Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಧಿಕಾರಕ್ಕೆ ಜೋತು ಬಿದ್ದವರಿಂದ ಗೊಂದಲ:...

ಅಧಿಕಾರಕ್ಕೆ ಜೋತು ಬಿದ್ದವರಿಂದ ಗೊಂದಲ: ಸಂಸದ ಡಿ.ಕೆ.ಸುರೇಶ್

ವಾರ್ತಾಭಾರತಿವಾರ್ತಾಭಾರತಿ23 Jun 2021 7:12 PM IST
share
ಅಧಿಕಾರಕ್ಕೆ ಜೋತು ಬಿದ್ದವರಿಂದ ಗೊಂದಲ: ಸಂಸದ ಡಿ.ಕೆ.ಸುರೇಶ್

ಬೆಂಗಳೂರು, ಜೂ.23: ‘ನಿಜವಾದ ಕಾಂಗ್ರೆಸ್ಸಿಗರು, ಕಾಂಗ್ರೆಸ್ ನಾಯಕರು ಪಕ್ಷ ಸಂಘಟನೆಯತ್ತ ಗಮನಹರಿಸುತ್ತಾರೆ. ಅವರು ಪಕ್ಷದ ಶಿಸ್ತು ಕಲಿತಿರುತ್ತಾರೆ. ಆದರೆ ಅಧಿಕಾರಕ್ಕಾಗಿಯೆ ಪಕ್ಷಕ್ಕೆ ಬಂದಿರುವವರು, ಅಧಿಕಾರಕ್ಕೆ ಜೋತು ಬಿದ್ದಿರುವವರು ಹೀಗೆಲ್ಲಾ ಮಾತನಾಡಿ, ಗೊಂದಲ ಸೃಷ್ಟಿಸುತ್ತಾರೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ.ಸುರೇಶ್ ತಿಳಿಸಿದ್ದಾರೆ.

ಭವಿಷ್ಯದ ಮುಖ್ಯಮಂತ್ರಿ ವಿಚಾರವಾಗಿ ಪಕ್ಷದಲ್ಲಿ ಎದ್ದಿರುವ ಚರ್ಚೆ ಸಂಬಂಧ ಬುಧವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಸುರೇಶ್, ಗೊಂದಲ ಸೃಷ್ಟಿಸುತ್ತಿರುವವರ ವಿರುದ್ಧ ಶಿಸ್ತು, ಅಶಿಸ್ತು ಕ್ರಮ ಕೈಗೊಳ್ಳುವ ವಿಚಾರ ಪಕ್ಷದ ಹೈಕಮಾಂಡ್‍ಗೆ ಸೇರಿದ್ದು. ವರಿಷ್ಠರು ಅದನ್ನು ನೋಡಿಕೊಳ್ಳುತ್ತಾರೆ ಎಂದರು.

‘ಸಿಎಂ ಸ್ಥಾನದ ಬಗ್ಗೆ ಮಾತನಾಡುತ್ತಿರುವವರಿಗೆ ಒಳ್ಳೆಯದಾಗಲಿ. ಸದ್ಯಕ್ಕೆ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿಲ್ಲ. ಸಿಎಂ ಸ್ಥಾನ ಕಾಲಿಯೂ ಇಲ್ಲ. ಕಾಂಗ್ರೆಸ್‍ನ ಈಗಿನ ಶಾಸಕರು ಮುಂದಿನ ಶಾಸಕಾಂಗ ಪಕ್ಷದ ಸದಸ್ಯರಲ್ಲ. 2023ಕ್ಕೆ ಚುನಾವಣೆ ಇದೆ. ಚುನಾವಣೆ ಗೆಲ್ಲುವ ಬಗ್ಗೆ ಶಾಸಕರು ಕೆಲಸ ಮಾಡಬೇಕಿದೆ. ಪಕ್ಷ ಸಂಘಟನೆಗೆ ಆದ್ಯತೆ ನೀಡಬೇಕು ಎಂದು ನಾವು ಭಾವಿಸಿದ್ದೇವೆ. ಕೆಲವರು ಈಗಲೇ ಮುಖ್ಯಮಂತ್ರಿ ಆಗುವುದಾದರೆ ದೇವರು ಅವರಿಗೆ ಒಳ್ಳೆಯದು ಮಾಡಲಿ’ ಎಂದು ಸುರೇಶ್ ಹೇಳಿದರು.

