ಉಡುಪಿ ಜಿಲ್ಲೆಯಾದ್ಯಂತ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ

ಉಡುಪಿ, ಜೂ.23: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಜನಸಂಘದ ಸಂಸ್ಥಾಪಕ ಡಾ.ಶ್ಯಾಮಪ್ರಸಾದ್ ಮುಖರ್ಜಿ ಅವರ ಸ್ಮರಣಾರ್ಥ ಜಿಲ್ಲೆಯಾದ್ಯಂತ ನಡೆಯುವ ಸಸಿ ನೆಡುವ ಕಾರ್ಯಕ್ರಮಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಬುಧವಾರ ಇಲ್ಲಿ ಚಾಲನೆ ನೀಡಿದರು.
ಈ ಕಾರ್ಯಕ್ರಮ ಜೂ.23ರಿಂದ ಜು.6ರವರೆಗೆ ಒಟ್ಟು 14 ದಿನಗಳ ಕಾಲ ಜಿಲ್ಲೆಯಾದ್ಯಂತ ಪಕ್ಷದ ವತಿಯಿಂದ ನಡೆಯಲಿದೆ. ಈ ಮೂವರ ಶ್ಯಾಮಪ್ರಸಾದ್ ಮುಖರ್ಜಿ ಅವರ ತತ್ವಾದರ್ಶ ಹಾಗೂ ಜೀವನ ವೌಲ್ಯಗಳನ್ನು ಗೌರವಿಸಲಾಗುವುದು ಎಂದು ಸುರೇಶ್ ನಾಯಕ್ ನುಡಿದರು.
ಈ ಬೃಹತ್ ಅಭಿಯಾನದಲ್ಲಿ ಅಭಿಯಾನದಲ್ಲಿ ಪಕ್ಷದ ಎಲ್ಲ ಸ್ತರದ ಪದಾಧಿ ಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಂಡು ವ್ರಕ್ಷಾಪರೋಹಣ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿ ಗೊಳಿಸಬೇಕು ಎಂದು ಅವರು ಮನವಿ ಮಾಡಿದರು.
ಬುಧವಾರ ಬೆಳಗ್ಗೆ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಉಡುಪಿಯ ಇಂದ್ರಾಳಿ ರೈಲ್ವೆ ನಿಲ್ದಾಣದ ಪರಿಸರ ದಲ್ಲಿ ಸಸಿ ನೆಡುವ ಮೂಲಕ ವ್ರಕ್ಷಾಪರೋಹಣ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್.ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ರೈಲ್ವೆ ಇಂಜಿನಿಯರ್ ವೆಂಕಟೇಶ್, ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆಲ್ವಿನ್ ಡಿಸೋಜ ಹಾಗೂ ಇತರರು ಉಪಸ್ಥಿತರಿದ್ದರು.







