Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜನರ ಹಿತ ಕಾಪಾಡಲು ವಿಫಲವಾಗಿರುವ ಸರಕಾರ...

ಜನರ ಹಿತ ಕಾಪಾಡಲು ವಿಫಲವಾಗಿರುವ ಸರಕಾರ ಇದ್ದರೆಷ್ಟು ಹೋದರೆಷ್ಟು: ಸಿದ್ದರಾಮಯ್ಯ ಕಿಡಿ

ವಾರ್ತಾಭಾರತಿವಾರ್ತಾಭಾರತಿ23 Jun 2021 10:14 PM IST
share
ಜನರ ಹಿತ ಕಾಪಾಡಲು ವಿಫಲವಾಗಿರುವ ಸರಕಾರ ಇದ್ದರೆಷ್ಟು ಹೋದರೆಷ್ಟು: ಸಿದ್ದರಾಮಯ್ಯ ಕಿಡಿ

ಮಂಡ್ಯ, ಜೂ.23: ಜನರ ಹಿತ ಕಾಪಾಡಲು ವಿಫಲವಾಗಿರುವ ಸರಕಾರ ಇದ್ದರೆಷ್ಟು ಹೋದರೆಷ್ಟು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಕೆ.ಆರ್.ಪೇಟೆ ಪಟ್ಟಣದ ಹೇಮಾವತಿ ಬಡಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಕೊರೋನ ವಾರಿಯರ್ಸ್ ಗೆ ಆಹಾರ ಕಿಟ್ ವಿತರಿಸಿ ಅವರು ಸಮಾರಂಭ ಉದ್ದೇಶಿಸಿ ಮಾತನಾಡಿದರು. 'ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಯಾವುದೇ ರೀತಿಯ ಅಗತ್ಯ ಮೂಲಭೂತ ಸೌಕರ್ಯಗಳನ್ನು ನೀಡಿಲ್ಲ. ಜನರ ಶಾಪ ನಿಮಗೆ ತಟ್ಟದೆ ಇರುವುದಿಲ್ಲ ಎಂದು ಯಡಿಯೂರಪ್ಪ ಅವರ ವಿರುದ್ಧ ವಾಗ್ದಾಳಿ ನಡೆಸಿದರು.

ಎರಡೂವರೆ ಲಕ್ಷ ಕೋಟಿ ಬಜೆಟ್ ನಲ್ಲಿ ಕೊರೋನ ನಿಯಂತ್ರಣಕ್ಕೆ ಕಾಲು ಭಾಗ ತೆಗೆದಿಟ್ಟು, ಜನರ ಆರೋಗ್ಯ ಕಾಪಾಡಿದ್ದರೆ ಜನರು ನಿಮ್ಮನ್ನು ಮೆಚ್ಚುತ್ತಿದ್ದರು. ಕೊರೋನ ಸಮಯದಲ್ಲಿ ಕೇರಳ 20 ಸಾವಿರ ಕೋಟಿ ರೂಪಾಯಿ ಜನರಿಗಾಗಿ ಖರ್ಚು ಮಾಡಿದೆ. ತೆಲಂಗಾಣ, ಆಂಧ್ರ ಪ್ರದೇಶ ಮುಂತಾದ ನೆರೆ ರಾಜ್ಯಗಳು ಹೇಗೆ ಪರಿಸ್ಥಿತಿಯನ್ನು ನಿಭಾಯಿಸಿವೆ ಎಂಬುದನ್ನು ನೋಡಿ ಕಲಿಯಿರಿ ಎಂದರು.