ಅದು ಶಾಸಕರ ಅಭಿಪ್ರಾಯವೇ ಹೊರತು ನನ್ನ ಅಭಿಪ್ರಾಯವಲ್ಲ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುರೇಶ್, ‘ಅವರು ಅವರ ವೈಯಕ್ತಿಕ ಅಭಿಪ್ರಾಯ ಹೇಳಬಹುದು, ನಾನು ನನ್ನ ವೈಯಕ್ತಿಕ ಅಭಿಪ್ರಾಯ ಹೇಳಬಹುದು. ಆದರೆ ಮೊದಲು ಪಕ್ಷವನ್ನು ಅಧಿಕಾರಕ್ಕೆ ತರಬೇಕಲ್ಲ, ಅದು ಮುಖ್ಯ’ ಎಂದರು.

ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಬೇಕು ಎಂಬ ಶಾಸಕರ ಹೇಳಿಕೆ ಬಗ್ಗೆ ಗಮನ ಸೆಳೆದಾಗ ಉತ್ತರಿಸಿದ ಸುರೇಶ್, ‘ಚುನಾವಣೆ ನೇತೃತ್ವದ ಬಗ್ಗೆ ಚರ್ಚೆ ಮಾಡಲು ಸಮಯ ಬಹಳ ದೂರವಿದೆ. ಈಗ ಕೊರೋನ ಇದ್ದು, ಅದನ್ನು ನಿಭಾಯಿಸಲು ಏನು ಮಾಡಬೇಕು ಎಂಬುದನ್ನು ಅವರು ಹೇಳಬೇಕು’ ಎಂದು ತಿಳಿಸಿದರು.

ಕೂಸು ಹುಟ್ಟುವ ಮುಂಚೆ ಕುಲಾವಿ ಹೊಲಿದರು ಎಂಬಂತೆ, ವಿರೋಧ ಪಕ್ಷದವರು ಸಿಎಂ ಸ್ಥಾನದ ಬಗ್ಗೆ ಮಾತನಾಡುತ್ತಿರಲು ಕಾರಣ ಏನು? ಇದು ಗೊಂದಲ ಸೃಷ್ಟಿಸುವುದಿಲ್ಲವೇ ಎಂಬ ಪ್ರಶ್ನೆಗೆ, ಪ್ರತಿಕ್ರಿಯಿಸಿದ ಅವರು, ‘ಮಲಗಿದ್ದವರೆಲ್ಲ ಈಗ ಎದ್ದಿದ್ದಾರೆ, ಹೀಗಾಗಿ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ವಿರೋಧ ಪಕ್ಷದ ಸ್ಥಾನದಲ್ಲಿದ್ದು, ವಿರೋಧ ಪಕ್ಷದ ಶಾಸಕರಂತೆ ಕೆಲಸ ಮಾಡಬೇಕಿದೆ. ಅವರ ಹೇಳಿಕೆಗಳು ಬರೀ ಕಾರ್ಯಕರ್ತರಲ್ಲಿ ಮಾತ್ರವಲ್ಲ, ಎಲ್ಲರಲ್ಲೂ ಗೊಂದಲ ಉಂಟು ಮಾಡುತ್ತದೆ ಎಂದರು.

