ಅನುಮತಿ ಇಲ್ಲದೆ ಯಾವುದೇ ಕಾರ್ಯಕ್ರಮ ನಡೆಸಿದರೆ ಕ್ರಮ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ಜೂ. 24: ಜಿಲ್ಲೆಯ ಪಾಸಿಟಿವಿಟಿ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಸರಕಾರ ಲಾಕ್‌ಡೌನ್ ಸಡಿಲಿಕೆ ಮಾಡಿರುವು ದರ ದುರುಪಯೋಗ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ.
ಜಿಲ್ಲೆಯ ಅಲ್ಲಲ್ಲಿ ಕಾರ್ಯಕ್ರಮಗಳು ನಡೆಯುತ್ತಿವೆ. ಈ ಕಾರ್ಯಕ್ರಮಗಳಿಗೆ ಅನುಮತಿ ಕೊಟ್ಟವರಾರು ? ಹೋಟೆಲುಗಳಲ್ಲಿ 6 ಗಂಟೆ ತನಕ ಜನರು ಸೇರುತ್ತಾರೆ. ಬಸ್ ಗಳಲ್ಲಿ 50ಕ್ಕಿಂತ ಹೆಚ್ಚು ಪ್ರಯಾಣಿಕರು ಕಂಡು ಬರುತ್ತಿದ್ದಾರೆ. ರಾಜಕೀಯ ಪಕ್ಷಗಳಿಗೆ ಕಾರ್ಯಕ್ರಮ ನಡೆಸಲು ಅನುಮತಿ ಕೊಟ್ಟವರು ಯಾರು ? ಎಂದವರು ವೀಡಿಯೊ ಹೇಳಿಕೆಯೊಂದರಲ್ಲಿ ಪ್ರಶ್ನಿಸಿದ್ದಾರೆ.
ಲಾಕ್‌ಡೌನ್ ಸಡಿಲಿಕೆಯನ್ನು ಯಾರೂ ದುರುಪಯೋಗ ಮಾಡಬಾರದು. ಒಂದು ವೇಳೆ ದುರುಪಯೋಗ ಮಾಡಿದರೆ ಅಂಥವರ ವಿರುದ್ಧ ಎಪಿಡೆಮಿಕ್ ಆಕ್ಟ್ ನಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್
ಮತ್ತೊಮ್ಮೆ ಎಚ್ಚರಿಕೆ ನೀಡಿದ್ದಾರೆ.
Next Story