ಕೇವಲ ಲೂಟಿ ಮಾಡುವುದೇ ಮಹತ್ತರವಾದ ಕೆಲಸ ಎಂದು ಭಾವಿಸಿರುವ ನಿಮಗೆ ಜನಸಾಮಾನ್ಯರ ಕಷ್ಟ ಇಲ್ಲಿ ಅರ್ಥವಾಗುತ್ತದೆ. ಯಡಿಯೂರಪ್ಪ ಮತ್ತು ಮಗ ವಿಜಯೇಂದ್ರ ಕಿಕ್ ಬ್ಯಾಕ್ ಹಣ ಪಡೆದು ಎಲ್ಲ ಇಲಾಖೆಯಲ್ಲಿಯೂ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ವಿಶ್ವನಾಥ್, ಯೋಗೇಶ್ವರ್, ಅರವಿಂದ್ ಬೆಲ್ಲದ್ ಆರೋಪಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಸರಕಾರಕ್ಕೆ ಆಕ್ಸಿಜನ್ ಕೊಡಲು ಸಾಧ್ಯವಾಗದೆ ಸಾವಿರಾರು ಸಂಖ್ಯೆಯ ಜನ ತಮ್ಮ ಪ್ರಾಣವನ್ನು ಕಳೆದುಕೊಂಡರು. ಚಾಮರಾಜನಗರದಲ್ಲಿ 36 ಜನ ತಮ್ಮ ಪ್ರಾಣ ಕಳೆದುಕೊಂಡರು. ಆದರೆ, ಆರೋಗ್ಯ ಇಲಾಖೆ ಮಂತ್ರಿ ಕೇವಲ ಮೂರು ಜನ ಎಂದು ಬೂಟಾಟಿಕೆ ಉತ್ತರ ಹೇಳಿ ನುಣುಚಿಕೊಂಡು ಕಾಲಾಹರಣ ಮಾಡಿದರು. ಅಧಿಕಾರದಲ್ಲಿರುವ ನೀವು ಮನುಷ್ಯತ್ವ ಇಲ್ಲದವರು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ನಿಮಗೆ ಅಧಿಕಾರದಲ್ಲಿರಲು ನೈತಿಕತೆ ಇಲ್ಲ. ಮುಂದಿನ ದಿನಗಳಲ್ಲಿ ಜನರು ನಿಮಗೆ ಸರಿಯಾದ ಪಾಠವನ್ನು ಕಲಿಸುತ್ತಾರೆ. ಸರಕಾರ ಮಾಡಬೇಕಾದ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಮೂರನೇ ಅಲೆಗಾದರೂ ಅಗತ್ಯ ಸಿದ್ದತೆ ಮಾಡಿಕೊಳ್ಳಿ ಎಂದು ಅವರು ಸಲಹೆ ನೀಡಿದರು.

ಕೊರೋನ ಮೂರನೇ ಅಲೆ ಕೆಲವೇ ವಾರಗಳಲ್ಲಿ ಬರಲಿದೆ ಎಂದು ತಜ್ಞರು ಹೇಳಿದ್ದಾರೆ. ಈಗಿನಿಂದಲೇ ಅಗತ್ಯ ಸಿದ್ಧತೆ ಮಾಡಿಕೊಳ್ಳದಿದ್ದರೆ ನಿಮ್ಮ ಕಥೆ ಗೋವಿಂದ. ಮಕ್ಕಳು ಭವಿಷ್ಯದ ಪ್ರಜೆಗಳು. ಅವರ ಆರೋಗ್ಯದ  ಸುರಕ್ಷತೆ ಬಹಳ ಮುಖ್ಯವಾಗಿದೆ ಎಂದರು. ಕೊರೋನ ಸಂಕಷ್ಟದ ಸಮಯದಲ್ಲಿ ಜನರ ಮಧ್ಯೆ ನಿಂತು ಕರ್ತವ್ಯ ನಿರ್ವಹಿಸದೆ ಬೇಜವಾಬ್ದಾರಿಯುತವಾಗಿ ವರ್ತಿಸುತ್ತಿರುವ ಸರಕಾರಗಳು ನಿಮಗೆ ಬೇಕೆ ಎಂದು ಜನರನ್ನು ಸಿದ್ದರಾಮಯ್ಯ ಎಚ್ಚರಿಸಿದರು.

