Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದೇಶದ ಮೊದಲ ಪ್ರಾಣಿ ಕಲ್ಯಾಣ ಸಹಾಯವಾಣಿಗೆ...

ದೇಶದ ಮೊದಲ ಪ್ರಾಣಿ ಕಲ್ಯಾಣ ಸಹಾಯವಾಣಿಗೆ ಚಾಲನೆ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ23 Jun 2021 10:49 PM IST
share

ಬೆಂಗಳೂರು, ಜೂ. 23: `ದೇಶದಲ್ಲಿಯೇ ಮೊದಲ ಬಾರಿಗೆ ರಾಜ್ಯದಲ್ಲಿ ಸುಸಜ್ಜಿತ ಪ್ರಾಣಿಕಲ್ಯಾಣ ಸಹಾಯವಾಣಿ(ವಾರ್ ರೂಮ್) ಆರಂಭಿಸುವ ಮೂಲಕ ರೈತರು, ಜಾನುವಾರು ಸಾಕಣೆದಾರರನ್ನು ತಲುಪಲು ಮತ್ತು ಜಾನುವಾರುಗಳ ಆರೋಗ್ಯ ಮತ್ತು ಹೈನು ಉತ್ಪಾದಕತೆ ಹೆಚ್ಚಿಸುವಲ್ಲಿ ಮಹತ್ತರವಾದ ಹೆಜ್ಜೆಯನ್ನಿಟ್ಟಿದೆ' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬುಧವಾರ ಇಲ್ಲಿನ ಹೆಬ್ಬಾಳದ ಪಶು ಪಾಲನಾ ಭವನದಲ್ಲಿ ಗೋಪೂಜೆ ಮಾಡಿದ ಬಳಿಕ ಪ್ರಾಣಿ ಕಲ್ಯಾಣ ಸಹಾಯವಾಣಿಗೆ (ವಾರ್ ರೂಮ್) ಚಾಲನೆ ನೀಡಿ ಮಾತನಾಡಿದ ಅವರು, ದೇಶದ ಜಿಡಿಪಿಗೆ ಪಶುಸಂಗೋಪನೆ ಕೊಡುಗೆ ದೊಡ್ಡದು. ಗ್ರಾಮೀಣ ಪ್ರದೇಶದ ಜನರ ಆರ್ಥಿಕ ಸಂಪನ್ಮೂಲವೂ ಆಗಿರುವ ಜಾನುವಾರುಗಳ ಸುರಕ್ಷತೆಗೆ ಸರಕಾರ ವಿಶೇಷ ಆಸ್ಥೆ ವಹಿಸಲಿದೆ ಎಂದು ತಿಳಿಸಿದರು.

ಇದೇ ವೇಳೆ ಮಾತನಾಡಿದ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್, ವಾರ್ ರೂಮ್ ದಿನದ 24 ಗಂಟೆ ಕಾರ್ಯನಿರ್ವಹಿಸಲಿದೆ. ಪ್ರಾಣಿ ಕಲ್ಯಾಣ ಸಹಾಯವಾಣಿ ರೈತರಿಗೆ ವರದಾನ. ರೈತರ ಆಪತ್ಬಾಂಧವ ಎಂದರೂ ತಪ್ಪಾಗುವುದಿಲ್ಲ. ಪಶುಸಂಗೋಪನೆ ಇಲಾಖೆಯ ಜಾನುವಾರು ಆರೋಗ್ಯ ಸೇವೆಗಳು ರೈತರ ಮನೆ ಬಾಗಿಲನ್ನು ತಲುಪಿವೆ. ಜಾನುವಾರುಗಳ ಆರೋಗ್ಯ ಕಾಪಾಡುವಲ್ಲಿ ಇಲಾಖೆ ಹೆಚ್ಚು ಶ್ರಮವಹಿಸುತ್ತಿದೆ. ಈಗ ಉದ್ಘಾಟನೆಗೊಂಡ ಪ್ರಾಣಿ ಕಲ್ಯಾಣ ಸಹಾಯವಾಣಿ ಉಪಯೋಗವನ್ನು ಎಲ್ಲ ರೈತರು ಪಡೆದುಕೊಳ್ಳಬೇಕು' ಎಂದು ಮನವಿ ಮಾಡಿದರು.

ವಿಶೇಷತೆಗಳು: ಪ್ರಾಣಿ ಕಲ್ಯಾಣ ಸಹಾಯವಾಣಿ ಸಂಖ್ಯೆ 8277100200. ಹೆಬ್ಬಾಳದಲ್ಲಿರುವ ಪಶುಪಾಲನಾ ಭವನದ 6ನೆ ಮಹಡಿಯಲ್ಲಿ ಪ್ರಾಣಿ ಕಲ್ಯಾಣ ಸಹಾಯವಾಣಿ ಸ್ಥಾಪಿಸಲಾಗಿದೆ. ಸುಮಾರು 45 ಲಕ್ಷ ರೂ.ವೆಚ್ವದಲ್ಲಿ ವಾರ್ ರೂಮ್ ನಿರ್ಮಾಣವಾಗಿದೆ. ಜಾನುವಾರುಗಳ ರೋಗ, ಪ್ರಕೃತಿ ವಿಕೋಪ ಮತ್ತು ಮಾನವನಿಂದ ಜಾನುವಾರುಗಳಿಗೆ ಉಂಟಾಗಬಹುದಾದ ಹಾನಿ ಮತ್ತು ಕ್ರೌರ್ಯಗಳಿಂದ ಜಾನುವಾರುಗಳನ್ನು ರಕ್ಷಿಸಲು ಹಾಗೂ ಅವುಗಳ ಅರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ 24/7 ಪ್ರಾಣಿ ಕಲ್ಯಾಣ ಸಹಾಯವಾಣಿಯು ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಗಿದೆ.

