Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಎಂ ಆಗುವ ಆತುರ ಇಲ್ಲ, ಪಕ್ಷ...

ಸಿಎಂ ಆಗುವ ಆತುರ ಇಲ್ಲ, ಪಕ್ಷ ಅಧಿಕಾರಕ್ಕೆ ತರುವುದಷ್ಟೇ ನನ್ನ ಗುರಿ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ23 Jun 2021 7:08 PM IST
share
ಸಿಎಂ ಆಗುವ ಆತುರ ಇಲ್ಲ, ಪಕ್ಷ ಅಧಿಕಾರಕ್ಕೆ ತರುವುದಷ್ಟೇ ನನ್ನ ಗುರಿ: ಡಿ.ಕೆ.ಶಿವಕುಮಾರ್

ಬೆಂಗಳೂರು, ಜೂ.23: ‘ಸಿಎಂ ಆಗುವ ಆತುರದಲ್ಲಿ ನಾನಿಲ್ಲ. ನನ್ನ ಗುರಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದಷ್ಟೇ. ವಿಧಾನಸೌಧದಲ್ಲಿ ಅಧಿಕಾರ ಹಿಡಿಯಲು ನನ್ನನ್ನು ಚಪ್ಪಡಿ ಕಲ್ಲಿನ ಮೆಟ್ಟಿಲು ಮಾಡಿಕೊಳ್ಳಿ ಎಂದು ನಾನೇ ಹೇಳಿದ್ದೇನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬುಧವಾರ ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್, ಬಿಜೆಪಿ ಸಮಸ್ಯೆಗೂ, ಕಾಂಗ್ರೆಸ್ ವಿಚಾರಕ್ಕೂ ಬಹಳಷ್ಟು ವ್ಯತ್ಯಾಸವಿದೆ. ಈಗ ನಮ್ಮಲ್ಲಿ ಯಾವ ಕುರ್ಚಿಯೂ ಖಾಲಿ ಇಲ್ಲ. ಈಗ ನಮ್ಮ ರೇಸ್ ಏನಿದ್ದರೂ ಬಿಜೆಪಿಯನ್ನು ಅಧಿಕಾರದಿಂದ ಇಳಿಸಿ, ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದಾಗಿದೆ. ಅದಕ್ಕೆ ನಾವು ಸಮಯ ನೀಡಬೇಕು. ಅದನ್ನು ಬಿಟ್ಟು ಬೇರೆ ವಿಚಾರಕ್ಕೆ ಸಮಯ ನೀಡಿದರೆ ಅದು ವ್ಯರ್ಥವಾಗುತ್ತದೆ ಎಂದರು.

ನಾವೆಲ್ಲರೂ ಬಿಜೆಪಿ ಮಣಿಸಲು ಶ್ರಮಿಸೋಣ. ನಾವೆಲ್ಲ ಕಾರ್ಯಕರ್ತರು. ಜನ ರಾಜ್ಯದಲ್ಲಿ ಬದಲಾವಣೆ ತರಲು ಬಯಸುತ್ತಿದ್ದಾರೆ. ಆ ನಿಟ್ಟಿನಲ್ಲಿ ಕೆಲಸ ಮಾಡೋಣ. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಚುನಾವಣೆಗೆ ಹೋದರೆ ಮಾತ್ರ ಗೆಲುವು ಸಾಧ್ಯ ಎಂದು ಶಾಸಕ ಅಖಂಡ ಶ್ರೀನಿವಾಸಮೂರ್ತಿ ಹೇಳಿದ್ದಾರಲ್ಲ ಎಂಬ ಪ್ರಶ್ನೆಗೆ, ‘ಹೌದಾ? ಬಹಳ ಸಂತೋಷ’ ಎಂದು ಪ್ರತಿಕ್ರಿಯಿಸಿದರು.

ಡಿ.ಕೆ.ಶಿವಕುಮಾರ್ ಅವರಿಗೆ ವಯಸ್ಸಿದೆ, ಸಿದ್ದರಾಮಯ್ಯನವರು 2023ಕ್ಕೆ ಸಿಎಂ ಆಗಲಿ, ನಂತರ ಡಿ.ಕೆ. ಶಿವಕುಮಾರ್ ಆಗಲಿ ಎಂಬ ಶಾಸಕ ರಾಮಪ್ಪ ಅವರ ಹೇಳಿಕೆ ಬಗ್ಗೆ ಮಾಧ್ಯಮದವರು ಗಮನ ಸೆಳೆದಾಗ, ‘ಸಿಎಂ ಆಗಬೇಕೆಂಬ ಆತುರವಿದೆ ಎಂದು ನಾನು ಯಾವತ್ತಾದರೂ ಹೇಳಿದ್ದೀನಾ? ನನ್ನ ಗುರಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು, ವಿಧಾನಸೌಧದ ಮೂರನೇ ಮಹಡಿ ಏರಲು ನನ್ನನ್ನು ಮೆಟ್ಟಿಲಾಗಿ ಬಳಸಿಕೊಳ್ಳಿ ಅಂತಾ ನಾನು ಹೇಳಿದ್ದೇನೆ. ಯಾರ್ಯಾರು ಏನೇನು ಸಲಹೆ ಕೊಡುತ್ತಾರೋ, ಕೊಡಲಿ ಅದನ್ನು ಸ್ವೀಕರಿಸೋಣ’ ಎಂದು ಶಿವಕುಮಾರ್ ತಿಳಿಸಿದರು.

ಶಾಸಕರ ಇಂತಹ ಹೇಳಿಕೆಗಳಿಂದ ಗೊಂದಲ ಸೃಷ್ಟಿಯಾಗುವುದಿಲ್ಲವೇ ಎಂಬ ಪ್ರಶ್ನೆಗೆ, ‘ಈ ವಿಚಾರವಾಗಿ ನಮ್ಮ ಪಕ್ಷದ ಹೈಕಮಾಂಡ್ ಏನು ಹೇಳಬೇಕೋ ಅದನ್ನು ಹೇಳಿದೆ. ಶಾಸಕರು ಹೇಳಿಕೆ ನೀಡುತ್ತಿದ್ದಾರೆ ಅಂತಾ ನೀವು ಹೇಳಿದ್ದೀರಿ, ನಾನೂ ಕೆಲವು ನೋಡಿದ್ದೇನೆ. ಶಾಸಕರ ಹೇಳಿಕೆಗಳನ್ನು ಶಾಸಕಾಂಗ ಪಕ್ಷದ ನಾಯಕರು ನೋಡಿಕೊಳ್ಳುತ್ತಾರೆ. ಅವರು ನೋಡಿಕೊಳ್ಳದಿದ್ದರೆ, ಆ ಬಗ್ಗೆ ಗಮನ ಹರಿಸಲು ಕಾಂಗ್ರೆಸ್ ಪಕ್ಷ ಬದುಕಿದೆ’ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X