ನಾನು ಅಧಿಕಾರದಲ್ಲಿದ್ದಾಗ ಅನೇಕ ಕಾರ್ಯಕ್ರಮಗಳನ್ನು ನೀಡಿದ್ದೇನೆ. ಯಾವುದೇ ಜಾತಿ, ಭೇದ ಮಾಡದೆ ಎಲ್ಲರಿಗೂ ಅನುಕೂಲವಾಗುವ ಕಾರ್ಯಕ್ರಮಗಳನ್ನು ನೀಡಿದ್ದೇನೆ. ಅನ್ನಭಾಗ್ಯ, ಕೃಷಿಭಾಗ್ಯ, ಕ್ಷೀರಭಾಗ್ಯ, ಶೂಭಾಗ್ಯ, ಶಾದಿಭಾಗ್ಯ, ಮೈತ್ರಿ, ಮನಸ್ವಿನಿ, ಸಾಲಮನ್ನಾ ಮಾಡಿದ್ದು ಹೀಗೆ ಹಲವಾರು ಕಾರ್ಯಕ್ರಮಗಳನ್ನು ಜನರ ಕಲ್ಯಾಣಕ್ಕಾಗಿ ಜಾರಿಗೆ ತಂದಿದ್ದೆ. ಆದರೆ, ಇಂದು ನಿಮ್ಮನ್ನು ಆಳುತ್ತಿರುವ ಸರಕಾರ ಎಲ್ಲಾ ಕಲ್ಯಾಣ ಕಾರ್ಯಕ್ರಮಗಳನ್ನು ಅವರ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಿದೆ. ಸಿಎಂ ಯಡಿಯೂರಪ್ಪ ಈ ತಾಲೂಕಿನ ಮಗ. ಬಡಜನರ ಕಷ್ಟ ಏನು ಎಂಬುದು ಗೊತ್ತು. ಆದರೂ ಜನರು ಕಷ್ಟ ಎದುರಿಸುತ್ತಿರುವಾಗ ಸಾಲಮನ್ನಾ ಮಾಡಲಿಲ್ಲ. ನನ್ನ ಸಲಹೆ ಸ್ವೀಕರಿಸಲಿಲ್ಲ. ಲಾಕ್ ಡೌನ್ ಸಮಯದಲ್ಲಿ ಜನರು ತೊಂದರೆ ಅನುಭವಿಸುತ್ತಾರೆ. ಜನರಿಗೆ ಕಷ್ಟವಾಗುತ್ತದೆ. ಪ್ರತಿ ಕುಟುಂಬಕ್ಕೆ ಹತ್ತು ಸಾವಿರ ರೂಪಾಯಿ ಮತ್ತು ಹತ್ತು ಕೆಜಿ ಅಕ್ಕಿ ನೀಡಿ ಎಂದು ಸಲಹೆ ನೀಡಿದ್ದೆ. ಆದರೆ, ನಮ್ಮ ಸಲಹೆಯನ್ನು ತೆಗೆದುಕೊಳ್ಳಲಿಲ್ಲ ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.

ಕೊರೋನ ಸಮಯದಲ್ಲಿ ವಾರಿಯರ್ಸ್ ಗಳ ಸೇವೆಯನ್ನು ಎಷ್ಟು ಹೊಗಳಿದರೂ ಕಡಿಮೆಯೇ. ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ, ಪೌರಕಾರ್ಮಿಕರು ಮತ್ತು ಪೊಲೀಸರು ಜನರ ಜೊತೆ ಇದ್ದು ಕೆಲಸ ಮಾಡಿದ್ದಾರೆ. ಕೊರೋನ ನಿಯಂತ್ರಣಕ್ಕೆ ಶ್ರಮಿಸಿದ್ದಾರೆ. ನೀವುಗಳು ಇಲ್ಲದಿದ್ದಲ್ಲಿ ಸಾವು ನೋವಿನ ಸಂಖ್ಯೆ ಇನ್ನು ಅಧಿಕವಾಗುತ್ತಿತ್ತು. ಅಂಗನವಾಡಿ ಕಾರ್ಯಕರ್ತೆಯರನ್ನು ಇಂದಿರಾಗಾಂಧಿಯವರ ಕಾಲದಲ್ಲಿ ನೇಮಕ ಮಾಡುವ ಮೂಲಕ ಉದ್ಯೋಗವನ್ನು ಒದಗಿಸಿ ಕೊಡಲಾಗಿತ್ತು ಎಂದು ಅವರು ಹೇಳಿದರು.

ಸಭೆ ಪ್ರಾರಂಭದಲ್ಲಿ ಮಾಜಿ ಸ್ಪೀಕರ್ ದಿ.ಕೃಷ್ಣ,ಸಾಹಿತಿ ದಿ.ಸಿದ್ದಲಿಂಗಯ್ಯ ಮತ್ತು ಕೊರೋನದಿಂದ ಮರಣ ಹೊಂದಿದವರಿಗೆ ಒಂದು ನಿಮಿಷ ಮೌನಾಚರಣೆ ಮಾಡಲಾಯಿತು.

