯಾದ ಮರುದಿನವೇ ಸಭೆ ಕರೆಯುವ ತರಾತುರಿ ಏನಿತ್ತು ಎಂಬುದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X