Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಚಿವ ಆರ್.ಅಶೋಕ್ ಕಚೇರಿ ಸಮೀಪದಲ್ಲಿದ್ದ...

ಸಚಿವ ಆರ್.ಅಶೋಕ್ ಕಚೇರಿ ಸಮೀಪದಲ್ಲಿದ್ದ ದೇವಸ್ಥಾನದ ಕಟ್ಟಡ ಕೆಡವಿದ ಬಿಬಿಎಂಪಿ

ಅಪಾರ್ಟ್‌ಮೆಂಟ್ ನಿರ್ಮಿಸಲು ಭೂ ಮಾಫಿಯಾದಿಂದ ದೇವಸ್ಥಾನಕ್ಕೆ ಧಕ್ಕೆ: ಆರೋಪ

ವಾರ್ತಾಭಾರತಿವಾರ್ತಾಭಾರತಿ23 Jun 2021 8:48 PM IST
share
ಸಚಿವ ಆರ್.ಅಶೋಕ್ ಕಚೇರಿ ಸಮೀಪದಲ್ಲಿದ್ದ ದೇವಸ್ಥಾನದ ಕಟ್ಟಡ ಕೆಡವಿದ ಬಿಬಿಎಂಪಿ

ಬೆಂಗಳೂರು, ಜೂ.23: 40 ವರ್ಷಗಳಿಂದ ಭವ್ಯವಾಗಿ ನೆಲೆ ನಿಂತಿದ್ದ ದೇವಸ್ಥಾನದ ಜಾಗವನ್ನು ಭೂ ಮಾಫಿಯಾದೊಂದಿಗೆ ಶಾಮೀಲಾಗಿ ಬಿಬಿಎಂಪಿ ಅಧಿಕಾರಿಗಳು ಅಪಾರ್ಟ್‌ಮೆಂಟ್ ಕಟ್ಟಲು ಕೆಡವಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಕಂದಾಯ ಸಚಿವ ಆರ್.ಅಶೋಕ್ ಅವರ ಕಚೇರಿ ಸಮೀಪದ ಬನಶಂಕರಿ ಎರಡನೇ ಹಂತದ ಯಾರಬ್ ನಗರದ 9ನೇ ಮುಖ್ಯ ರಸ್ತೆಯಲ್ಲಿ ನಾಲ್ಕು ದಶಕಗಳ ಹಿಂದೆ ಗಣಪತಿ ದೇವಸ್ಥಾನ ನಿರ್ಮಿಸಲಾಗಿತ್ತು. ದೇವಾಲಯದ ಹಿಂಬಾಗದಲ್ಲಿ 40 ವರ್ಷಗಳ ಹಿಂದೆಯೇ ಪ್ರಸಾದ ಮಂದಿರವನ್ನು ನಿರ್ಮಿಸಲಾಗಿದೆ. ಅಲ್ಲಿಂದ ಇಲ್ಲಿಯವರೆಗೆ ದೇವಸ್ಥಾನದ ಜಾಗ ಯಾವುದೇ ಸಮಸ್ಯೆ ಇಲ್ಲದೇ ನಡೆದುಕೊಂಡು ಬರುತ್ತಿದೆ. ಆದರೆ ಈ ಪ್ರಸಾದ ಮಂದಿರವನ್ನು ತೆರವುಗೊಳಿಸಿ ಜಾಗವನ್ನು ತಮ್ಮ ವಶಕ್ಕೆ ನೀಡುವಂತೆ ಪಕ್ಕದಲ್ಲಿ ಅಪಾರ್ಟ್‌ಮೆಂಟ್ ನಿರ್ಮಿಸುತ್ತಿರುವ ಕೆಲವು ಪ್ರಭಾವಿಗಳು ದೇವಸ್ಥಾನದ ಟ್ರಸ್ಟಿಗಳ ಮೇಲೆ ಒತ್ತಡ ಹೇರಿದ್ದರು. ಆದರೆ ಇದಕ್ಕೆ ಆಡಳಿತ ಮಂಡಳಿ ಒಪ್ಪಿರಲಿಲ್ಲ ಎನ್ನಲಾಗಿದೆ.

ಇದೀಗ ಬಿಬಿಎಂಪಿ ಅಧಿಕಾರಿಗಳನ್ನು ಬುಟ್ಟಿಗೆ ಹಾಕಿಕೊಂಡು ಕೋವಿಡ್ ಸಂದರ್ಭದಲ್ಲಿ ಅತ್ಯಂತ ವ್ಯವಸ್ಥಿತವಾಗಿ ದೇವಸ್ಥಾನದ ಪ್ರಸಾದ ಮಂದಿರವನ್ನು ಕೆಡವಿದ್ದಾರೆ. ಇದನ್ನು ರಾಜಕಾಲುವೆ ಮೇಲೆ ನಿರ್ಮಿಸಲಾಗಿದೆ ಎಂದು ಹೇಳಿ ದೇವಸ್ಥಾನದ ಜಾಗಕ್ಕೆ ಹಾನಿ ಮಾಡಿದ್ದಾರೆ. ಇಲ್ಲಿನ ನಾಗರಕಟ್ಟೆಗೂ ಹಾನಿಯಾಗಿದ್ದು, ಸಾರ್ವಜನಿಕರು ಬಳಸುವ ಶುದ್ಧ ಕುಡಿಯುವ ನೀರಿನ ಘಟಕವನ್ನು ತೆರವು ಮಾಡುವ ಪರಿಸ್ಥಿತಿ ಎದುರಾಗಿದೆ ಎಂದು ಆರೋಪಿಸಲಾಗಿದೆ.