ಕೆಲವರು ಸುದ್ದಿವಾಹಿನಿಗಳಲ್ಲಿ ಕಾಣಿಸಿಕೊಳ್ಳಬೇಕು ಎಂಬ ಮನಸ್ಥಿತಿ ಉಳ್ಳವರು. ನಿಜವಾದ ಕಾಂಗ್ರೆಸ್ ನಾಯಕರಾರೂ ಈ ರೀತಿ ಮಾತನಾಡುವುದಿಲ್ಲ, ಅನಗತ್ಯ ಭಾವನೆ ವ್ಯಕ್ತಪಡಿಸುವುದಿಲ್ಲ. ಅವರು ಕಾಂಗ್ರೆಸ್ ಶಿಸ್ತನ್ನು ಕಲಿತಿರುತ್ತಾರೆ. ಅಧಿಕಾರಕ್ಕಾಗಿಯೇ ಕಾಂಗ್ರೆಸ್‍ಗೆ ಬಂದವರನ್ನು, ಅದಕ್ಕೆ ಜೋತು ಬಿದ್ದವರನ್ನು ಯಾರು, ಏನೂ ಮಾಡಲು ಸಾಧ್ಯವಿಲ್ಲ’ ಎಂದು ಸುರೇಶ್ ಮಾರ್ಮಿಕವಾಗಿ ನುಡಿದರು.

ಅಶಿಸ್ತು ತೋರಿದವರಿಗೆ ಯಾವ ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ‘ಶಿಸ್ತು, ಅಶಿಸ್ತಿನ ವಿಚಾರವನ್ನು ನಮ್ಮ ಹೈಕಮಾಂಡ್ ನೋಡಿಕೊಳ್ಳುತ್ತದೆ. ಯಾರು ಅಧಿಕಾರಕ್ಕೆ ಅಂಟಿಕೊಂಡಿದ್ದಾರೋ ಅವರು ಅಶಿಸ್ತನ್ನು ಅಭ್ಯಾಸ ಮಾಡಿಕೊಂಡಿದ್ದು, ನಿಜವಾದ ಕಾಂಗ್ರೆಸಿಗರು ಕಾಂಗ್ರೆಸ್ ಅಧಿಕಾರಕ್ಕೆ ತರುವ ಪ್ರಯತ್ನದಲ್ಲಿದ್ದಾರೆ’ ಎಂದು ಅವರು ಹೇಳಿದರು.

ಶಾಸಕಾಂಗ ಪಕ್ಷದ ನಾಯಕರು ಇದನ್ನು ನಿಯಂತ್ರಿಸಬಹುದಲ್ಲವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುರೇಶ್, ‘ನಾನು ಆ ಬಗ್ಗೆ ಪಕ್ಷದ ವೇದಿಕೆಯಲ್ಲಿ ಮಾತನಾಡುತ್ತೇನೆ. ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ, ಪಕ್ಷದ ರಾಜ್ಯ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ನೇಮಕವಾಗಿದ್ದಾರೆ. ಅವರಿಬ್ಬರೂ ಅವರವರ ಕೆಲಸ ಮಾಡುತ್ತಿದ್ದಾರೆ. ಈ ಮಧ್ಯದಲ್ಲಿರುವವರಿಗೆ ಏನು ಕೆಲಸ? ಎಂದು ಪ್ರಶ್ನಿಸಿದರು.

ಅವರು ತಮ್ಮ ಕ್ಷೇತ್ರ ಹಾಗೂ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಬೇಕಾದ ಜವಾಬ್ದಾರಿ ಇದೆ. ಕೊರೋನ ಸಮಯದಲ್ಲಿ ಆಡಳಿತ ಪಕ್ಷದ ವೈಫಲ್ಯ ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕಿದೆ. ಸಿಎಂ ಹುದ್ದೆ ಸೇರಿ ಸದ್ಯಕ್ಕೆ ಯಾವುದೇ ಸ್ಥಾನ ಖಾಲಿ ಇಲ್ಲ. ಖಾಲಿ ಆದಾಗ ಯಾರ್ಯಾರು ಚರ್ಚೆಗೆ ಬರುತ್ತಾರೋ ಅವರಿಗೆಲ್ಲ ಆಗ ಸವಾಲು ಮಾಡೋಣ ಎಂದು ಸುರೇಶ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X