ಸಭೆಯಲ್ಲಿ ಮಾಜಿ ಸಚಿವ ಎನ್.ಚಲುವರಾಯಸ್ವಾಮಿ, ಕೆಪಿಸಿಸಿ ಕಾರ್ಯಾದ್ಯಕ್ಷ ಧ್ರುವನಾರಾಯಣ, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಕಾಂಗ್ರೆಸ್ ಪಕ್ಷದ ಜನಪರ ಕೆಲಸಗಳ ಬಗ್ಗೆ ಮಾತನಾಡಿದರು.

ಸಮಾರಂಭದಲ್ಲಿ ಮಾಜಿ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ಬಿ.ಪ್ರಕಾಶ್, ಮಾಜಿ ರಾಜ್ಯಸಭಾ ಸದಸ್ಯ ರೆಹಮಾನ್ ಖಾನ್, ವೀಕ್ಷಕ ಸಂಪಂಗಿ, ಮಾಜಿ ನಿಗಮ ಮಂಡಳಿಯ ಎಂ.ಡಿ.ಕೃಷ್ಣಮೂರ್ತಿ, ಉದ್ಯಮಿ ಬಿ.ರೇವಣ್ಣ, ವಿಜಯ್ ಕುಮಾರ್, ಜಿಲ್ಲಾಮಹಿಳಾ ಘಟಕದ ಅಧ್ಯಕ್ಷೆ ಅಂಜನಾ, ತಾಲೂಕು ಘಟಕದ ಅಧ್ಯಕ್ಷೆ ಮೀನಾಕ್ಷಿ, ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರಾದ ಕಿಕ್ಕೇರಿ ಸುರೇಶ್, ನಾಗೆಂದ್ರ ಕುಮಾರ್, ಯುವ ಘಟಕದ ಅಧ್ಯಕ್ಷರು, ಪುರಸಭಾ ಸದಸ್ಯರುಗಳು, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಸುರೇಶ್ ಸೇರಿದಂತೆ ಹಲವರು ಹಾಜರಿದ್ದರು.

52 ಇಂಚಿನ ಎದೆ ಇದ್ದರೆ ಸಾಲದು.
ಮೋದಿಯವರಿಗೆ 52 ಇಂಚಿನ ಎದೆಗಾರಿಕೆ ಇದೆ ಎಂದು ಬಿಂಬಿಸುತ್ತಿದ್ದಾರೆ. ಪೈಲ್ವಾನರಿಗೂ, ಬಾಡಿ ಬಿಲ್ಡರ್ ಗಳಿಗೂ 52 ಇಂಚಿನ ಎದೆ ಇರುತ್ತದೆ. ಆದರೆ, ಏನು ಪ್ರಯೋಜನ? ಆ ಎದೆಯೊಳಗೆ ಜನರಿಗೆ ಸಹಾಯ ಮಾಡುವ ಮನಸ್ಸಿಲ್ಲದಿದ್ದರೆ ಯಾವ ಪ್ರಯೋಜನವೂ ಆಗುವುದಿಲ್ಲ.
-ಸಿದ್ದರಾಮಯ್ಯ, ವಿಪಕ್ಷ ನಾಯಕ.

"ಮನ್ಮುಲ್ ಅವ್ಯವಹಾರ ವಿಧಾನಸಭೆಯಲ್ಲಿ ಪ್ರಶ್ನಿಸುತ್ತೇನೆ.
ಮನ್ಮುಲ್‌ನಲ್ಲಿ ಹಾಲಿಗೆ ನೀರು ಪ್ರಕರಣ ತನಿಖೆಗೆ ಒತ್ತಾಯಿಸಿದ್ದೆ. ಆದರೆ, ಇದರ ಹಿಂದೆ ಬೇರೆಯವರ ಕೈವಾಡವಿದೆ. ಬಡಜನರ ಬದುಕಿನೊಡನೆ ಚೆಲ್ಲಾಟ ಆಡುತ್ತಿರುವವರಿಗೆ ಮುಂದಿನ ದಿನಗಳಲ್ಲಿ ನಿಜ ಏನೆಂದು ತೋರಿಸುತ್ತೇನೆ."
-ಸಿದ್ದರಾಮಯ್ಯ, ವಿಪಕ್ಷ ನಾಯಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X