ಸೀಡಿ ಪ್ರಕರಣ: ಸಂತ್ರಸ್ತ ಯುವತಿಯನ್ನು ಬಂಧಿಸದಂತೆ ಮಾಡಿರುವ ಮನವಿ ಪುರಸ್ಕರಿಸದ ಹೈಕೋರ್ಟ್

ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣದಲ್ಲಿ ಸಂತ್ರಸ್ತ ಯುವತಿಯನ್ನು ಬಂಧಿಸದಂತೆ ಎಸ್‌ಐಟಿಗೆ ನಿರ್ದೇಶಿಸಬೇಕು ಎಂದು ಮಾಡಿರುವ ಮನವಿಯನ್ನು ಪುರಸ್ಕರಿಸಲು ಹೈಕೋರ್ಟ್ ನಿರಾಕರಿಸಿದೆ.
ಆರೋಪಿತರು ನಕಲಿ ಸೀಡಿ ಸೃಷ್ಟಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ರಮೇಶ್ ಜಾರಕಿಹೊಳಿ ದಾಖಲಿಸಿರುವ ಎಫ್‌ಐಆರ್ ರದ್ದು ಕೋರಿ ಯುವತಿ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ಜಾರಕಿಹೊಳಿ ದಾಖಲಿಸಿರುವ ದೂರಿನ ಸಂಬಂಧ ತನಿಖೆ ನಡೆಸುತ್ತಿರುವ ಎಸ್‌ಐಟಿ ಪೊಲೀಸರು ಅರ್ಜಿದಾರ ಯುವತಿಯನ್ನು ಬಂಧಿಸುವ ಸಾಧ್ಯತೆಗಳಿವೆ. ಇದರಿಂದ ಯುವತಿ ಬಂಧನ ಭೀತಿಯಲ್ಲಿದ್ದಾರೆ. ಇನ್ನು, ಯುವತಿ ನೀಡಿದ ದೂರಿನಡಿ ರಮೇಶ್ ಜಾರಕಿಹೊಳಿ ಬಂಧಿಸಿಲ್ಲ. ಹೀಗಾಗಿ, ಯುವತಿಯನ್ನು ಬಂಧಿಸದಂತೆ ಎಸ್‌ಐಟಿಗೆ ನಿರ್ದೇಶಿಸಬೇಕು ಎಂದು ಕೋರಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಯುವತಿಯನ್ನು ಬಂಧಿಸದಂತೆ ಸೂಚಿಸಲು ಸಾಧ್ಯವಿಲ್ಲ. ಬೇಕಿದ್ದರೆ ನಿರೀಕ್ಷಣಾ ಜಾಮೀನು ಕೋರಿ ಪ್ರತ್ಯೇಕ ಅರ್ಜಿ ಸಲ್ಲಿಸಬಹುದು ಎಂದು ಸೂಚಿಸಿತು.