ಇಲ್ಲಿನ ಅರಳಿ ಮರ ಸೇರಿ ಇಡೀ ವಾತಾವರಣದ ಬಗ್ಗೆ ಸುತ್ತಮುತ್ತಲಿನ ಜನರಿಗೆ ವಿಶೇಷ ಗೌರವ ಮತ್ತು ಹೆಮ್ಮೆ ಇದೆ. ಬಿಬಿಎಂಪಿ ವರ್ತನೆ ಬಗ್ಗೆ ಆಕ್ರೋಶಗೊಂಡ ಸ್ಥಳೀಯರು ಗುಂಪುಗೂಡಿ ಗಲಾಟೆ ಮಾಡಿದ ಕಾರಣ ಬಿಬಿಎಂಪಿ ಅಧಿಕಾರಿಗಳು ಮತ್ತು ಸಿಬ್ಬಂದಿ ಇಂದು ಅಲ್ಲಿಂದ ಪಲಾಯನ ಮಾಡಿದ್ದಾರೆ ಎಂದು ತಿಳಿದುಬಂದಿದೆ.

''ನಮ್ಮ ಭಾವನೆಗಳ ಜತೆ ಚೆಲ್ಲಾಟ''

ವಿನಾಯಕ ದೇವಸ್ಥಾನದ ಟ್ರಸ್ಟ್ ನ ಅಧ್ಯಕ್ಷ ಡಾ.ಎಂ.ಆರ್.ಸಾಕೇತ್ ಕುಮಾರ್ ಈ ಕುರಿತು ಮಾಹಿತಿ ನೀಡಿ, ನಮ್ಮ ಹಿರಿಯರು ಈ ದೇವಸ್ಥಾನ ಕಟ್ಟಿಸಿದ್ದು, ಹಲವಾರು ಮಂದಿ ಇದರ ಆಡಳಿತ ಮಂಡಳಿಯ ಉಸ್ತುವಾರಿ ನೋಡಿಕೊಂಡು ಬಂದಿದ್ದಾರೆ. ಇದೀಗ ತಮ್ಮ ಕಾಲದಲ್ಲಿ ಪ್ರಸಾದ ಮಂದಿರದ ಜಾಗವನ್ನು ತಮಗೆ ಒಪ್ಪಿಸುವಂತೆ ಅಪಾರ್ಟ್‌ಮೆಂಟ್‍ನವರು ಒತ್ತಡ ಹೇರಿದ್ದರು. ಆದರೆ ನಾವು ಒಪ್ಪಿರಲಿಲ್ಲ. ಇದೀಗ ಕೋವಿಡ್ ಸಂದರ್ಭದಲ್ಲಿ ಬಿಬಿಎಂಪಿ ಅಧಿಕಾರಿಗಳನ್ನು ಮುಂದಿಟ್ಟುಕೊಂಡು ನಮ್ಮ ಭಾವನೆಗಳ ಜತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಆರೋಪಿಸಿದರು.

ಜಾಗ ತೆರವು ಮಾಡುವಂತೆ ನೋಟಿಸ್ ನೀಡಿರುವುದಾಗಿ ಬಿಬಿಎಂಪಿ ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ ನಮಗೆ ನೋಟಿಸ್ ತಲುಪಿಲ್ಲ. 40 ವರ್ಷಗಳಿಂದ ನಮಗೆ ಯಾವುದೇ ನೋಟಿಸ್ ನೀಡಿಲ್ಲ. ಈ ಜಾಗ ಎಂದೂ ವಿವಾದಕ್ಕೀಡಾಗಿರಲಿಲ್ಲ. ಇದೀಗ ಏಕಾಏಕಿ ಇವೆಲ್ಲಾ ಘಟನೆಗಳು ನಡೆಯುತ್ತಿವೆ. ಬಿಬಿಎಂಪಿ ಅಧಿಕಾರಿಗಳ ವರ್ತನೆ ಖಂಡನೀಯ ಎಂದು ಸಾಕೇತ್ ಕುಮಾರ್ ಹೇಳಿದರು.

ಸ್ಥಳೀಯರಾದ ವೆಂಕಟೇಶ್ ಮಾತನಾಡಿ, ಇದೆಲ್ಲವೂ ವಸತಿ ಸಮುಚ್ಚಯದವರ ಕಿತಾಪತಿಯಾಗಿದ್ದು, ದೇವಸ್ಥಾನದ ಜಾಗ ಕೆಡವಿರುವುದು ಅಕ್ಷ್ಯಮ್ಯ. ಈ ಜಾಗ ಸಚಿವ ಆರ್.ಅಶೋಕ್ ಅವರ ಮನೆಗೆ ಕೂಗಳತೆ ದೂರದಲ್ಲಿದ್ದು, ಸರಕಾರ ಮಧ್ಯ ಪ್ರವೇಶ ಮಾಡಿ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದನ್ನು ತಡೆಯಬೇಕು. ಹಣದ ಆಸೆಗೆ ಶಾಮೀಲಾಗಿರುವ ಬಿಬಿಎಂಪಿ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X