ಪ್ರಾಣಿ ಕಲ್ಯಾಣ ಸಹಾಯವಾಣಿಯು ದೂರವಾಣಿ/ ವಾಟ್ಸಪ್ ಟ್ವಿಟರ್/ಫೇಸ್‍ಬುಕ್/ಇನ್ಸ್ಟಾಗ್ರಾಂ/ಇ-ಮೇಲ್ ಇತ್ಯಾದಿಗಳ ಮೂಲಕ ಸ್ವೀಕರಿಸಿದ ಕರೆ/ದೂರು/ ಪ್ರಶ್ನೆಗಳ ಸಂಖ್ಯೆಗಳು ಮತ್ತು ಈ ಕುರಿತಂತೆ ಕೈಗೊಂಡ ಕ್ರಮಗಳ ಕುರಿತು ಇಲಾಖೆಯ ವೆಬ್ಸೈಟ್ನಲ್ಲಿ ದೈನಂದಿನ ಅಂಕಿ ಅಂಶಗಳನ್ನು ಪ್ರಕಟಿಸಲಾಗುತ್ತದೆ. ಹೈನುಗಾರಿಕೆ ಕುರಿ, ಮೇಕೆಗಳ ಸಾಕಾಣಿಕೆ, ಮೊಲ ಸಾಕಾಣಿಕೆ, ಹಂದಿ ಸಾಕಾಣಿಕೆ, ಕೋಳಿ ಸಾಕಾಣಿಕೆ ತರಬೇತಿಗಳ ಬಗ್ಗೆ ಮಾಹಿತಿ ನೀಡುವುದು.

ಜಾನುವಾರು ಸಾಂಕ್ರಾಮಿಕ ರೋಗಗಳ ವಿವರ ರೋಗೋದ್ರೇಕ ಸಮಯದಲ್ಲಿ ಅವುಗಳ ಹತೋಟಿ ಹಾಗೂ ನಿಯಂತ್ರಣ ಮತ್ತು ಚಿಕಿತ್ಸೆ ಕಾರ್ಯಕ್ರಮಗಳ ಬಗ್ಗೆ ಮಾಹಿತಿ. ತುರ್ತು ಚಿಕಿತ್ಸೆಗಾಗಿ ಬಂದ ಕರೆಗಳಿಗೆ ಹತ್ತಿರವಿರುವ ಪಶುವೈದ್ಯ ಸಂಸ್ಥೆಯ ಸಿಬ್ಬಂದಿ /ಅಧಿಕಾರಿಗಳಿಗೆ ವರ್ಗಾಯಿಸಿ ಚಿಕಿತ್ಸೆ ನೀಡಲು ಮತ್ತು ಕ್ರಮ ತೆಗೆದುಕೊಳ್ಳಲು ಸಂಬಂಧಿಸಿದವರಿಗೆ ಸೂಚಿಸುವುದು ಹಾಗೂ ಅನುಪಾಲನೆ ಮಾಡುವುದು.

ಜಾನುವಾರು ಹತ್ಯೆ ಪ್ರತಿಬಂದಕ ಮತ್ತು ಜಾನುವಾರು ಸಂರಕ್ಷಣೆ ಕಾಯ್ದೆ ಜಾರಿಗೊಳಿಸುವ ಸಂಬಂಧ ಸೂಕ್ತ ಸಲಹೆ ಹಾಗೂ ಮಾಹಿತಿಯನ್ನು ನೀಡುವುದು. ಇಲಾಖೆಯ 42,12 ಸಂಸ್ಥೆಗಳು, 2,900 ಪಶು ವೈದ್ಯರು ಮತ್ತು 2,200 ಇತರೆ ಸಿಬ್ಬಂದಿ ಮೂಲಕ ಸೇವೆ ಲಭವಾಗಲಿದೆ. ತಂತ್ರಜ್ಞಾನ ಬಳಸಿ ಗೋಶಾಲೆಗಳ ನಿರ್ವಹಣೆ ಮತ್ತು ಮಾಹಿತಿ ನೀಡುವುದು.ಗೋಹತ್ಯೆ ಪ್ರತಿಬಂಧಕ ಕಾಯ್ದೆ ಅನುಷ್ಟಾನದ ಕುರಿತಾಗಿ ಸಾರ್ವಜನಿಕರಿಂದ ಬರುವ ದೂರುಗಳನ್ನು ಆಯಾ ಕ್ಷೇತ್ರದ ವ್ಯಾಪ್ತಿಗೆ ಬರುವ ಪೊಲೀಸ್ ಠಾಣೆಗೆ ಮಾಹಿತಿ ನೀಡುವುದು. ಪಶುಸಂಜೀವಿನಿ, ಅಂಬುಲೇಟರಿ ಕ್ಲಿನಿಕ್‍ಗಳನ್ನು ತಜ್ಞ ವೈದ್ಯರೊಂದಿಗೆ ಚಿಕಿತ್ಸೆಗೆ  ವ್ಯವಸ್ಥೆ ಮಾಡುವುದು ಎಂದು ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X