ಮೈಸೂರಿನ ಓರ್ವ ವ್ಯಕ್ತಿಗೆ ಡೆಲ್ಟಾ ಪ್ಲಸ್ ವೈರಸ್ ದೃಢ: ಡಿಎಚ್ಓ ಕೆ.ಎಚ್.ಪ್ರಸಾದ್
ಮೈಸೂರು,ಜೂ.23: ಮೈಸೂರಿನಲ್ಲಿ ಓರ್ವ ವ್ಯಕ್ತಿಗೆ ಡೆಲ್ಟಾ ಪ್ಲಸ್ ವೈರಸ್ ಪತ್ತೆಯಾಗಿರುವುದು ದೃಢಪಟ್ಟಿದೆ. ಆದರೆ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಡಿಎಚ್ಓ ಡಾ.ಕೆ.ಎಚ್.ಪ್ರಸಾದ್ ತಿಳಿಸಿದರು.
ಈ ಸಂಬಂಧ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಒಟ್ಟು 40 ಸ್ಯಾಂಪಲ್ಗಳನ್ನು ಮೇ ತಿಂಗಳಿನಲ್ಲಿ ಬೆಂಗಳೂರಿನ ನಿಮ್ಹಾನ್ಸ್ ಲ್ಯಾಬ್ ಗೆ ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರಲ್ಲಿ ಒಬ್ಬರಿಗೆ ಡೆಲ್ಟಾ ಪ್ಲಸ್ ವೈರಸ್ ಪತ್ತೆಯಾಗಿದೆ. ತಕ್ಷಣ ಸೋಂಕಿತ ವ್ಯಕ್ತಿಗೆ ಚಿಕಿತ್ಸೆ ನೀಡಲಾಗಿದ್ದು, ಆತ ಸಂಪೂರ್ಣ ಗುಣಮುಖರಾಗಿದ್ದಾರೆ. ಹಾಗಾಗಿ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.
Next Story